ಮಡಿಕೇರಿ, ಏ. ೧೭: ಬಿಜೆಪಿ ಪಕ್ಷಕ್ಕೆ ಹಿಂದೂ-ಮುಸ್ಲಿA ಎಂದು ಬೇಧ ಭಾವ ಮಾಡುವುದನ್ನು ಬಿಟ್ಟರೆ ದೇಶವನ್ನೂ ಅಭಿವೃದ್ಧಿ ಮಾಡುವ ಆಸಕ್ತಿ ಇಲ್ಲ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಆರೋಪಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಚುನಾವಣೆ ಸಂಬAಧ ನಡೆದ ಜಿಲ್ಲಾ ಮಟ್ಟದ ಕಾಂಗ್ರೆಸ್ ಅಲ್ಪಸಂಖ್ಯಾತರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ದೇಶದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳೆಲ್ಲವೂ ಕಾಂಗ್ರೆಸ್ ಕೊಡುಗೆಯಾಗಿದೆ. ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಸುಳ್ಳು ಹೇಳುತ್ತಾ ಬಂದಿದ್ದು; ಬಿಜೆಪಿಯ ಭರವಸೆಗಳೆಲ್ಲವೂ ಪೊಳ್ಳಾಗಿದೆ ಎಂದು ಅವರು ಟೀಕಿಸಿದರು. ಹತ್ತು ವರ್ಷಗಳ ನಮ್ಮ ಆಡಳಿತ ‘ಟ್ರೆöÊಲರ್’ ಅಷ್ಟೇ ‘ಮೈನ್ ಪಿಕ್ಷರ್’ ಇನ್ನೂ ಬಾಕಿ ಇದೆ ಎಂದು ಬಿಜೆಪಿ ಹೇಳುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರು ಜಾಗೃತರಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆAದು ಅಬ್ದುಲ್ ಜಬ್ಬಾರ್ ಕರೆ ನೀಡಿದರು.

ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ಕೊಡಗಿನಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಬರೀ ಟ್ರೆöÊಲರ್ ಅಷ್ಟೆ; ಲೋಕಸಭಾ ಚುನಾವಣಾ ಫಲಿತಾಂಶ ‘ಮೈನ್ ಪಿಕ್ಚರ್’ ಆಗುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಕೆಲಸ ಮಾಡ ಬೇಕೆಂದು ಹೇಳಿದರು.

ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಗೆಲುವಿಗಾಗಿ ಶ್ರಮ ವಹಿಸಬೇಕೆಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಗೌಡ ಮಾತನಾಡಿ, ಈ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಸಾಕಷ್ಟು ಕೊಡುಗೆಗಳನ್ನು ಕೊಟ್ಟಿದ್ದು ಅವುಗಳನ್ನು ಜನರ ಮುಂದಿಟ್ಟು ಕಾಂಗ್ರೆಸ್‌ಗೆ ಬೆಂಬಲ ಕೋರುವಂತೆ ಕರೆ ನೀಡಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಪಿ.ಎ. ಹನೀಫ್ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಗೌಡ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಕರೆಯಿತ್ತರು.

ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಕಾಂಗ್ರೆಸ್ ಮಾಧ್ಯಮ ಸಂವಹನ ವಕ್ತಾರ ಟಿ.ಪಿ. ರಮೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಿ.ಪಂ. ಮಾಜಿ ಸದಸ್ಯ ಪಿ.ಎಂ. ಲತೀಫ್ ಸೇರಿದಂತೆ ಕಾಂಗ್ರೆಸ್ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.