ಮಡಿಕೇರಿ, ಏ.೧೯ : ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ರಾಜಕಾರಣ ಮಾಡುವುದು ಬಿಜೆಪಿಯ ಕೆಲಸ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಮಾತನಾಡಿ, ಇತ್ತೀಚೆಗೆ ಮಡಿಕೇರಿಗೆ ಉಪಮುಖ್ಯಮಂತ್ರ‍್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದ ವೇಳೆ ಒಕ್ಕಲಿಗ ಸಮುದಾಯದವರು ಸಭೆಯೊಂದನ್ನು ಏರ್ಪಡಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವ ನಿಟ್ಟಿನಲ್ಲಿ ಡಿ.ಕೆ.ಶಿ ಅವರನ್ನು ಸಭೆಗೆ ಆಹ್ವಾನಿಸಿದ್ದರು. ಆ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಅವರು ಮಾತನಾಡಿ ಒಕ್ಕಲಿಗ ಸಮುದಾಯದ ಬೆಂಬಲ ಕೋರಿದರು. ಇದನ್ನು ಜಾತಿ ರಾಜಕಾರಣ ಎಂದು ಬಿಜೆಪಿ ಆರೋಪಿಸುತ್ತಿದ್ದು, ಜಾತಿರಾಜಕಾರಣ ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಹಿಂದೂ ಜಾಗರಣಾ ವೇದಿಕೆ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿದಾಗಲೂ ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದಾರೆ. ಆಗ ಅದು ಜಾತಿ ರಾಜಕೀಯವೆಂದು ಅನಿಸಲಿಲ್ಲವೆ ಎಂದು ಕೊಲ್ಯದ ಗಿರೀಶ್ ಪ್ರಶ್ನಿಸಿದರು.

ಕಾಂಗ್ರೆಸ್ ವೃತ್ತಿಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದರು. ಗ್ಯಾರಂಟಿ ಅನುಷ್ಟಾನ ಸಮಿತಿಯ ಮಡಿಕೇರಿ ತಾಲೂಕು ಅಧ್ಯಕ್ಷ ಮಂದ್ರೀರ ಮೋಹನ್‌ದಾಸ್ ಮಾತನಾಡಿ ಬಿಜೆಪಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ ಎಂದರು.

ಕಾAಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಸೂರಜ್ ಹೊಸೂರು ಮಾತನಾಡಿ ಬಿಜೆಪಿ ಸರ್ಕಾರದಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಗೋಷ್ಠಿಯಲ್ಲಿ ಕಾಂಗ್ರೆಸ್ ಸೇವಾದಳದÀ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸಂಪಾಜೆ ವಲಯ ಕಾಗ್ರೆಸ್ ಅಧ್ಯಕ್ಷ ಪಂಜಿಕಲ್ ಸುರೇಶ್ ಉಪಸ್ಥಿತರಿದ್ದರು.