ಮಡಿಕೇರಿ, ಏ. ೧೯: ಕೊಡಗು ಮೂಲದವರಾದ ಚಿತ್ರನಟ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ದಂಪತಿ ಮೇಲೆ ಕೆಲವು ಅಪರಿಚಿತರ ಗುಂಪು ವಾಹನಕ್ಕೆ ಅಡ್ಡಗಟ್ಟಿ ಹಲ್ಲೆಗೆ ಮುಂದಾಗಿದ್ದಲ್ಲದೆ ಚಿನ್ನದ ಸರ ಅಪಹರಣಕ್ಕೂ ಯತ್ನಿಸಿರುವ ಘಟನೆ ವರದಿಯಾಗಿದೆ.

ಈ ಘಟನೆ ನಡೆದು ಇದೀಗ ಸುಮಾರು ೧೨ ದಿನಗಳು ಕಳೆದಿದೆ. ಆದರೆ ಈ ತನಕ ಭುವನ್ ಹಾಗೂ ಹರ್ಷಿಕಾ ಈ ಬಗ್ಗೆ ಎಲ್ಲೂ ಮಾಹಿತಿ ಹಂಚಿಕೊAಡಿರಲಿಲ್ಲ. ಅಲ್ಲದೆ ಪೊಲೀಸ್ ದೂರನ್ನೂ ದಾಖಲಿಸಿರಲಿಲ್ಲ. ಇದೀಗ ಇಂದು ನಟಿ ಹರ್ಷಿಕಾ ಈ ಬಗ್ಗೆ ಫೋಟೋ ಹಾಗೂ ವೀಡಿಯೋ ಸಹಿತವಾಗಿ ಸಾಮಾಜಿಕ ಜಾಲತಾಣದ ಮೂಲಕ ಆದಿನ ನಡೆದಿದ್ದ ಘಟನೆಯನ್ನು ವಿವರಿಸಿ ತಮಗಾಗಿದ್ದ ಆಘಾತದ ಕುರಿತು ವಿವರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಟಿ ಹರ್ಷಿಕಾ ಘಟನೆಯ ಪೂರ್ಣ ವಿವರವನ್ನು ಹಂಚಿಕೊAಡಿದ್ದು, ಈ ವಿಚಾರ ಇಂದು ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದೆ.

(ಮೊದಲ ಪುಟದಿಂದ)

ಘಟನೆ ಏನಾಗಿತ್ತು...?

ನಟಿ ಹರ್ಷಿಕಾ ಹೇಳಿರುವಂತೆ ಕೆಲ ದಿನಗಳ ಹಿಂದೆ ರಾತ್ರಿ ಸಮಯದಲ್ಲಿ ನಡೆದಿರುವ ಈ ಘಟನೆಯ ಚಿತ್ರಣ ಇಂತಿದೆ.

ಬೆAಗಳೂರಿನ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊAದಿಗೆ ಊಟ ಮಾಡಲು ಈ ದಂಪತಿ ಸಂಬAಧಿಕರೊAದಿಗೆ ತೆರಳಿದ್ದರು. ಭೋಜನವನ್ನು ಮುಗಿಸಿದ ನಂತರ ವಾಲೆಟ್ ಪಾರ್ಕಿಂಗ್‌ನಿAದ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೆöÊವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು. ಈ ವೇಳೆ ನನ್ನ ಪತಿ ‘‘ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ’’ ಎಂದು ಹರ್ಷಿಕಾ ಹೇಳಿದ್ದಾರೆ. ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದಾಗ, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿ, ಇವರಿಗೆ ಪಾಠ ಕಲಿಸಬೇಕು ಎಂದು ಹೇಳಿ ಭುವನ್ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದಾಗಿ ಹರ್ಷಿಕಾ ಹೇಳಿದ್ದಾರೆ.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ೨-೩ ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ ೨೦-೩೦ ಸದಸ್ಯರ ಗುಂಪು ಜಮಾಯಿಸಿತು. ಅವರಲ್ಲಿ ೨ ಜನರು ಭುವನ್ ಚಿನ್ನದ ಸರವನ್ನು ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು ಮತ್ತು ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು. ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದಂತೆ ಮಾಡಿದ್ದರಿಂದ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು.

ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದAತೆ ಮತ್ತು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. ‘‘ಯೇ ಲೋಕಲ್ ಕನ್ನಡ್ ವಾಲಾ ಹೇ’’ (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು. ನಿಮ್ಮ ‘‘ಕನ್ನಡ ಸ್ಟೆöÊಲ್’’ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಹರಕು ಮುರುಕು ಕನ್ನಡದಲ್ಲಿ ಮಾತನಾಡುತ್ತಿದ್ದರು.

ನಾನು ಪರಿಚಯವಿದ್ದ ಇನ್ಸ್ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬAತೆ ಕೆಲವೇ ಸೆಕೆಂಡುಗಳಲ್ಲಿ ಚದುರಿಹೋದರು. ನಂತರದಲ್ಲಿ ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಕೆಲವೇ ಸೆಕೆಂಡುಗಳಲ್ಲಿ ಕಣ್ಮರೆಯಾದರು. ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಹತ್ತಿರದ ಪೊಲೀಸ್ ಠಾಣೆಯ ಎಎಸ್‌ಐ ಉಮೇಶ್ ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನೂ ತೋರಲಿಲ್ಲ. ಕೇವಲ ೨ ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇಂತಹ ಅಗ್ನಿಪರೀಕ್ಷೆಗಳಿಗೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ. ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

೧. ನಾವು ಪಾಕಿಸ್ತಾನದಲ್ಲಿ ಅಥವಾ ಅಪಘ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ?

೨.ನಮ್ಮ ಊರು ಬೆಂಗಳೂರಿನಲ್ಲಿ ನನ್ನ ಭಾಷೆ ಕನ್ನಡವನ್ನು ಬಳಸುವುದು ತಪ್ಪಾ ?

೩. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?

೪. ಇಲ್ಲಿಯೇ ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ? ಇದರಿಂದಾಗಿ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೋವನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂಬದಾಗಿ ಹರ್ಷಿಕಾ ಆ ಸಂದರ್ಭದ ಕಹಿ ಅನುಭವವನ್ನು ವಿವರಿಸಿದ್ದಾರೆ.

ಭುವನ್ ಪ್ರತಿಕ್ರಿಯೆ

ಈ ಬಗ್ಗೆ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯಿಸಿರುವ ಪ್ರಸ್ತುತ ಕೊಡಗಿನಲ್ಲಿರುವ ಭುವನ್ ಪೊನ್ನಣ್ಣ ಈ ಘಟನೆ ತೀರಾ ಖಂಡನೀಯ. ಆದರೆ ಚುನಾವಣಾ ಸಂದರ್ಭವಾದ್ದರಿAದ ಇದನ್ನು ಹೆಚ್ಚು ಮಾಡದೆ, ಪೊಲೀಸ್ ದೂರನ್ನೂ ನೀಡದಿರಲು ನಾವು ಆ ದಿನ ನಿರ್ಧರಿಸಿದ್ದೆವು. ಆದರೆ ತಮಗೆ ಕೈ ಹಾಗೂ ಕತ್ತಿನ ಭಾಗಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಇದು ಇನ್ನೂ ಸರಿಯಾಗಿಲ್ಲ. ಇದರಿಂದ ಮನನೊಂದು ಆತಂಕದಲ್ಲಿರುವ ಹರ್ಷಿಕಾ ಇಂದು ತಮಗೂ ತಿಳಿಸದಂತೆ ಆ ದಿನದ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಚಾರ ಹಂಚಿಕೊAಡಿದ್ದಾರೆ. ಮುಂದಿನ ಬೆಳವಣಿಗೆ ಬಗ್ಗೆ ಪರಿಶೀಲಿಸಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.