ಮಡಿಕೇರಿ, ಏ. ೨೦: ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳAಡ ಹಾಕಿ ಹಬ್ಬದ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಾವಳಿಯು ಏ.೨೭ ಮತ್ತು ಏ.೨೮ ರಂದು ನಡೆಯಲಿದೆ.

ಎರಡು ದಿನ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಡ್ಯೋಳAಡ ಕುಟುಂಬದ ಪಟ್ಟೆದಾರ ಕುಂಡ್ಯೋಳAಡ ಎ. ನಾಣಯ್ಯ ವಹಿಸಲಿದ್ದಾರೆ.

ಏ.೨೭ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಸೆಮಿಫೈನಲ್ ಪಂದ್ಯಾವಳಿಯ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ. ಬೋಪಣ್ಣ ಉಪಸ್ಥಿತರಿರುವರು.

ಎರಡನೇ ಪಂದ್ಯದ ಅತಿಥಿಯಾಗಿ ಡಾ. ಕಲಿಯಾಟಂಡ ಚಿಣ್ಣಪ್ಪ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇ.ಜ.ಬಾಚಮಂಡ ಎ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಕ್ರೀಡಾಪಟುಗಳು, ಪಂದ್ಯಾವಳಿಯಲ್ಲಿ ಕಾರ್ಯನಿರ್ವಹಿಸಿದ ಅಂಪೈರ್‌ಗಳು, ತಾಂತ್ರಿಕವರ್ಗ ಮತ್ತು ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸಿ ಗೌರವಿಸಲಾಗುವುದು.

ಏ.೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಫೈನಲ್ ಪಂದ್ಯಾವಳಿಯ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ ಉಪಸ್ಥಿತರಿರುವರು.

ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಹೈದರಾಬಾದ್ ವಿದೇಶಿ ತನಿಖಾ ಘಟಕದ ಉಪ ನಿರ್ದೇಶಕ ಮುಕ್ಕಾಟಿರ ಪುನೀತ್ ಕುಟ್ಟಯ್ಯ, ಉದ್ಯಮಿ ಕೊಡಂಗಡ ರವಿ ಕರುಂಬಯ್ಯ, ಐಆರ್‌ಎಸ್ ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಡಾ.ಕೊಟ್ಟಂಗಡ ಪೆಮ್ಮಯ್ಯ, ನಾರಾಯಣ ಆರೋಗ್ಯ ಸಮೂಹದ ಮುಖ್ಯ ವೈದ್ಯಕೀಯ ನಿರ್ದೇಶಕ ಡಾ.ಪುಚ್ಚಿಮಾಡ ಎಂ.ಉತ್ತಪ್ಪ (ಸಂತೋಷ್), ಪಾಂಡAಡ ಲೀಲಾ ಕುಟ್ಟಪ್ಪ, ಒಲಂಪಿಯನ್ ಡಾ.ಅಂಜಪರವAಡ ಬಿ.ಸುಬ್ಬಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿಲ್ಲಾಧಿಕಾರಿ ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ವೆಂಕಟ್ ರಾಜಾ, ಇಬ್ನಿ ಕೂರ್ಗ್ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಸಬಾಸ್ಟಿಯನ್, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕ ಪೀಟರ್, ನಾಪೋಕ್ಲು ಗ್ರಾ.ಪಂ. ಉಪಾಧ್ಯಕ್ಷೆ ಕುಲ್ಲೇಟ್ಟಿರ ಹೇಮಾವತಿ ಅರುಣ್ ಬೇಬಾ, ಟಾಟಾ ಕಾಫಿ ವ್ಯವಸ್ಥಾಪಕ ನಿರ್ದೇಶಕ ಪಿ.ಎ.ಮಂದಣ್ಣ, ನಾಪೋಕ್ಲು ಕೆಪಿಎಸ್ ಸ್ಕೂಲ್‌ನ ಪ್ರಾಂಶುಪಾಲೆ ಮೇದುರ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲೆ ಎಂ.ಎಸ್.ಶಿವಣ್ಣ, ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ, ಅತಿಥಿಗಳಾಗಿ ಆರ್.ವಿ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಪಿ. ಶ್ಯಾಮ್, ಆರ್.ವಿ. ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಡಿ.ಪಿ.ನಾಗರಾಜ್, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥ ಮಹೇಶ್ ಶಣೈ, ಉದ್ಯಮಿ ಕಂಬೆಯAಡ ಶ್ಯಾಮ್, ರಿಪಬ್ಲಿಕ್ ಕನ್ನಡ ಚಾನಲ್ ನ ಪ್ರಧಾನ ಸಂಪಾದಕ ಚೇರಂಡ ಕಿಶನ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ, ಹಾಕಿ ಹಬ್ಬದ ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಸಂಚಾಲಕ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.