ವೀರಾಜಪೇಟೆ, ಏ. ೧೭: ಸರಕಾರ ಜಾರಿಗೆ ತಂದಿರುವ ಭೂ ಗುತ್ತಿಗೆ ಕಂದಾಯ ಕಾಯ್ದೆ ತಿದ್ದುಪಡಿಯನ್ನು ರದ್ದುಗೊಳಿಸುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಭೂ-ಗುತ್ತಿಗೆ ವಿರೋಧಿ ಐಕ್ಯ ಹೋರಾಟ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಪಟ್ಟಣದ ಮಿನಿವಿಧಾನ ಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಘಟಕದ ಸಂಚಾಲಕ ಹಾಗೂ ವೀರಾಜಪೇಟೆ ಪುರಸಭೆಯ ಸದಸ್ಯ ವಿ.ಆರ್.ರಜನಿಕಾಂತ್ ಅವರು, ಜಿಲ್ಲೆಯಲ್ಲಿ ಕರ‍್ಪೋರೇಟ್‌ಗಳು, ಅತೀ ದೊಡ್ಡ ಭೂಮಾಲೀಕರು ಅನಧೀಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಭೂಮಿ ಯನ್ನು ತೆರವುಗೊಳಿಸಿ, ಬಡವರಿಗೆ ಹಂಚಬೇಕು. ನಿವೇಶನ ಇಲ್ಲದವರಿಗೆ ನಿವೇಶನ ಹಾಗೂ ಕೃಷಿ ಭೂಮಿ ನೀಡಬೇಕು. ಈಗಾಗಲೇ ಜಾರಿಯಲ್ಲಿರುವ ಭೂ ಹಂಚಿಕೆ ನಿಯಮದಂತೆ ಹಾಗೂ ರ‍್ಕಾರ ನೇಮಿಸಿರುವ ಅಕ್ರಮ ಸಕ್ರಮ ಸಮಿತಿಯಲ್ಲಿ ಬಾಕಿಯಿರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಒತ್ತಾಯಿಸಿದರು. ಸಿ.ಪಿ.ಐ.ಎಂ ಪಕ್ಷದ ಜಿಲ್ಲಾ ಘಟಕದ ಕರ‍್ಯರ‍್ಶಿ ರಮೇಶ್ ಎಚ್.ಬಿ ಅವರು ಮಾತನಾಡಿ, ನದಿ ತೀರ ಹಾಗೂ ಅರಣ್ಯದಂಚು ಸೇರಿದಂತೆ ಪೈಸಾರಿಯಲ್ಲಿ ವಾಸ ಮಾಡುವ ಬಡವರಿಗೆ ರ‍್ಕಾರ ಕೂಡಲೇ ಬದಲಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಕಾರರು ತಹಶೀಲ್ದಾರ್ ಎಚ್.ಎನ್.ರಾಮಚಂದ್ರ ಅವರಿಗೆ ಮನವಿಯನ್ನು ಸಲ್ಲಿಸಿದರು. ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಘಟಕದ ಸಂಚಾಲಕ ಸತೀಶ್ ಎಚ್.ಬಿ, ದಸಂಸದ ತಾಲೂಕು ಸಂಚಾಲಕ ನಾಗೇಶ್ ಎಚ್.ಬಿ, ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಲವ, ದಸಂಸ (ಪ್ರೋ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ, ದಲಿತ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕ ಶಿವಪ್ಪ ಎಚ್.ಆರ್ ಹಾಗೂ ಮತ್ತಿತರರು ಭಾಗವಹಿಸಿದ್ದರು.