ಮಡಿಕೇರಿ, ಏ. ೧೭: ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ ಕೇಂದ್ರದಿAದ ಹೊರಹೋಗುವ ಭಾಗಮಂಡಲ ಫೀಡರ್‌ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ತಾ.೧೮ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪.೩೦ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ತಾಳತ್ತ್ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.