ಮಡಿಕೇರಿ, ಏ. ೨೦: ಕಾಂಗ್ರೆಸ್ ಪಕ್ಷದ ವತಿಯಿಂದ ಸಂವಿಧಾನ ಉಳಿಸುವ ಸಲುವಾಗಿ ಪರಿಶಿಷ್ಟ ಸಮುದಾಯದ ಸಮಾವೇಶ ಏರ್ಪಡಿಸಲಾಗಿದೆ. ತಾ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಸಮಾವೇಶ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಕೆಪಿಸಿಸಿ ಸದಸ್ಯ ಹೆಚ್.ಎಂ. ನಂದಕುಮಾರ್, ದೇಶದಲ್ಲಿ ಸಂವಿಧಾನ ಉಳಿಸುವ ಸಲುವಾಗಿ ಕಾಂಗ್ರೆಸ್ ಅನ್ನು ಬೆಂಬಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಸಮಾವೇಶ ಏರ್ಪಡಿಸಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್, ರಾಜ್ಯ ಸಚಿವ ಹೆಚ್.ಸಿ. ಮಹದೇವಪ್ಪ, ಶಾಸಕರುಗಳಾದ ಡಾ. ಮಂತರ್ ಗೌಡ, ಎ.ಎಸ್. ಪೊನ್ನಣ್ಣ, ಪರಿಶಿಷ್ಟ ವಿಭಾಗದ ರಾಜ್ಯಾಧ್ಯಕ್ಷ ಧರ್ಮಸೇನ, ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ವಕ್ತಾರ ಟಿ.ಎ. ಸುರೇಶ್ ಮಾತನಾಡಿ, ವಿಧಾನಸಭಾ ಚುನಾವಣೆ ಯಲ್ಲಿ ರಾಜ್ಯದಲ್ಲಿ ೧೩೬ ಸ್ಥಾನ ನೀಡುವ ಮೂಲಕ ಜನಾರ್ಶೀವಾದ ಮಾಡಿದ್ದಾರೆ, ಸರಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ರಾಜ್ಯದ ಜನರು ಮತ್ತೆ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ. ಪರಿಶಿಷ್ಟರು ಕಾಂಗ್ರೆಸ್ನ ಮೂಲವಾಗಿದ್ದು, ಕಾಂಗ್ರೆಸನ್ನು ಗೆಲ್ಲಿಸಲು ಕಾರ್ಯ ಪ್ರವೃತ್ತರಾಗಿದ್ದಾರೆ. ಸಮಾವೇಶದ ಮೂಲಕ ಹೆಚ್ಚಿನ ಕೆಲಸಕ್ಕೆ ಅವಕಾಶವಾಗಲಿದೆ ಎಂದರು.
ಗೋಷ್ಠಿಯಲ್ಲಿ ಮಡಿಕೇರಿ ನಗರಸಭಾ ನಾಮನಿರ್ದೇಶನ ಸದಸ್ಯ ಮುದ್ದುರಾಜ್, ಪಕ್ಷದ ಮುಖಂ ಡರುಗಳಾದ ಮೋಹನ್ ಮೌರ್ಯ, ಗಣೇಶ್ ಇದ್ದರು.