ಬೆಂಗಳೂರು, ಏ. ೨೦: ಬೆಂಗಳೂರಿ ನಲ್ಲಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ದಂಪತಿಯ ಮೇಲಿನ ನಿಂದನೆ, ಹಲ್ಲೆ ಯತ್ನ ಪ್ರಕ ರಣಕ್ಕೆ ಸಂಬAಧಿ ಸಿದಂತೆ ಶನಿವಾರ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದು ಘಟನೆಯ ಕುರಿತಂತೆ ದೂರು ದಾಖಲಿಸಿದ್ದಾರೆ.

ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರಿಗೆ ದೂರು ನೀಡಿದ್ದಾರೆ. ಈ ಕುರಿತು ಮಾತನಾಡಿದ ನಟ ಭುವನ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಘಟನೆ ನಡೆದಾಗ ದೂರು ಕೊಡುವುದರಿಂದ ಬೇರೆ ರೂಪ ಪಡೆದುಕೊಳ್ಳಲಿದೆ ಎಂಬ ಕಾರಣಕ್ಕಾಗಿ ದೂರು ನೀಡಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ ನಂತರ ಸಂಬAಧಿಕರು ಹಾಗೂ ಹಿತೈಷಿಗಳು ನೀಡಿದ ಸಲಹೆ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ಕೊಡಲಾಗಿದೆ ಎಂದರು. -ಕೋವರ್ ಕೊಲ್ಲಿ ಇಂದ್ರೇಶ್