ಸೋಮವಾರಪೇಟೆ: ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ, ದಲಿತ ಚಳವಳಿಯ ಪಿತಾಮಹಾ ಎಂದು ಪರಿಗಣಿಸಲಾಗಿದೆ. ಅವರು ನೀಡಿದ ಸಂವಿಧಾನದ ಹಕ್ಕುಗಳಿಂದ ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಮುಖ್ಯ ಶಿಕ್ಷಕರಾದ ಶಿರಂಗಾಲ ಲೋಕೇಶ್ ಅಭಿಪ್ರಾಯಿಸಿದರು.

ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.

ಮಾನವ ಧರ್ಮದ ಪ್ರತಿಪಾದಕ, ಸಮಾಜ ಸುಧಾರಕ, ಸಂವಿಧಾನ ತಜ್ಞ, ಮಾನವ ಹಕ್ಕುಗಳ ಹೋರಾಟಗಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿ ಸಿಕೊಳ್ಳಬೇಕು.

ಅವರು ಭಾರತದಲ್ಲಿಯ ಜಾತಿ ವ್ಯವಸ್ಥೆ, ತಾರತಮ್ಯ ಮತ್ತು ದಬ್ಬಾಳಿಕೆಯ ವಿರುದ್ಧ ಹೋರಾಟ ಮಾಡಿ, ನ್ಯಾಯ ಒದಗಿಸಿಕೊಟ್ಟ ಮಹಾನ್ ಚೇತನ ಎಂದು ಬಣ್ಣಿಸಿದರು.

ಅಂಬೇಡ್ಕರ್ ಅವರು ಸ್ವಾತಂತ್ರ‍್ಯ ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಹಿಳೆಯರು, ಕಾರ್ಮಿಕರು, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಹಿತಾಸಕ್ತಿ ಕಾಪಾಡಲು ಶ್ರಮಿಸಿದ್ದಾರೆ. ಇವತ್ತು ನಾವೆಲ್ಲಾ ಪಡೆಯುತ್ತಿರುವ ಸೌಲಭ್ಯಗಳು ಅಂಬೇಡ್ಕರ್ ಅವರ ಕೊಡುಗೆಯಾಗಿದೆ ಎಂದು ಹೇಳಿದರು.

ಬೆಳಿಗ್ಗೆ ಪಟ್ಟಣದ ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ತಹಶೀಲ್ದಾರ್ ನವೀನ್ ಕುಮಾರ್ ಮಾಲಾರ್ಪಣೆ ಮಾಡಿ, ನಂತರ ಸಭಾಕಾರ್ಯಕ್ರಮ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಕಲ್ಪಿಸಿರುವ ಪ್ರಮುಖವಾಗಿ ಸಹೋದರತ್ವ, ವಿವಿಧತೆಯಲ್ಲಿ ಏಕತೆ, ಸಮಾನತೆ ಈ ಮೂರು ತತ್ವಗಳನ್ನು ಮುಖ್ಯವಾಗಿ ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಸಿದ್ದೇಗೌಡ, ಬಿಇಒ ಭಾಗ್ಯಮ್ಮ, ತಾ.ಪಂ. ಇ.ಒ. ಭವಾನಿ ಶಂಕರ್, ಪ.ಪಂ. ಸಿಇಓ ಲೋಕ್ಯಾನಾಯಕ್, ರಜಿನಿಕಾಂತ್ ಮತ್ತಿತರರು ಇದ್ದರು. ಮಡಿಕೇರಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾತೃ. ಅವರ ಚಿಂತನೆಗಳು ಆಧುನಿಕ ಭಾರತವನ್ನು ರೂಪಿಸಿದೆ ಎಂದು ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ಅವರು ಅಭಿಪ್ರಾಯಪಟ್ಟರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ಜಯಂತಿಯ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಚಿಂತನೆಗಳು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಅರ್ಥಿಕ ವಲಯಗಳ ಕ್ರಾಂತಿಗೆ ಕಾರಣವಾಗಿದೆ.

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಆದ್ದರಿಂದ ಯುವಜನತೆ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಉತ್ಸುಕತೆ ತೋರಬೇಕಾಗಿದೆ ಎಂದರು.

ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ತಿಪ್ಪೇಸ್ವಾಮಿ ಮಾತನಾಡಿ, ಸಮಾನತೆಯ, ಸಾಮಾಜಿಕ ನ್ಯಾಯದ ಬದುಕಿಗೆ ಅಂಬೇಡ್ಕರ್ ಅವರು ಆದರ್ಶಪ್ರಾಯರು. ಗೌರವಯುತ ಬದುಕಿಗೆ ಅಂಬೇಡ್ಕರ್ ಅವರು, ಅವರ ಚಿಂತನೆಗಳೇ ನಮಗೆ ಮಾದರಿ ಎಂದರು.

ಸ್ನಾತಕೋತ್ತರ ಕೊಡವ ಭಾಷಾ ವಿಭಾಗದ ಸಂಯೋಜಕರು ಹಾಗೂ ಕಾಲೇಜಿನ ಗಣಕವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ರವಿಶಂಕರ್ ಮಾತನಾಡಿ ಅಂಬೇಡ್ಕರ್ ಚಿಂತನೆ ಸಾರ್ವಕಾಲಿಕ ಎಂದರು. ಸಂವಿಧಾನದ ಪ್ರಾಮುಖ್ಯತೆ ಮಹತ್ವದ ಕುರಿತು ಕಾಲೇಜಿನ ರಸಾಯನ ಶಾಸ್ತç ವಿಭಾಗದ ಮುಖ್ಯಸ್ಥರು, ವಿಜ್ಞಾನಿಗಳು ಆದ ಡಾ. ಜೆ.ಜಿ. ಮಂಜುನಾಥ್ ಅವರು ತಿಳಿಸಿಕೊಟ್ಟರು.

ಕನ್ನಡ ವಿಭಾಗದ ಅತಿಥಿ ಉಪನ್ಯಾಸಕ ಹೆಚ್.ಡಿ. ಮುಖೇಶ್ ಕಾರ್ಯಕ್ರಮ ನಿರ್ವಹಿಸಿದರು. ಗಣಿತ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಆರ್ ಸ್ವಾಗತಿಸಿದರು. ಅರ್ಥಶಾಸ್ತç ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ. ರೇಣು ಶ್ರೀ ವಂದಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ವೈಷ್ಣವಿ ಪ್ರಾರ್ಥಿಸಿದರು.ವೀರಾಜಪೇಟೆ: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್.ಎಸ್.ಎಸ್., ಐಕ್ಯೂಎಸಿ, ವಿದ್ಯಾರ್ಥಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ವಿಷಯದಂತೆ ವಿಶ್ವದಲ್ಲಿಯೇ ಬಲಿಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಡಾ. ಅಂಬೇಡ್ಕರ್‌ರಿಗೆ ಸಲ್ಲುತ್ತದೆ ಎಂದು ಸಂವಿಧಾನದ ಆಶಯಗಳನ್ನು ವಿವರಿಸಿದರು.

ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಚಿಂತನೆಗಳು ಸಾರ್ವಕಾಲಿಕವಾಗಿದ್ದು ಅವರು ವಿಶ್ವದಲ್ಲಿಯೇ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ ಮತ್ತು ಸಂವಿಧಾನದ ರಚನೆಯಲ್ಲಿ, ಆರ್.ಬಿ.ಐ ಸ್ಥಾಪನೆಯಲ್ಲಿ, ಅರ್ಥಶಾಸ್ತçಕ್ಕೆ ಅಂಬೇಡ್ಕರ್ ಅವರ ಕೊಡುಗೆಗಳನ್ನು ಉದಾಹರಣೆ ಸಮೇತ ವಿವರಿಸಿದರು.

ಕಾಲೇಜಿನ ಎನ್.ಎಸ್.ಎಸ್. ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಘಟಕದ ಸಂಚಾಲಕಿ ದೃಶ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕುಶಾಲನಗರ: ಜಾತಿಗಳು ಆಡಳಿತ ವ್ಯವಸ್ಥೆಗೆ ತಕ್ಕಂತೆ ನಿರ್ಣಯವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೊಡಗು ಜಿಲ್ಲಾ ಅಖಿಲ ಭಾರತೀಯ ಸಂತ ಸಮಿತಿ ಅಧ್ಯಕ್ಷ ರಾಜೇಶ್ ನಾಥ್ ಗುರೂಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಸಾಮರಸ್ಯ ವೇದಿಕೆ ಆಶ್ರಯದಲ್ಲಿ ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಭೀಮ ಚಿಂತನ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಒಗ್ಗಟ್ಟಿನ ಕೊರತೆ ಕಂಡು ಬಂದ ಸಂದರ್ಭ ಸಮಸ್ಯೆಗಳು ಹೆಚ್ಚಳವಾಗುತ್ತವೆ. ಪ್ರತಿಯೊಬ್ಬರನ್ನು ಸಮಾನತೆಯಿಂದ ಕಾಣುವ ವ್ಯವಸ್ಥೆ ಆಗಬೇಕು ಪ್ರತಿಯೊಬ್ಬರೂ ವಿಶಾಲ ಹೃದಯವಂತರಾಗಬೇಕು ಎಂದು ಅವರು ಹೇಳಿದರು.

ಪರಮಾತ್ಮ ಸ್ವರೂಪ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಂದಿನ ಚಿಂತನೆಗಳ ಮೂಲಕ ನಿರ್ಮಾಣಗೊಂಡ ಸಂವಿಧಾನದಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆಯ ಅಗತ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನ ತಜ್ಞರು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನಿಲಯದ ಪ್ರಾದೇಶಿಕ ನಿರ್ದೇಶಕರಾದ ಡಾ.ಸುಧಾಕರ್ ಹೊಸಹಳ್ಳಿ ಅವರು ಅಂಬೇಡ್ಕರ್ ಅವರ ಅಂತರAಗದ ಅಭಿಲಾಷೆಯ ವಿಷಯದ ಬಗ್ಗೆ ಮಾತನಾಡಿ, ವಿಶ್ವದಲ್ಲಿ ಯಾವುದೇ ನೂತನ ರಾಷ್ಟç ನಿರ್ಮಾಣಗೊಂಡ ಸಂದರ್ಭ ಭಾರತದ ಸಂವಿಧಾನವನ್ನು ಮಾದರಿ ಸಂವಿಧಾನವಾಗಿ ಪರಿಗಣನೆ ಮಾಡುತ್ತಿದೆ. ನಮ್ಮ ದೇಶದಲ್ಲಿ ಸಂವಿಧಾನದ ಬಳಕೆ ಮಾಡುವ ಸಂದರ್ಭ ರಾಜಕೀಯ ವ್ಯವಸ್ಥೆಯಲ್ಲಿ ಕೆಲವು ನ್ಯೂನತೆಗಳು ಕಂಡುಬರುತ್ತಿರುವುದು ವಿಷಾಧನೀಯ ಎಂದರು.

ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯಸ್ಥರಾದ ಹೆಚ್.ಬಿ. ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಮರಸ್ಯ ವೇದಿಕೆಯ ಜಿಲ್ಲಾ ಸಂಯೋಜಕರಾದ ಹರೀಶ್ ತಮ್ಮಯ್ಯ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ ನಡೆಯಿತು.

ಜಿಲ್ಲಾ ಸಂಸ್ಕೃತ ಭಾರತಿ ಸಂಯೋಜಕರಾದ ಮಧುಸೂದನ್ ಪರ್ಯಾವರಣ ವಿಭಾಗದ ಜಿಲ್ಲಾ ಸಂಯೋಜಕ ಜನಾರ್ಧನ್ ಮತ್ತೆ ಇತರರು ಇದ್ದರು. ಕಾರ್ಯಕ್ರಮದ ನಂತರ ಪ್ರಮುಖರು ಮತ್ತು ಸಭಿಕರ ನಡುವೆ ಸಂವಾದ ಕಾರ್ಯಕ್ರಮ ನಡೆಯಿತು.

ರಾಷ್ಟಿçÃಯ ಸ್ವಯಂಸೇವಕ ತಾಲೂಕು ಪ್ರಮುಖರಾದ ಮಹೇಂದ್ರ ಅವರು ಸ್ವಾಗತಿಸಿದರು. ಹರೀಶ್ ತಮ್ಮಯ್ಯ ಅವರು ಪ್ರಸ್ತಾವನೆ ಮಾತುಗಳಾಡಿದರು.

ಶಿಕ್ಷಕಿ ಕೃತಿಕಾ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶೋಭಾಭಟ್ ಸಾಮರಸ್ಯ ಗೀತೆ ಹಾಡಿದರು. ಮಹೇಶ್ ಅಮೀನ್ ವಂದಿಸಿದರು.ವೀರಾಜಪೇಟೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಪ್ರತಿಯೊಬ್ಬ ಭಾರತೀಯರು ಘನತೆಯಿಂದ ಬದುಕಲು ಬುನಾದಿ ಹಾಕಿ ಕೊಟ್ಟು ಪ್ರಾಮುಖ್ಯತೆಯನ್ನು ತಂದುಕೊಟ್ಟAತಹ ಮಹಾನ್ ವ್ಯಕ್ತಿ, ಅವರ ಆದರ್ಶಗಳನ್ನು ನಾವುಗಳು ಪಾಲಿಸುವಂತಾಗಬೇಕು ಎಂದು ವೀರಾಜಪೇಟೆ ತಹಶೀಲ್ದಾರ್ ಎಚ್.ಎನ್. ರಾಮಚಂದ್ರ ಹೇಳಿದರು.

ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣ ಸಮಿತಿ ಮತ್ತು ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಾಬಾ ಸಹೇಬ್ ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರದ ಪುರಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ತಾರತಮ್ಯ, ಲಿಂಗ ಭೇದ, ಬಡತನ, ಅಸಮಾನತೆ, ಹೋಗಲಾಡಿಸಲು ಅಂಬೇಡ್ಕರ್ ಹೋರಾಟ ನಡೆಸಿದ್ದರು, ಜಾತಿ ಎಂಬುದು ಆಕಸ್ಮಿಕ. ಪ್ರತಿಯೊಬ್ಬರು ಸಮಾನವಾಗಿ ಬದುಕಲು ಉತ್ತಮ ಶಿಕ್ಷಣದ ಅವಶ್ಯಕತೆ ಇರುವುದಾಗಿ ತಿಳಿಸಿದ ರಾಮಚಂದ್ರ ಅವರು ಭಾರತೀಯರೆಲ್ಲರು ಸಮಾನವಾಗಿ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವಂತಾಗಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಬಿ.ಆರ್.ಆಂಬೇಡ್ಕರ್ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗದೇ ಎಲ್ಲಾ ವರ್ಗದ ಜನರಿಗೂ ಕೊಡುಗೆ ನೀಡಿದ್ದಾರೆ. ಬಾಲ್ಯದಿಂದಲೇ ಶ್ರೇಷ್ಠ ಅನುಭವ, ಉನ್ನತ ಶಿಕ್ಷಣ ಪಡೆದು, ಮೀಸಲಾತಿ ಹಾಗೂ ಸೌಲಭ್ಯಗಳಿಂದ ವಂಚಿತರಾದವರ ಪರ ಹೋರಾಟ ನಡೆಸಿದ್ದರು. ಸಂವಿಧಾನ ರಚಿಸಿ ಮುಂದಿನ ಪೀಳಿಗೆಗೂ ಉತ್ತಮ ಸಂಸ್ಕಾರವನ್ನು ಉಳಿಸಿ ಬೆಳೆಸುವಂತಹ ಮಾರ್ಗವನ್ನು ತೋರಿದ್ದಾರೆ ಎಂದರು.

ಪೊನ್ನಂಪೇಟೆ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮಾತನಾಡಿ ಬಾಬಾ ಸಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ತಳಹದಿಯ ಶ್ರೇಷ್ಟ ಚಿಂತಕರು, ರಾಜಕಾರಣಿ ಹಾಗೂ ಸಮಾಜ ಸುಧಾರಕ ಚಿಂತಕರಾಗಿದ್ದರು ಎಂದರು.

ವೇದಿಕೆಯಲ್ಲಿ ಸಹಾಯಕ ಚುನಾವಣಾಧಿಕಾರಿ ನಾರಾಯಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ಜಿಲ್ಲಾ ಪಂಚಾಯತ್ ಅಭಿಯಂತರ ಮಹದೇವ, ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್, ವೀರಾಜಪೇಟೆ ಕಂದಾಯ ಪರಿವೀಕ್ಷಕ ಹರೀಶ್, ಸಮಾಜ ಕಲ್ಯಾಣ ಇಲಾಖೆಯ ಕೆ.ಎಂ. ಸುಮಯ್ಯ, ಬಸಪ್ಪ ಹಾಗೂ ತಾಲೂಕಿನ ಅಧಿಕಾರಿ ವರ್ಗ, ಸಿಬ್ಬಂದಿಗಳು ಉಪಸ್ಥಿತರಿದ್ದರು. ಪೊನ್ನಂಪೇಟೆ, ಏ. ೧೪: ಪ್ರೊ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಗೋಣಿಕೊಪ್ಪಲು ಸಮುದಾಯ ಭವನದಲ್ಲಿ ಆಚರಿಸಲಾಯಿತು. ಸಂಘದ ಜಿಲ್ಲಾ ಸಂಚಾಲಕ ಸಿಂಗಿ ಸತೀಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕ ಟಿ.ಎನ್. ಗೋವಿಂದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ದಲಿತರ ಬದುಕಿಗೆ ಬೆಳಕಾಗಿ ಬಂದ ಅಂಬೇಡ್ಕರ್ ಚಿವರ ಸಂವಿಧಾನವನ್ನು ಎಲ್ಲರೂ ತಿಳಿದುಕೊಳ್ಳಬೇಕು. ಸಮಾಜದಲ್ಲಿ ನಾವುಗಳು ಇಂದು ತಲೆ ಎತ್ತಿ ನಡೆಯಲು ಮುಖ್ಯ ಕಾರಣಕರ್ತರಾದವರು ಅಂಬೇಡ್ಕರ್ ಮತ್ತು ಅವರ ಸಂವಿಧಾನ ಎಂದರು.

ಸಮಾಜ ಸೇವಕರಾದ ಜಲೀಲ್ ಮಾತನಾಡಿ, ನಮ್ಮೆಲ್ಲರಲ್ಲಿ ಸಮಾನತೆ ಸಾರಿದ ಆದರ್ಶ ವ್ಯಕ್ತಿ ಡಾ. ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಜನಾಂಗ ಮೈಗೂಡಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭ ಸಂಘದ ಸಾಂಸ್ಕೃತಿಕ ಸಂಚಾಲಕರಾದ ಗಿರೀಶ್ ಅವರು ಕ್ರಾಂತಿ ಗೀತೆ ಹಾಡಿದರು. ಸಭೆಯಲ್ಲಿ ಮುಖಂಡರಾದ ನಾಗೇಂದ್ರ, ಶರಣ್, ರವಿ, ಪಳನಿ ಪ್ರಕಾಶ್, ಸಮಾಜ ಸೇವಕರಾದ ಮಂಜು ರೈ, ದೀಪು, ಪೌರಾಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್, ಪ್ರಮುಖರಾದ ಮಂಜುಳಾ, ತಂಗರಾಜು, ದಿನೇಶ್, ಪಳನಿ, ಬಂಟ ರಾಜು, ಪರಮೇಶ್ವರ್, ರಾಧಾಕೃಷ್ಣ, ಮನೋಜ್ ಉಪಸ್ಥಿತರಿದ್ದರು.

ಸುಂಟಿಕೊಪ್ಪ: ಇಲ್ಲಿನ ಪ್ರಜಾ ಪರಿವರ್ತನಾ ವೇದಿಕೆ ವತಿಯಿಂದ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾ ಸಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಸುಂಟಿಕೊಪ್ಪದ ದ್ವಾರಕಾ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಮುತ್ತಪ್ಪ ಹಾಗೂ ಸಂಘದ ಸದಸ್ಯರು, ಡಾ.ಬಿ.ಆರ್. ಅಂಬೆಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಅಧ್ಯಕ್ಷ ಹೆಚ್.ಎಸ್.ಮುತ್ತಪ್ಪ ಅವರು ಮಾತನಾಡಿ, ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿಯನ್ನು ಈ ದಿನದಲ್ಲಿ ಸ್ಮರಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಸಂವಿಧಾನ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು ಕಾನೂನಿಗೆ ಎಲ್ಲರೂ ತಲೆದೂಗಬೇಕು. ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೆÀ ಅಂಬೇಡ್ಕರ್ ಎಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು. ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ಶಶಿಕುಮಾರ್ ಮಾತನಾಡಿ ಡಾ.ಅಂಬೇಡ್ಕರ್ ಒಬ್ಬ ಸರ್ವಕಾಲೀಕ ಸುಧಾರಣಾವಾದಿ ವ್ಯಕ್ತಿಅವರು ಎಂದಿಗೂ ಯಾವುದೇ ಒಂದು ಜಾತಿ, ಜನಾಂಗ, ಭಾಷೆಗೆ ಕಟ್ಟು ಬಿದ್ದವರಲ್ಲ, ಅವರು ಇಡೀ ದೇಶವನ್ನು ಸುಧಾರಣೆಯ ಹೊಸ ಹಂತಕ್ಕೆ ತಲುಪಿಸುವ ಮಹತ್ವಾಕಾಂಕ್ಷೆಯ ಧೀಮಂತ ವ್ಯಕ್ತಿ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಫಿರೋಜ್‌ಖಾನ್ ಮಾತನಾಡಿ, ಈ ಒಂದು ದಿನಾಚರಣೆಯನ್ನು ಇವತ್ತು ಇಡೀ ದೇಶಾದ್ಯಂತ ಅತಿ ಸಂಭ್ರಮದಿAದ ಆಚರಿಸುತ್ತಿರುವುದು ದೇಶದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂದರು.

ವೇದಿಕೆಯಲ್ಲಿ ನಗರ ಅಧ್ಯಕ್ಷ ಖಲೀಲ್‌ಖಾನ್ (ಕರೀಂ), ಜಿಲ್ಲಾ ಖಜಾಂಚಿ ಜಿ.ರಾಮಣ್ಣ, ಸುಂಟಿಕೊಪ್ಪ ವಾಹನ ಚಾಲಕ ಸಂಘದ ಅಧ್ಯಕ್ಷ ಸುರೇಶ್, ಕುಶಾಲ ನಗರ ಅಧ್ಯಕ್ಷ ಪ್ರತೀಕ್, ವಿವಿದ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.ಮಡಿಕೇರಿ: ಆದಿ ದ್ರಾವಿಡ ಸಮಾಜ ಸೇವಾ ಸಂಘ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಬಿಳಿಗೇರಿ ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಿತು.

ಗ್ರಾಮದ ಜಂಬೂರು ತೋಟದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಶಿಕ್ಷಣದಿಂದ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಅAಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಸಂದೇಶ ನೀಡಿದ್ದಾರೆ. ನಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಇಂದು ಸಂವಿಧಾನ ನಮಗೆ ನೆರವಾಗಿದೆ. ಸಮಾನತೆ, ಮತದಾನದ ಹಕ್ಕು ಮತ್ತು ಪ್ರಶ್ನೆ ಮಾಡುವ ಅವಕಾಶವನ್ನು ಕಲ್ಪಿಸಿದೆ. ಶಿಕ್ಷಣದಿಂದ ಮಾತ್ರ ಈ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆಯುವ ಮೂಲಕ ದೇಶವನ್ನು ಕಟ್ಟಿ ಬೆಳೆಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಸೋಮಪ್ಪ ಹೇಳಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್. ಮಧು, ಸದಸ್ಯರಾದ ಹೆಚ್.ಎಂ. ಕೃಷ್ಣಪ್ಪ. ಗೋಪಾಲ, ಗಣೇಶ, ಲೋಕೇಶ, ರಾಮು, ನಾರಾಯಣ, ಸೀನ ಮತ್ತಿತರರು ಉಪಸ್ಥಿತರಿದ್ದರು.

ಮುಳ್ಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಸಂಘದ ವತಿಯಿಂದ ಭಾನುವಾರ ಆಚರಿಸಲಾಯಿತು. ಶನಿವಾರಸಂತೆ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಶಿಕ್ಷಕ ಕೆ.ಪಿ.ಜಯಕುಮಾರ್ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಮಾತನಾಡಿದರು. ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ಮತ್ತು ವಿದೇಶಕ್ಕೆ ಮಾದರಿಯಾದ ಧೀಮಂತ ನಾಯಕರು, ಅವರ ತತ್ವ-ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ತಮ್ಮಲ್ಲಿ ಅಳವಡಿಸಿಕೊಂಡು ಅವುಗಳನ್ನು ಪಾಲಿಸುವಂತೆ ಸಲಹೆ ನೀಡಿದರು.

ಮಾಜಿ ತಾ.ಪಂ. ಸದಸ್ಯ ಜಿ.ಆರ್. ಪಾಲಾಕ್ಷ ಮಾತನಾಡಿ, ಭಾರತದ ಸಂವಿಧಾನವನ್ನು ರಚಿಸಿದ ಬಿ.ಆರ್.ಅಂಬೇಡ್ಕರ್ ಅವರ ತತ್ವ, ಸಿದ್ದಾಂತ, ಆದರ್ಶಗಳನ್ನು ಗೌರವಿಸುವುದು ದೇಶದ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಸಮಾಜವನ್ನು ಮುನ್ನೆಡಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ದುಂಡಳ್ಳಿ ಗ್ರಾ.ಪಂ. ಸದಸ್ಯ ಸಿ.ಜೆ. ಗಿರೀಶ್, ಪ್ರಮುಖರಾದ ಎನ್.ಕೆ. ಅಪ್ಪಸ್ವಾಮಿ, ಅಬ್ಬಾಸ್, ಮಹೇಶ್, ಜಾನಾರ್ಧನ್, ವೀರೇಂದ್ರ, ರಾಮಕುಮಾರ್, ಪುಟ್ಟಸ್ವಾಮಿ, ನಿವೃತ್ತ ಸೈನಿಕ ಯಶ್ವಂತ್, ಅಶೋಕ್, ಗೋಪಾಲ್, ಗಂಗಾಧರ್ ಮುಂತಾದವರಿದ್ದರು.ಹೆಬ್ಬಾಲೆ: ಇಲ್ಲಿಗೆ ಸಮೀಪದ ಹೆಬ್ಬಾಲೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ಸಂದರ್ಭ ಸ್ಥಳೀಯ ದಾನಿಗಳಾದ ಕುಮಾರ್ ಅವರು, ದಿವಂಗತ ಹೆಚ್.ವಿ. ರಾಜಶೇಖರ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ನಿಧಿಯಿಂದ ೭ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಾನಸ ಮತ್ತು ಸುಮಂತ್ ಅವರಿಗೆ ನಗದು ಹಾಗೂ ಸ್ಮರಣಿಕೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಎಂ. ವೆಂಕಟೇಶ್ ಮತ್ತು ಸಹ ಶಿಕ್ಷಕಿ ಪುಷ್ಪಾವತಿ ಹಾಗೂ ಶಾಲಾ ಮಕ್ಕಳು ಹಾಜರಿದ್ದರು.