ಗೋಣಿಕೊಪ್ಪಲು, ಏ. ೧೩: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕೊಡಗಿನ ಗೋಣಿಕೊಪ್ಪ, ಪೊನ್ನಂಪೇಟೆ, ಹುದಿಕೇರಿ, ಟಿ.ಶೆಟ್ಟಿಗೇರಿ, ಕುಟ್ಟ ಸೇರಿದಂತೆ ಹಲವು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬಿರುಸಿನ ಪ್ರಚಾರ ನಡೆಸಲಾಯಿತು. ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷö್ಮಣ್ ಮತಯಾಚನೆ ನಡೆಸಿದರು. ಗೋಣಿಕೊಪ್ಪ ಹಾಗೂ ಪೊನ್ನಂಪೇಟೆ ಪಟ್ಟಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಗೋಣಿಕೊಪ್ಪ ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಕ್ಷೇತ್ರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಕಾಣುತ್ತಿದೆ. ಜನರ ಒಲವು ಈ ಬಾರಿ ಕಾಂಗ್ರೆಸ್ ಪರವಾಗಿದೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮತದಾರರ ಮನೆ ಬಾಗಿಲಿಗೆ ತೆರಳಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಹಿ ಮಾಡಿದ ಗ್ಯಾರಂಟಿ ಕಾರ್ಡ್ಗಳನ್ನು ನೀಡುವ ಮೂಲಕ ಮತಯಾಚನೆ ನಡೆಸಲಾಗಿತ್ತು. ಈ ಸಂದರ್ಭ ಬಿಜೆಪಿ ಪಕ್ಷದವರು ಇದನ್ನು ಲೇವಡಿ ಮಾಡಿದ್ದರು. ರಾಜ್ಯದಲ್ಲಿ ಸರ್ಕಾರ ಬಂದ ಕೂಡಲೇ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರ ಸರ್ಕಾರ ಇದೆ ಎಂಬ ಸಂದೇಶ ನೀಡಲಾಗಿತ್ತು. ಈ ಯೋಜನೆಯಿಂದ ಅಸಂಖ್ಯಾತ ಕುಟುಂಬಗಳಿಗೆ ಫಲ ತಲುಪುತ್ತಿವೆ. ಬಹುತೇಕ ಕುಟುಂಬಗಳಿಗೆ ಯೋಜನೆಯು ಸದ್ಬಳಕೆಯಾಗುತ್ತಿದೆ ಎಂದರು.

ಕರ್ನಾಟಕ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸತ್ಯವನ್ನು ಜನರ ಮುಂದಿಟ್ಟಿದ್ದೇವೆ. ಮುಂದಿನ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಕೊಡಗು ಜಿಲ್ಲೆಯಿಂದ ಹೆಚ್ಚಿನ ಮತಗಳನ್ನು ಲೋಕಸಭಾ ಅಭ್ಯರ್ಥಿಗೆ ನೀಡುವ ಆಶಾಭಾವನೆ ಹೊಂದಿದ್ದೇವೆ. ವೀರಾಜಪೇಟೆ ಕ್ಷೇತ್ರ ಸೇರಿದಂತೆ ಕೊಡಗಿನಲ್ಲಿ ೩೦೦ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಹಣ ಉಳ್ಳವರ ಪರ ನಿಂತಿದ್ದು ಬಡವರ ಬಗ್ಗೆ ಕಾಳಜಿ ಇಲ್ಲದಿರುವುದನ್ನು ಜನರು ನೋಡುತ್ತಿದ್ದಾರೆ. ವಿದ್ಯಾವಂತರು ಉದ್ಯೋಗ ವಂಚಿತರಾಗಿದ್ದಾರೆ. ಕೇವಲ ಸುಳ್ಳಿನ ಸರಮಾಲೆಯನ್ನೇ ಜನರ ಮುಂದಿಟ್ಟು ಭಾವನಾತ್ಮಕವಾಗಿ ಇಲ್ಲಿಯ ತನಕ ಮತ ಪಡೆದು ಅಧಿಕಾರ ನಡೆಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಗಣ್ಯರು ಪಾಲ್ಗೊಂಡು ಮಾತನಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಮಾತನಾಡಿ, ಮುಂದಿರುವ ಚುನಾವಣೆ ಎಲ್ಲರ ಭವಿಷ್ಯವನ್ನು ನಿರ್ಧರಿಸುವ ಅತೀ ದೊಡ್ಡ ಚುನಾವಣೆಯಾಗಿದೆ. ಹಲವು ರಾಜ್ಯಗಳಲ್ಲಿ ಐಟಿ, ಈಡಿ, ಹಾಗೂ ಸಿಬಿಐಗಳನ್ನು ದುರುಪಯೋU Àಪಡಿಸಿಕೊಂಡು ಮುಖ್ಯಮಂತ್ರಿಗಳನ್ನು ಜೈಲಿಗೆ ಅಟ್ಟುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಆ ಮೂಲಕ ಬಿಜೆಪಿ ಪಕ್ಷಕ್ಕೆ ಬಲವಂತವಾಗಿ ಸೇರ್ಪಡೆಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದರಿಂದ ಕೇಂದ್ರದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ಇದರಿಂದ ಕೊಡಗಿನಲ್ಲಿ ಮತ್ತಷ್ಟು ಅಭಿವೃದ್ಧಿ ಗೋಣಿಕೊಪ್ಪಲು, ಏ. ೧೩: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕೊಡಗಿನ ಗೋಣಿಕೊಪ್ಪ, ಪೊನ್ನಂಪೇಟೆ, ಹುದಿಕೇರಿ, ಟಿ.ಶೆಟ್ಟಿಗೇರಿ, ಕುಟ್ಟ ಸೇರಿದಂತೆ ಹಲವು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬಿರುಸಿನ ಪ್ರಚಾರ ನಡೆಸಲಾಯಿತು. ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷö್ಮಣ್ ಮತಯಾಚನೆ ನಡೆಸಿದರು. ಗೋಣಿಕೊಪ್ಪ ಹಾಗೂ ಪೊನ್ನಂಪೇಟೆ ಪಟ್ಟಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಗೋಣಿಕೊಪ್ಪ ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಕ್ಷೇತ್ರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಕಾಣುತ್ತಿದೆ. ಜನರ ಒಲವು ಈ ಬಾರಿ ಕಾಂಗ್ರೆಸ್ ಪರವಾಗಿದೆ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮತದಾರರ ಮನೆ ಬಾಗಿಲಿಗೆ ತೆರಳಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಸಹಿ ಮಾಡಿದ ಗ್ಯಾರಂಟಿ ಕಾರ್ಡ್ಗಳನ್ನು ನೀಡುವ ಮೂಲಕ ಮತಯಾಚನೆ ನಡೆಸಲಾಗಿತ್ತು. ಈ ಸಂದರ್ಭ ಬಿಜೆಪಿ ಪಕ್ಷದವರು ಇದನ್ನು ಲೇವಡಿ ಮಾಡಿದ್ದರು. ರಾಜ್ಯದಲ್ಲಿ ಸರ್ಕಾರ ಬಂದ ಕೂಡಲೇ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರ ಸರ್ಕಾರ ಇದೆ ಎಂಬ ಸಂದೇಶ ನೀಡಲಾಗಿತ್ತು. ಈ ಯೋಜನೆಯಿಂದ ಅಸಂಖ್ಯಾತ ಕುಟುಂಬಗಳಿಗೆ ಫಲ ತಲುಪುತ್ತಿವೆ. ಬಹುತೇಕ ಕುಟುಂಬಗಳಿಗೆ ಯೋಜನೆಯು ಸದ್ಬಳಕೆಯಾಗುತ್ತಿದೆ ಎಂದರು.

ಕರ್ನಾಟಕ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸತ್ಯವನ್ನು ಜನರ ಮುಂದಿಟ್ಟಿದ್ದೇವೆ. ಮುಂದಿನ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಕೊಡಗು ಜಿಲ್ಲೆಯಿಂದ ಹೆಚ್ಚಿನ ಮತಗಳನ್ನು ಲೋಕಸಭಾ ಅಭ್ಯರ್ಥಿಗೆ ನೀಡುವ ಆಶಾಭಾವನೆ ಹೊಂದಿದ್ದೇವೆ. ವೀರಾಜಪೇಟೆ ಕ್ಷೇತ್ರ ಸೇರಿದಂತೆ ಕೊಡಗಿನಲ್ಲಿ ೩೦೦ ಕೋಟಿಗೂ ಅಧಿಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಹಣ ಉಳ್ಳವರ ಪರ ನಿಂತಿದ್ದು ಬಡವರ ಬಗ್ಗೆ ಕಾಳಜಿ ಇಲ್ಲದಿರುವುದನ್ನು ಜನರು ನೋಡುತ್ತಿದ್ದಾರೆ. ವಿದ್ಯಾವಂತರು ಉದ್ಯೋಗ ವಂಚಿತರಾಗಿದ್ದಾರೆ. ಕೇವಲ ಸುಳ್ಳಿನ ಸರಮಾಲೆಯನ್ನೇ ಜನರ ಮುಂದಿಟ್ಟು ಭಾವನಾತ್ಮಕವಾಗಿ ಇಲ್ಲಿಯ ತನಕ ಮತ ಪಡೆದು ಅಧಿಕಾರ ನಡೆಸಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಗಣ್ಯರು ಪಾಲ್ಗೊಂಡು ಮಾತನಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಮಾತನಾಡಿ, ಮುಂದಿರುವ ಚುನಾವಣೆ ಎಲ್ಲರ ಭವಿಷ್ಯವನ್ನು ನಿರ್ಧರಿಸುವ ಅತೀ ದೊಡ್ಡ ಚುನಾವಣೆಯಾಗಿದೆ. ಹಲವು ರಾಜ್ಯಗಳಲ್ಲಿ ಐಟಿ, ಈಡಿ, ಹಾಗೂ ಸಿಬಿಐಗಳನ್ನು ದುರುಪಯೋU Àಪಡಿಸಿಕೊಂಡು ಮುಖ್ಯಮಂತ್ರಿಗಳನ್ನು ಜೈಲಿಗೆ ಅಟ್ಟುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಆ ಮೂಲಕ ಬಿಜೆಪಿ ಪಕ್ಷಕ್ಕೆ ಬಲವಂತವಾಗಿ ಸೇರ್ಪಡೆಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದರಿಂದ ಕೇಂದ್ರದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ಇದರಿಂದ ಕೊಡಗಿನಲ್ಲಿ ಮತ್ತಷ್ಟು ಅಭಿವೃದ್ಧಿ