ಮಡಿಕೇರಿ, ಏ. ೧೩: ಕರಿಕೆ ಗ್ರಾಮದಲ್ಲಿ ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರಿಕೆ ವ್ಯಾಪ್ತಿಯ ಕುಂಡತ್ತಿಕಾನ, ಬಾಳೆಬಳಪುö್ಪ, ಕುಡಿಯಂಗಲ್ಲು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದ ಪ್ರಮುಖರು ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಜನವಸತಿ ಪ್ರದೇಶದ ಕೆಲವು ಮನೆ ಮತ್ತು ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ದಂಧೆ ನಿರಂತರವಾಗಿ ನಡೆಯುತ್ತಿದ್ದು, ಸಂಬAಧಪಟ್ಟ ಇಲಾಖೆಗೆ ದೂರು ನೀಡಿದರೆ ದಂಧೆಕೋರರು ಅಧಿಕಾರಿಗಳು ಸ್ಥಳಕ್ಕೆ ಬರುವ ಮಾಹಿತಿ ಪಡೆದುಕೊಂಡು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಸಾಕ್ಷಿ ಸಹಿತ ಎಲ್ಲೂ ಸಿಕ್ಕಿ ಹಾಕಿಕೊಳ್ಳುತ್ತಿಲ್ಲವೆಂದು ಆರೋಪಿಸಿದರು.
ಈ ಬಗ್ಗೆ ಸಂಬAಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದರೂ ಸ್ಪಂದನ ದೊರೆತಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.