ನಾಮಪತ್ರ ಸಲ್ಲಿಸಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ, ಏ. ೧೮: ಧಾರವಾಡ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸೆಡ್ಡು ಹೊಡೆದಿರುವ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಕೊನೆಗೂ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಹುಬ್ಬಳ್ಳಿ - ಧಾರವಾಡ ಲೋಕಸಭಾ ಕ್ಷೇತ್ರ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಟ್ಟಿದೆ. ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರ ಸಹ ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಡುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್‌ನಿAದ ವಿನೋದ ಅಸೂಟಿ ಅಖಾಡಕ್ಕಿಳಿದಿದ್ದಾರೆ. ಇನ್ನು, ತಮಗೆ ಎಲ್ಲಾ ಜಾತಿ, ಧರ್ಮದವರು, ರೈತ ಸಂಘಟನೆಗಳ ಬೆಂಬಲ ಇದೆ ಎನ್ನುತ್ತಿರುವ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ದಿಂಗಾಲೇಶ್ವರ ಶ್ರೀಗಳು ಇಂದು ಮಧ್ಯಾಹ್ನ ಯಾವುದೇ ಮೆರವಣಿಗೆ ಇಲ್ಲದೇ, ನಾಲ್ವರೊಂದಿಗೆ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಘೋಷಣೆ ಕೂಗಿದ ಮೂವರ ಮೇಲೆ ಹಲ್ಲೆ

ಬೆಂಗಳೂರು, ಏ. ೧೮: ಬೆಂಗಳೂರಿನಲ್ಲಿ ರಾಮನವಮಿಯ ಸಂದರ್ಭದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಮೂವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಇಲ್ಲಿನ ಚಿಕ್ಕಬೆಟ್ಟಹಳ್ಳಿಯಲ್ಲಿ ಬುಧವಾರ ನಡೆದ ಘಟನೆಗೆ ಸಂಬAಧಿಸಿದAತೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳೆಲ್ಲರೂ ಎಂಎಸ್ ಪಾಳ್ಯದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೀವಿನಿ ನಗರದ ನಿವಾಸಿಗಳಾದ ಪವನ್‌ಕುಮಾರ್, ರಾಹುಲ್ ಮತ್ತು ಬಿನಾಯಕ್ ಎಂಬವರು ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನವನ್ನು ಪರಿಶೀಲಿಸಲು ಎಂಎಸ್ ಪಾಳ್ಯ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಕೇಸರಿ ಧ್ವಜವನ್ನು ಹೊಂದಿದ್ದರು ಮತ್ತು "ಜೈ ಶ್ರೀ ರಾಮ್" ಎಂದು ಕೂಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೈಕಿನಲ್ಲಿ ಹೋಗುತ್ತಿದ್ದ ಅಪ್ರಾಪ್ತ ಅನ್ಯಕೋಮಿನ ಯುವಕರು ಅವರನ್ನು ತಡೆದು, ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಏಕೆ ಕೂಗುತ್ತಿದ್ದೀರಿ? "ಅಲ್ಲಾಹು ಅಕ್ಬರ್" ಎಂದು ಮಾತ್ರ ಕೂಗಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಫರ್ಮಾನ್ ಕೇಸರಿ ಧ್ವಜ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.

ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ, ಏ. ೧೮: ಅಬಕಾರಿ ನೀತಿ ಹಗರಣಕ್ಕೆ ಸಂಬAಧಿಸಿದAತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕೊಳ್ಳಪಟ್ಟಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ ೨೬ ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಮನೀಶ್ ಸಿಸೋಡಿಯಾ ಪರ ವಾದ ಮಂಡಿಸಿದ ವಕೀಲ ಮೋಹಿತ್ ಮಾಥುರ್, ‘ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ವಿಳಂಬವಾಗಿದೆ ಎಂದು ಹೇಳಿದರು. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೊಯ್ ಬಾಬುಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿದ ಅವರು, ಸಿಸೋಡಿಯಾ ಕೂಡಾ ಪ್ರಭಾವಿ ಸ್ಥಾನದಲ್ಲಿಲ್ಲ. ಹೀಗಾಗಿ ಅವರಿಗೂ ಜಾಮೀನು ನೀಡಬೇಕು ಎಂದು ವಾದಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ. ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪೂರ್ಣ ತನಿಖೆವರೆಗೂ ಜಾಮೀನು ನೀಡಬಾರದು ಎಂದು ವಾದಿಸಿದರು.

‘ಅಮೇಥಿಯಿಂದ ಸ್ಪರ್ಧಿಸಲು ರಾಹುಲ್‌ಗೆ ಧೈರ್ಯವಿಲ್ಲ’

ಪತ್ತನಂತಿಟ್ಟ, ಏ. ೧೮: ೨೦೧೯ರಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋತ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಅಲ್ಲಿಂದ ಸ್ಪರ್ಧಿಸುವ ಧೈರ್ಯವಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಅಮೇಥಿಯಲ್ಲಿ ಸೋಲು ಅನುಭವಿಸಿದ ನಂತರ ರಾಹುಲ್ ಗಾಂಧಿ ಉತ್ತರ ಪ್ರದೇಶದಿಂದ ಕೇರಳಕ್ಕೆ ವಲಸೆ ಬಂದರು ಎಂದು ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದರು. ಇಂದು ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಕೆ ಆಂಟನಿ ಅವರ ಪರ ಪ್ರಚಾರ ನಡೆಸಿದ ರಾಜನಾಥ್ ಸಿಂಗ್ ಅವರು, ದೇಶದಲ್ಲಿ ವಿವಿಧ ಬಾಹ್ಯಾಕಾಶ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಲಾಂಚ್ ಮಾಡುತ್ತಿರುವಾಗ, ಕಳೆದ ೨೦ ವರ್ಷಗಳಿಂದ ಕಾಂಗ್ರೆಸ್ ಯುವ ನಾಯಕನನ್ನು ಲಾಂಚ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರಾಜನಾಥ್ ಸಿಂಗ್ ವ್ಯಂಗ್ಯವಾಡಿದರು.

ಜಪಾನ್‌ನಲ್ಲಿ ಪ್ರಬಲ ಭೂಕಂಪ

ಟೋಕಿಯೊ, ಏ. ೧೮: ಆಗ್ನೆಯ ಜಪಾನ್‌ನಲ್ಲಿ ೬.೬ ಕಂಪನಾAಕ ತೀವ್ರತೆಯ ಪ್ರಬಲ ಭೂಕಂಪವು ಬುಧವಾರ ರಾತ್ರಿ ಸಂಭವಿಸಿದ್ದು, ಒಂಬತ್ತು ಮಂದಿಗೆ ಚಿಕ್ಕಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದಿAದ ನೀರಿನ ಕೊಳವೆಗಳಿಗೆ ಹಾನಿಯುಂಟಾಗಿದೆ ಮತ್ತು ಅಲ್ಲಲ್ಲಿ ಸಣ್ಣ ಪ್ರಮಾಣದ ಭೂಕುಸಿತವೂ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಶಿಕೋಕು ದ್ವೀಪದ ಪಶ್ಚಿಮ ಕರಾವಳಿ ಬಳಿಯ ಬುಂಗೊ ಕಾಲುವೆ ಹತ್ತಿರ ಸಮುದ್ರ ಮೇಲ್ಮೆöÊಯಿಂದ ೫೦ ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರಬಿAದು ಪತ್ತೆಯಾಗಿದೆ. ಆದರೆ, ಸುನಾಮಿ ಸಂಭವಿಸುವ ಆತಂಕವಿಲ್ಲ ಎಂದು ಜಪಾನ್‌ನ ಹವಾಮಾನ ಇಲಾಖೆ ತಿಳಿಸಿದೆ.