ಮಡಿಕೇರಿ, ಏ. ೧೭: ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ೭ನೇ ವರ್ಷದ ಗೌಡ ಫುಟ್ಬಾಲ್ ಟ್ರೋಫಿ ಹಾಗೂ ಮರಗೋಡು ವ್ಯಾಪ್ತಿಯ ಗ್ರಾಮಗಳಿಗೆ ಸೀಮಿತವಾಗಿ ಯೂನಿಟಿ ಕಪ್ ಫುಟ್ಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮೇ.೧೮ರಿಂದ ೨೫ರವರೆಗೆ ಪಂದ್ಯಾಟ ನಡೆಯಲಿದೆ ಎಂದು ಅಕಾಡೆಮಿ ಕಾರ್ಯದರ್ಶಿ ಇಟ್ಟಣಿಕೆ ನವನೀತ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಪಂದ್ಯಾವಳಿಗೆ ಸಮುದಾಯ ಬಾಂಧವರಿAದ ಉತ್ತಮ ಸ್ಪಂದನ ವ್ಯಕ್ತವಾಗಿತ್ತು. ಈ ಬಾರಿ ಮೊದಲ ೬೪ ತಂಡಗಳಿಗೆ ಆದ್ಯತೆ ನೀಡಲಾಗಿದೆ. ಮೇ ೫ರೊಳಗಾಗಿ ತಂಡಗಳು ಹೆಸರು ನೋಂದಾಯಿಸಿಕೊಳ್ಳಬೇಕಾಗಿದೆ.

ಪಂದ್ಯಾವಳಿಯ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ರೂ. ೭೦ ಸಾವಿರ, ದ್ವಿತೀಯ ರೂ. ೫೦ ಸಾವಿರ, ತೃತೀಯ ಹಾಗೂ ನಾಲ್ಕನೇ ಬಹುಮಾನವಾಗಿ ತಲಾ ರೂ. ೧೦ ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಅಕಾಡೆಮಿ ಅಧ್ಯಕ್ಷ ಬಡುವಂಡ್ರ ಸುಜಯ್, ಉಪಾಧ್ಯಕ್ಷ ಪಾಂಡನ ರಿಶಿಕೇಷ್, ಪ್ರಮುಖರಾದ ಜೈನಿರ ರೋಷನ್, ಕೊಂಪುಳಿರ ಪುನೀತ್, ರೋಷನ್ ಬೊಳ್ಳೂರು ಉಪಸ್ಥಿತರಿದ್ದರು.