ನೇಹಾ ಹಿರೇಮಠ್ ಹತ್ಯೆ: ಪ್ರಕರಣವನ್ನು ಸಿಬಿಐಗೆ ವಹಿಸಬೇಕು-ಜೆ.ಪಿ. ನಡ್ಡಾ

ಹುಬ್ಬಳ್ಳಿ, ಏ. ೨೧: ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜು ಆವರಣದಲ್ಲಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆ.ಪಿ. ನಡ್ಡಾ, ಇದೊಂದು ಆಘಾತಕಾರಿ ಘಟನೆಯಾಗಿದ್ದು, ನಾವು ಖಂಡಿಸುತ್ತೇವೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ. ಅವರ ಹೇಳಿಕೆಗಳು ತನಿಖೆಯನ್ನು ದುರ್ಬಲಗೊಳಿಸುತ್ತವೆ. ತುಷ್ಟೀಕರಣ ರಾಜಕಾರಣಕ್ಕೆ ಪ್ರಸ್ತುತ ಸರ್ಕಾರವನ್ನು ರಾಜ್ಯದ ಜನರು ಬಿಡುವುದಿಲ್ಲ ಎಂದರು. ನಿರಂಜನ್ ಹಿರೇಮಠ್ ಅವರಿಗೆ ರಾಜ್ಯ ಪೊಲೀಸರ ಮೇಲಿನ ನಂಬಿಕೆ ಕಡಿಮೆಯಾಗಿದ್ದು, ರಾಜ್ಯ ಪೊಲೀಸರು ತನಿಖೆ ನಡೆಸಲು ಅಸಮರ್ಥರಾಗಿದ್ದರೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.

ಕೋಲಾರ: ಸಿಎಂ ಸಿದ್ದರಾಮಯ್ಯ ರೋಡ್ ಶೋನಲ್ಲಿ ಮಾರ್ದನಿಸಿದ ‘ಚೊಂಬಿನ ಸದ್ದು'

ಬಂಗಾರಪೇಟೆ, ಏ. ೨೧: ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನಡೆಸಿದ ಸಾರ್ವಜನಿಕ ರೋಡ್ ಶೋನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು. ಮೋದಿಯವರು ನಿಮ್ಮ ಅಕೌಂಟಿಗೆ ೧೫ ಲಕ್ಷ ಹಾಕ್ತೀನಿ ಎಂದಿದ್ದರಲ್ಲಾ, ಎಷ್ಟು ಹಣ ಬಂತು ಎಂದು ಕೇಳಿದರು. ಮೋದಿಯವರು ವರ್ಷಕ್ಕೆ ೨ ಕೋಟಿ ಉದ್ಯೋಗ ಕೊಡ್ತೀವಿ ಎಂದಿದ್ದರಲ್ಲಾ, ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು, ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರಲ್ಲಾ, ಎಷ್ಟು ರೈತರಿಗೆ ದುಪ್ಪಟ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು. ಹೀಗಾಗಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಕೈಗೆ ಅವರ ಖಾಲಿ ಚೊಂಬನ್ನು ಅವರಿಗೇ ವಾಪಾಸ್ ಕೊಡಿ ಎಂದು ಕರೆ ನೀಡಿದರು. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಪ್ರಶ್ನಿಸಿದರು. ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡುತ್ತಿಲ್ಲ? ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶ್ನಿಸಿದರು. ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ ೧೫ನೇ ಹಣಕಾಸು ಆಯೋಗದಲ್ಲಿ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗು ವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದ ಮುಖ್ಯಮಂತ್ರಿ, ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್‌ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದೆಂದರು.

ಕರ್ನಾಟಕ-ಕೇರಳ ಗಡಿಭಾಗದಲ್ಲಿ ಶಂಕಿತ ನಕ್ಸಲರ ಸುಳಿವು; ಕೂಂಬಿAಗ್

ಉಡುಪಿ, ಏ. ೨೧: ಕರ್ನಾಟಕ- ಕೇರಳ ಗಡಿಭಾಗ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಕ್ಕಪಕ್ಕದ ಪ್ರದೇಶಗಳಲ್ಲಿ ಕೂಂಬಿAಗ್ ಕಾರ್ಯಾಚರಣೆ ಆರಂಭಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕರ್ನಾಟಕದ ೨೮ ಕ್ಷೇತ್ರಗಳಿಗೆ ಏಪ್ರಿಲ್ ೨೬ ಮತ್ತು ಮೇ ೭ ರಂದು ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ., ಕೆಲವು ದಿನಗಳ ಹಿಂದೆ ಕರ್ನಾಟಕ-ಕೇರಳ ಗಡಿಯಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದರು ಎಂದರು. ಆದಾಗ್ಯೂ, ಸುಮಾರು ಐದಾರು ವರ್ಷಗಳ ಹಿಂದೆ ಕರ್ನಾಟಕದ ಈ ಭಾಗದಲ್ಲಿ ಯಾವುದೇ ನಕ್ಸಲ್ ದೃಶ್ಯಗಳು ಇರಲಿಲ್ಲ. ನಾವು ನಕ್ಸಲ್ ನಿಗ್ರಹ ಪಡೆಗಳೊಂದಿಗೆ ಕಾರ್ಯಾಚರಣೆಗೆ ಇಳಿದಿದ್ದೇವೆ ಮತ್ತು ನೆರೆಯ ಪ್ರದೇಶಗಳಲ್ಲಿ ಕೂಂಬಿAಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ನಾವು ಸಂಬAಧಪಟ್ಟ ಜಿಲ್ಲೆಯಲ್ಲಿ ನಕ್ಸಲ್ ನಿಗ್ರಹ ದಳವನ್ನು ಪ್ರಾರಂಭಿಸಿದ್ದೇವೆ ಮತ್ತು ಯಾವುದೇ ನಕ್ಸಲ್ ಚಟುವಟಿಕೆಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

ಗರ್ಭಿಣಿಗೆ ಬೆಂಕಿ ಹಚ್ಚಿದ ಪತಿ

ಅಮೃತಸರ, ಏ. ೨೧: ಜಗಳದ ನಂತರ ಅವಳಿ ಮಕ್ಕಳೊಂದಿಗಿನ ಗರ್ಭಿಣಿ ಪತ್ನಿಗೆ ಪತಿಯೇ ಬೆಂಕಿ ಹಚ್ಚಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ ೨೩ ವರ್ಷದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದ್ದು, ನಂತರ ವ್ಯಕ್ತಿ ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದ ಪಿಂಕಿಯನ್ನು ಹಾಸಿಗೆಗೆ ಕಟ್ಟಿ ಕೋಪದ ಭರದಲ್ಲಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮೃತಸರ ಸಮೀಪದ ಬುಲ್ಲೇನಂಗಲ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಸುಖದೇವ್ ಮತ್ತು ಪಿಂಕಿ ಸಂಬAಧ ಹಳಸಿದ್ದು, ವಿವಿಧ ವಿಚಾರಗಳಿಗೆ ಆಗ್ಗಾಗ್ಗೆ ಜಗಳವಾಡುತ್ತಿದ್ದರು. ರಾಷ್ಟಿçÃಯ ಮಹಿಳಾ ಆಯೋಗ ಪಂಜಾಬ್ ಪೊಲೀಸರಿಂದ ವಿವರವಾದ ವರದಿ ಕೇಳಿದೆ. ಘಟನೆ ನಂತರ ಪರಾರಿಯಾಗಿದ್ದ ಸುಖದೇವ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣ: ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳ ಬಂಧನ

ಬೆAಗಳೂರು, ಏ. ೨೧: ಮಾವಳ್ಳಿಪುರದ ಮಾದಕ ದ್ರವ್ಯ ದಂಧೆಕೋರರ ಮನೆ ಮೇಲೆ ದಾಳಿ ನಡೆಸಿದ ಆರು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಮೂವರು ಆಫ್ರಿಕನ್ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಟು ಇತರ ಆಫ್ರಿಕನ್ ಪ್ರಜೆಗಳನ್ನು ಸಹ ಎರಡು ವಿಭಿನ್ನ ಪ್ರಕರಣಗಳಲ್ಲಿ ಏಕಕಾಲದಲ್ಲಿ ಬಂಧಿಸಲಾಗಿದೆ. ವೀಸಾ ಅವಧಿ ಮುಗಿದಿದ್ದರೂ, ಅಕ್ರಮವಾಗಿ ನಗರದಲ್ಲಿ ತಂಗಿದ್ದ ಹಿನ್ನೆಲೆಯಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಎಂಟು ಮಂದಿ ವಿದೇಶಿಗರು ಪೊಲೀಸರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದಾರೆಯೇ ಎಂದು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎಲ್ಲಾ ಆರೋಪಿಗಳು ತಂಗಿದ್ದ ಸ್ಥಳಗಳಲ್ಲಿ ಮಾದಕ ದ್ರವ್ಯ ಇದೆಯೇ ಎಂದು ಪತ್ತೆಹಚ್ಚಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಎಲ್ಲಾ ಆರೋಪಿಗಳನ್ನೂ ವಿಚಾರಣೆ ಗೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಏತನ್ಮಧ್ಯೆ, ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಿಸಿಬಿ ಇನ್ಸ್ಪೆಕ್ಟರ್ ಎಲ್. ಸುಬ್ರಮಣ್ಯ ಸ್ವಾಮಿ ಮತ್ತು ಹೆಡ್ ಕಾನ್‌ಸ್ಟೆಬಲ್ ಎಸ್.ಬಿ. ರಾಜೀವ್, ಮಾದಕ ದ್ರವ್ಯ ವಿರೋಧಿ ವಿಭಾಗ (ಎಎನ್‌ಡಬ್ಲ್ಯು) ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.