ವೀರಾಜಪೇಟೆ, ಏ. ೨೧: ನಗರದ ಚಿಕ್ಕಪೇಟೆ ಚತ್ರಕೆರೆ ಬಳಿಯ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ತಾ.೨೩ ರಂದು ಹನುಮ ಜಯಂತಿ ಆಚರಿಸ ಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
ಮಂಡಳಿ ವತಿಯಿಂದ ಶ್ರೀ ಹನುಮ ಜಯಂತಿ ಅಂಗವಾಗಿ ಹಲವು ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯುತ್ತವೆ. ಅಂದು ಶ್ರೀ ಸ್ವಾಮಿಗೆ ವಿಶೇಷ ಆಲಂಕಾರ ಪೂಜೆ, ಮಹಾಪೂಜೆ, ಭಜನಾ ಕಾರ್ಯಕ್ರಮ ಮತ್ತು ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.