ಗೋಣಿಕೊಪ್ಪಲು, ಏ. ೧೫: ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಸದೃಢಗೊಳ್ಳುತ್ತಿದ್ದು ಮುಂದೆಯೂ ಪಕ್ಷ ಸಂಘಟನೆ ಮತ್ತಷ್ಟು ಗಟ್ಟಿಯಾಗಬೇಕು. ಇದರಿಂದ ಪಕ್ಷಕ್ಕೆ ಭದ್ರಬುನಾದಿ ಆಗಲಿದೆ. ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ ಎಂಬುವವರಿಗೆ ಇದೀಗ ಪಕ್ಷ ಸಂಘಟನೆ ಮೂಲಕ ಸಂದೇಶ ನೀಡಲಾಗಿದೆ. ಪಕ್ಷದ ಚಟುವಟಿಕೆಗಳು ನಿರಂತರವಾಗಿರಲಿ. ಬೂತ್ ಮಟ್ಟದ ಅಧ್ಯಕ್ಷರು ಸಕ್ರಿಯರಾಗಿ ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿಯನ್ನು ಗೋಣಿಕೊಪ್ಪದಲ್ಲಿ ಉದ್ಘಾಟಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಮುಂದಿನ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಉಳಿದಿದ್ದು ಪಕ್ಷದ ಕಾರ್ಯಕರ್ತರು ಸಮಯವನ್ನು ವ್ಯರ್ಥ ಮಾಡದೆ ಪ್ರತಿ ಮನೆಗಳಿಗೆ ತೆರಳಿ ಸರ್ಕಾರದ ಯೋಜನೆಗಳನ್ನು ಮನದಟ್ಟು ಮಾಡುವ ಮೂಲಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷö್ಮಣ್ ಅವರಿಗೆ ಮತ ನೀಡುವಂತೆ ಮನವೊಲಿಸುವ ಕೆಲಸ ಮಾಡುವಂತೆ ತಿಳಿಸಿದರು.
ವಿರೋಧ ಪಕ್ಷ ಬಿಜೆಪಿಯು ಮನಬಂದAತೆ ಮಾತನಾಡುತ್ತಿದೆ ಆದರೆ ಕಾರ್ಯಕರ್ತರು ಇಂತಹ ಮಾತಿಗೆ ಮನ್ನಣೆ ನೀಡಬಾರದು ಕ್ಷೇತ್ರದ ಅಭಿವೃದ್ದಿ ಹಾಗೂ ಸರ್ಕಾರದ ಯೋಜನೆಗಳು ಜನತೆಗೆ ಯಾವ ರೀತಿ ಉಪಯೋಗವಾಗುತ್ತಿದೆ ಎಂಬುದರ ಬಗ್ಗೆ ಹೆಚ್ಚಾಗಿ ತಿಳುವಳಿಕೆ ನೀಡುವ ಮೂಲಕ ಪ್ರತಿ ಮನೆಯಿಂದ ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಬೀಳುವಂತೆ ಮಾಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಈ ಜವಾಬ್ದಾರಿಯನ್ನು ಕಾರ್ಯಕರ್ತರು ಕೈಗೊಳ್ಳುವಂತೆ ಈ ವೇಳೆ ಮನವಿ ಮಾಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ ಗೋಣಿಕೊಪ್ಪ ನಗರವು ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಮತಗಳು ಈ ಭಾಗದಿಂದ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಎಲ್ಲಾ ಕಾರ್ಯಕರ್ತರನ್ನು ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡಬೇಕು. ಯಾವುದೇ ನ್ಯೂನತೆಗಳಿದ್ದರೂ ಪಕ್ಷದ ಹಿರಿಯರಿಗೆ ತಿಳಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ಗೋಣಿಕೊಪ್ಪ ನಗರ ಕಾಂಗ್ರೆಸ್ನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಗರಿಕರಾದ ಪೆಮ್ಮಂಡ ಪೊನ್ನಪ್ಪ ಮಾತನಾಡಿದರು. ನಗರ ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾದ ಅಜಿತ್ ಅಯ್ಯಪ್ಪ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರಾದ ಶಮೀರ್, ಶರತ್ಕಾಂತ್, ಎ.ಜೆ. ಬಾಬು, ತೆರೆಸವಿಕ್ಟರ್, ಬಾನಂಡ ಪ್ರಥ್ವಿ, ಚಿನ್ನಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ರೆಹಮಾನ್ ಬಾಪು, ಪಕ್ಷದ ಪ್ರಮುಖರಾದ ರಾಜಶೇಖರ್, ಪಿ.ಕೆ. ಪ್ರವೀಣ್, ನಾಯಂದರ ಶಿವಾಜಿ, ಎಂ.ಮAಜುಳ, ಧನ್ಯ, ಖಾಲಿದ್, ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ನ ಅಬ್ದುಲ್ ಸಮ್ಮದ್ ಸ್ವಾಗತಿಸಿ ವಂದಿಸಿದರು.ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಗರಿಕರಾದ ಪೆಮ್ಮಂಡ ಪೊನ್ನಪ್ಪ ಮಾತನಾಡಿದರು. ನಗರ ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾದ ಅಜಿತ್ ಅಯ್ಯಪ್ಪ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರಾದ ಶಮೀರ್, ಶರತ್ಕಾಂತ್, ಎ.ಜೆ. ಬಾಬು, ತೆರೆಸವಿಕ್ಟರ್, ಬಾನಂಡ ಪ್ರಥ್ವಿ, ಚಿನ್ನಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ರೆಹಮಾನ್ ಬಾಪು, ಪಕ್ಷದ ಪ್ರಮುಖರಾದ ರಾಜಶೇಖರ್, ಪಿ.ಕೆ. ಪ್ರವೀಣ್, ನಾಯಂದರ ಶಿವಾಜಿ, ಎಂ.ಮAಜುಳ, ಧನ್ಯ, ಖಾಲಿದ್, ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ನ ಅಬ್ದುಲ್ ಸಮ್ಮದ್ ಸ್ವಾಗತಿಸಿ ವಂದಿಸಿದರು.