ಸಿದ್ದಾಪುರ : ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಗೋಪಾಲ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಬಿತ ಹಾಗೂ ಮೀನಾ ಈ ಮೂವರು ಈ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರುಗಳಾಗಿದ್ದು, ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಈ ಸಂದರ್ಭ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪಳನಿ ಸ್ವಾಮಿ, ಪರಿಶಿಷ್ಟ ವರ್ಗದ ಕಾಂಗ್ರೆಸ್ ಪಕ್ಷದ ಪ್ರಮುಖ ರವಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಸುಕ್ಕೂರ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಸಲಾಂ ಇನ್ನಿತರರು ಹಾಜರಿದ್ದರು.