ಸೋಮವಾರಪೇಟೆ, ಏ. ೨೨: ತಾಲೂಕಿನ ಮಾದಾಪುರ ಮತ್ತು ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಸಿದ್ಧ ಪ್ರವಾಸಿ ತಾಣ ಕೋಟೆ ಬೆಟ್ಟಕ್ಕೆ ಹೊಂದಿಕೊAಡAತಿ ರುವ ಮೂವತ್ತೊಕ್ಲು ಸಮೀಪದ ಆರಂಗಲ್ ಬೆಟ್ಟ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದು, ಇದು ಕಿಡಿಗೇಡಿಗಳ ಕೃತ್ಯವಿರಬಹುದು ಎಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ.
ಬೆಟ್ಟಶ್ರೇಣಿ ವ್ಯಾಪ್ತಿಯಲ್ಲಿ ಕಂಡು ಬಂದಿರುವ ಕಾಡ್ಗಿಚ್ಚಿಗೆ ನೂರಾರು ಏಕರೆ ಅರಣ್ಯ ನಾಶವಾಗಿದೆ. ಮೊನ್ನೆ ರಾತ್ರಿ ೮ ಗಂಟೆಯ ಸಮಯದಲ್ಲಿ ಬೆಂಕಿ ಜ್ವಾಲೆ ಉರಿಯಲು ಆರಂಭಿಸಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿಗಳು ತೆರಳಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ವಿಷಯ ತಿಳಿದ ಶಾಸಕ ಮಂತರ್ ಗೌಡ ಅವರು, ರಾತ್ರಿ ೧೦ರ ವೇಳೆಗೆ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಬೆಂಕಿ ಆವರಿಸಿದ ಸ್ಥಳದ ಸಮೀಪಕ್ಕೆ ಅಗ್ನಿಶಾಮಕ ದಳದ ವಾಹನ ತೆರಳಲು ಸಾಧ್ಯವಾಗಲಿಲ್ಲ. ನಂತರ ಮಾರುತಿ ಓಮ್ನಿ ಮತ್ತು ಪಿಕ್ಅಪ್ ವಾಹನದಲ್ಲಿ ಸುಮಾರು ೫ ಕಿಮೀ ತೆರಳಿ, ಸುಮಾರು ೧ ಕಿಮೀ ನಷ್ಟು ದೂರ ನಡೆದುಕೊಂಡು ಹೋಗಿದ್ದಾರೆ.
ಮಧ್ಯರಾತ್ರಿ ವೇಳೆ ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ರಾತ್ರಿ ೧೨.೩೦ ಗಂಟೆಗೆ ಹಿಂತಿರುಗಿದ್ದಾರೆ. ಶಾಸಕ ಮಂತರ್ಗೌಡ ಅವರು ಇಲಾಖಾ ಸಿಬ್ಬಂದಿಗಳೊAದಿಗೆ ಸುಮಾರು ೧ ಕಿಮೀ ಕಾಲ್ನಡಿಗೆಯಲ್ಲೇ ತೆರಳಿ ಕಾಡ್ಗಿಚ್ಚು ಹರಡಿರುವ ಪ್ರದೇಶವನ್ನು ವೀಕ್ಷಿಸಿದ್ದಾರೆ.
ನಂತರ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಹಗಲು ವೇಳೆಯಲ್ಲಿ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಿನ್ನೆ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳೀಯ ತೋಟದ ಮಾಲೀಕರ ಸಹಕಾರದೊಂದಿಗೆ ಬೆಂಕಿ ಜ್ವಾಲೆಯನ್ನು ಹತೋಟಿಗೆ ತಂದಿದ್ದಾರೆ.
ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಆರ್ಎಫ್ಒ ಚೇತನ್, ಡಿಆರ್ಎಫ್ಒ ಜಗದೀಶ್ ಮತ್ತು ಸಿಬ್ಬಂದಿಗಳು ಉಪಆರಕ್ಷಕ ನಿರೀಕ್ಷಕ ರಮೇಶ್ಕುಮಾರ್ ಮತ್ತು ಸಿಬ್ಬಂದಿಗಳು, ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಈಶ್ವರ್, ನಾಗೇಶ್, ಚೇತನ್, ಪ್ರಕಾಶ್, ಚೇತನ್ಕುಮಾರ್, ಬರ್ಮಣ್ಣ ಪೂಜಾರಿ ಭಾಗವಹಿಸಿದ್ದರು.
ಶಾಸಕರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಬಿ.ಬಿ.ಸತೀಶ್, ಕೆ.ಎ.ಯಾಕೂಬ್, ಚೇತನ್, ರಜತ್ ಸೇರಿದಂತೆ ಹಲವರು ರಾತ್ರಿ ವೇಳೆ ಕಾಡ್ಗಿಚ್ಚು ಸ್ಥಳಕ್ಕೆ ತೆರಳಿದ್ದರು.
ಕಿಡಿಗೇಡಿಗಳ ಕೃತ್ಯ-ಅರಣ್ಯ ಇಲಾಖೆ ಶಂಕೆ: ಬಿಸಿಲಿನ ಧಗೆ ಜಾಸ್ತಿಯಾಗುತ್ತಿದ್ದು, ಮಾದಾಪುರ ಸಮೀಪದ ಆರಂಗಲ್ ಬೆಟ್ಟ(ಆರಂಗಲ್ ಮಂಟಿ) ಪ್ರದೇಶದ ಅರಣ್ಯದಲ್ಲಿ ರಾತ್ರಿ ಹೊತ್ತಿಕೊಂಡಿರುವ ಬೆಂಕಿ ಕಾಡ್ಗಿಚ್ಚಿನಿಂದ ಆಗಿರುವುದಿಲ್ಲ. ಕಿಡಿಗೇಡಿಗಳು ಎಸಗಿರುವ ಕೃತ್ಯವಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಕೋಟೆಬೆಟ್ಟ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಹೊತ್ತಿಕೊಂಡಿರುವ ಬೆಂಕಿಯ ಜ್ವಾಲೆ ಇಡೀ ಅರಣ್ಯ ಪ್ರದೇಶ ಹಾಗೂ ಸುತ್ತಮುತ್ತಲಿನ ತೋಟಗಳಿಗೆ ಹರಡಿದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಯೂ ಇತ್ತು ಎಂದು ಸ್ಥಳೀಯರು ಹಾಗೂ ಪ್ರವಾಸಿಗರು ಆತಂಕವ್ಯಕ್ತಪಡಿಸುತ್ತಾರೆ. ಘಟನೆಗೆ ನಿಖರ ಕಾರಣ ಕಂಡುಹಿಡಿದು, ಒಂದು ವೇಳೆ ಕಿಡಿಗೇಡಿಗಳ ಕೃತ್ಯವಾಗಿದ್ದರೆ ಅವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.