ಬಿಜೆಪಿ ತೊರೆದ ಸಂಸದ ಸಂಗಣ್ಣ ಕರಡಿ

ಕೊಪ್ಪಳ, ಏ. ೧೪: ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಹಾಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸಂಗಣ್ಣ ಕರಡಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಕೊಪ್ಪಳ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಸಂಗಣ್ಣ ಕರಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ತಾ. ೧೭ ರಂದು (ಇಂದು) ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. ಸಂಗಣ್ಣ ಕರಡಿ ಅವರು ಇಮೇಲ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ತಮ್ಮ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ಬಿ.ವೈ.ರಾಘವೇಂದ್ರ ವಿರುದ್ಧ ಪ್ರಕರಣಕ್ಕೆ ತಡೆ

ಬೆಂಗಳೂರು, ಏ. ೧೬: ಮಠದಲ್ಲಿ ರಾಜಕೀಯ ಭಾಷಣ ಮಾಡಿ ಮತದಾರರ ಮೇಲೆ ಪ್ರಭಾವ ಬೀರಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಿ.ವೈ. ರಾಘವೇಂದ್ರ ಸಲ್ಲಿಸಿರುವ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮಂಗಳವಾರ ವಿಚಾರಣೆ ನಡೆಸಿದರು. ಪ್ರಕರಣದ ಪ್ರತಿವಾದಿಗಳಾದ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಮತ್ತು ದೂರುದಾರ ಪಿ.ಅವಿನಾಶ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ಬಿ.ವೈ.ರಾಘವೇಂದ್ರ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜದ ಗುರುಪೀಠದಲ್ಲಿ ೨೦೨೪ರ ಮಾರ್ಚ್ ೨೩ರಂದು ಸಭೆ ನಡೆಸಿದ್ದರು. ಈ ಸಭೆಗೆ ಚುನಾವಣಾ ಆಯೋಗದಿಂದ ಪೂರ್ವಾನುಮತಿ ಪಡೆದಿಲ್ಲ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಮತದಾರರ ಮೇಲೆ ಪ್ರಭಾವ ಬೀರಲು ಭಾಷಣ ಮಾಡಿ ಧಾರ್ಮಿಕ ಸ್ಥಳವನ್ನು ದುರುಪಯೋಗಪಡಿಸಿ ಕೊಂಡಿದ್ದಾರೆ ಎಂದು ಆರೋಪಿಸಿ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ.ಅವಿನಾಶ್ ಗ್ರಾಮೀಣ ಠಾಣೆಯ ಪೊಲೀಸರಿಗೆ ಅಂದೇ ದೂರು ನೀಡಿದ್ದರು. ಇದರನ್ವಯ, ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ತಡೆ ಕಾಯ್ದೆ-೧೯೮೮, ಜನಪ್ರತಿನಿಧಿಗಳ ಕಾಯ್ದೆ-೧೯೫೧ ಮತ್ತು ಭಾರತೀಯ ದಂಡ ಸಂಹಿತೆ-೧೮೬೦ರ (ಐಪಿಸಿ) ಕಲಂ ೧೭೧ ಎಫ್ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರಿದ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಎನ್‌ಕೌಂಟರ್‌ನಲ್ಲಿ ೧೮ ಮಾವೋವಾದಿಗಳು ಹತ

ಕಾಂಕೇರಿ, ಏ. ೧೬: ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಟ ೧೮ ಮಂದಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗುಂಡಿನ ಕಾಳಗದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದಲ್ಲಿ ಮದ್ದು, ಗುಂಡು ಮತ್ತಿತರ ಶಸಾಸ್ತçಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿನಗುಂದ ಮತ್ತು ಕೊರೊನಾರ್ ಗ್ರಾಮಗಳ ನಡುವಿನ ಹಪಟೋಲಾ ಅರಣ್ಯದಲ್ಲಿ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ ಮತ್ತು ರಾಜ್ಯದ ಜಿಲ್ಲಾ ಮೀಸಲು ಪಡೆಗಳ ಜಂಟಿ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುರ್ಜೇವಾಲಾ ಪ್ರಚಾರಕ್ಕೆ ೪೮ ಗಂಟೆ ನಿಷೇಧ

ನವದೆಹಲಿ, ಏ. ೧೬: ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ೪೮ ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧ ವಿಧಿಸಿದೆ. ಈ ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಕೇಂದ್ರ ಚುನಾವಣಾ ಆಯೋಗ ವಿಧಿಸಿದ ಮೊದಲ ಪ್ರಚಾರ ನಿಷೇಧ ಇದಾಗಿದೆ. ಹೇಮಾ ಮಾಲಿನಿ ವಿರುದ್ಧ ‘ಅವಹೇಳನಕಾರಿ, ಅನಾಗರಿಕ ಮತ್ತು ಅಸಭ್ಯ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ ಕಳೆದ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

ದೋಣಿ ಮಗುಚಿ ೪ ಮಕ್ಕಳು ಸಾವು - ಹಲವರು ಕಣ್ಮರೆ

ಶ್ರೀನಗರ, ಏ. ೧೬: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ದೋಣಿ ದುರಂತ ಸಂಭವಿಸಿದ್ದು, ದೋಣಿಯಲ್ಲಿ ಸಾಗುತ್ತಿದ್ದ ೪ ಶಾಲಾ ಮಕ್ಕಳು ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ಮಂಗಳವಾರ ಬೆಳಿÀಗ್ಗೆ ದೋಣಿಯೊಂದು ಮುಳುಗಿದ್ದು ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಜಲಸಮಾಧಿಯಾಗಿದ್ದಾರೆ. ಮೂಲಗಳ ಪ್ರಕಾರ ಬೆಳಿಗ್ಗೆ ಮಕ್ಕಳು ಸೇರಿ ಹಲವರು ದೋಣಿಯಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ನಿಯಂತ್ರಣ ತಪ್ಪಿ ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ವಿಚಾರ ತಿಳಿಯುತ್ತಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.ಇದುವರೆಗೆ ೧೨ ಮಂದಿಯನ್ನು ರಕ್ಷಿಸಲಾಗಿದ್ದು, ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿAದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ಹಡಗು ಮಗುಚಿದೆ ಎಂದು ಮೂಲಗಳು ತಿಳಿಸಿವೆ.