ಮಡಿಕೇರಿ : ತಾ. ೧೭ ರಂದು (ಇಂದು) ಸೋಮವಾರಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ತಾ. ೧೭ ರ ಬೆಳಿಗ್ಗೆ ೬.೦೦ ಗಂಟೆಯಿAದ ೧೮ ರ ಬೆಳಿಗ್ಗೆ ೬ ರವರೆಗೆ ಸೋಮವಾರಪೇಟೆ ಠಾಣಾ ವ್ಯಾಪ್ತಿಯ ಸುತ್ತಮುತ್ತ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ರೆಸ್ಟೋರೆಂಟ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.