ಮಡಿಕೇರಿ, ಏ. ೧೪: ಮಡಿ ಕೇರಿಯ ರಾಜೇಶ್ವರಿ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಸಮಾರಂಭದಲ್ಲಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಮತ್ತು ಕಾರ್ಯದರ್ಶಿಗಳಾದ ಸಚ್ಚಿನ್ ವಾಸುದೇವ್, ಪ್ರಾಂಶುಪಾಲೆ ಲಕ್ಷಿö್ಮ ಸಚ್ಚಿನ್, ಉಪಪ್ರಾಂಶುಪಾಲ ಪಿ.ಕೆ. ಮಂದಣ್ಣ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಪೂಜಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಂದ ನಡೆಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಸಚ್ಚಿನ್ ವಾಸುದೇವ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಶಿಕ್ಷಕಿ ಪಾರ್ವತಿ ಸ್ವಾಗತಿಸಿದರು. ಶಿಕ್ಷಕಿ ಡಯಾನ ವಂದಿಸಿದರು. ಶಿಕ್ಷಕಿಯರಾದ ಪ್ರಕೃತಿ, ಅಫ್ಸಿಯಾ ಮತ್ತು ರಚನಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪೋಷಕರು ಮತ್ತು ವಿದ್ಯಾಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.