ಬೆಂಗಳೂರು, ಏ. ೧೭: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (೮೧) ತಾ. ೧೬ ರಂದು ಹೃದಯಾಘಾತದಿಂದ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯ ಸ್ವಗೃಹದಲ್ಲಿ ನಿಧನರಾದರು.
ಚಿತ್ರ ನಿರ್ಮಾಣ, ನಿರ್ದೇಶನದಲ್ಲೂ ಹೆಸರು ಮಾಡಿದ್ದ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಚಂದನವನದಲ್ಲಿ ಹಲವು ದಿಗ್ಗಜ ನಟರೊಂದಿಗೆ ನಟಿಸಿ ಅವರು ಜನಪ್ರಿಯತೆ ಪಡೆದಿದ್ದರು. ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ದ್ವಾರಕೀಶ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್-ವಿಷ್ಣುವರ್ಧನ್ ಹಲವಾರು ಸಿನಿಮಾಗಳಲ್ಲಿ ತೆರೆ ಹಂಚಿಕೊAಡಿದ್ದರು. ಇವರು ಅಭಿನಯದ ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು.
ರಾಜ್ಕುಮಾರ್, ವಿಷ್ಣುವರ್ಧನ್ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಹೊಂದಿದ್ದ ಇವರು
(ಮೊದಲ ಪುಟದಿಂದ) ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಾಣ ಮಾಡಿದ್ದಾರೆ. ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ೧೧:೩೦ಕ್ಕೆ ಚಾಮರಾಜಪೇಟೆಯ ಟಿಆರ್ ಮಿಲ್ನಲ್ಲಿ ನಡೆಯಲಿದೆ. ಗಣ್ಯರು, ಅಭಿಮಾನಿಗಳು ದ್ವಾರಕೀಶ್ ಅಂತಿಮ ದರ್ಶನವನ್ನು ಪಡೆದರು. ಹಲವರು ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ತಾ. ೧೭ ರ (ಇಂದು) ಬೆಳಿಗ್ಗೆ ೭.೩೦ ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬೆ. ೧೧ ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ೧೧ ಗಂಟೆಯ ನಂತರ ಟಿಆರ್ಮೀಲ್ ಚಿತಾಗಾರಕ್ಕೆ ತರಲಾಗುತ್ತದೆ. ಅಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.