ಮಡಿಕೇರಿ, ಏ. ೨೧: ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲು ಒತ್ತು ನೀಡಲಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿದ್ದು, ಹಲವಷ್ಟು ಖಾಲಿ ಹುದ್ದೆಗಳನ್ನು ತುಂಬುವ ಕೆಲಸವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆದ ಹೆಚ್.ಸಿ. ಶಾಮ್ ಪ್ರಸಾದ್ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಆವರಣದಲ್ಲಿ ನ್ಯಾಯಾಂಗ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘ ಹಾಗೂ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ೫ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ಸದೃಢವಾಗಿ ನೆಲೆಯೂರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತೆಗೆ ನ್ಯಾಯಾಂಗದ ಮೇಲೆ ಇನ್ನೂ ನಂಬಿಕೆ ಇದ್ದು, ಅದನ್ನು ಉಳಿಸುವ ಮಹತ್ತರ ಜವಾಬ್ದಾರಿ ವಕೀಲರು ಹಾಗೂ ನ್ಯಾಯಾಂಗ ಇಲಾಖೆಯಲ್ಲಿನ ಸಿಬ್ಬಂದಿಗಳ ಮೇಲಿದೆ. ಇದನ್ನು ಅರಿತು ಸಮಾಜಮುಖಿಯಾಗಿ ಮುನ್ನಡೆಯಬೇಕು. ಇಂತಹ ಕಾರ್ಯಕ್ರಮದಲ್ಲಿ ವಕೀಲರು, ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅರ್ಥಪೂರ್ಣ ಗೊಳಿಸಬೇಕು. ನಿತ್ಯ ಒತ್ತಡದಲ್ಲಿರುವ ಸಿಬ್ಬಂದಿಗಳಿಗೆ ಈ ರೀತಿ ಕಾರ್ಯಕ್ರಮ ಮನರಂಜನೆ ನೀಡುವುದರೊಂದಿಗೆ ಜ್ಞಾನವನ್ನು ಹೆಚ್ಚಿಸುತ್ತದೆ. ಇದರಿಂದ ಕೆಲಸವೂ ೩ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಸುಲಭವಾಗುತ್ತದೆ ಎಂದು ಅಭಿಪ್ರಾಯಿಸಿದ ಅವರು, ನ್ಯಾಯಾಂಗ ಇಲಾಖೆಯಲ್ಲಿ ಹಲವಷ್ಟು ಹುದ್ದೆಗಳು ಖಾಲಿ ಇದ್ದವು. ಅವುಗಳನ್ನು ಬಹುತೇಕ ಭರ್ತಿ ಮಾಡುವ ಕೆಲಸವಾಗಿದೆ. ತನ್ನ ಕಾರ್ಯ ಅವಧಿಯಲ್ಲಿ ಇದಕ್ಕೆ ಒತ್ತು ನೀಡಲಾಗಿದೆ. ಹೊಸ ನೌಕರರಿಗೆ ಅನುಭವಿ ಸಿಬ್ಬಂದಿಗಳ ಮಾರ್ಗದರ್ಶನ ಅವಶ್ಯಕ. ಪ್ರಾರಂಭದಿAದ ನಿವೃತ್ತಿ ತನಕ ವಕೀಲರು-ಸಿಬ್ಬಂದಿ ಸಾಮಾರಸ್ಯ ಭಾವ ಹಾಗೂ ಉತ್ಸಾಹದಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ಹೆಚ್.ಎ. ನಾಗೇಶ್ ಮಾತನಾಡಿ, ೫೦ ವರ್ಷಗಳ ಹಿಂದೆ ಚಿಕ್ಕಮಗಳೂರಿನಿಂದ ಆರಂಭಗೊAಡು ಸಂಘಟನೆ ಇಂದು ರಾಜ್ಯವ್ಯಾಪಿ ವಿಸ್ತರಿಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳಿಗೆ ವೇತನ ಕಡಿಮೆ ಇದೆ. ‘ಸಮಾನ ಕೆಲಸ-ಸಮಾನ ವೇತನ' ನೀತಿ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ರಿಟ್ ಅರ್ಜಿ ಕೂಡ ಸಲ್ಲಿಸಲಾಗಿದೆ ಎಂದರು.

ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ಮಾತನಾಡಿ, ನೌಕರರು ಹಾಗೂ ವಕೀಲರು ಒಂದೆ ನಾಣ್ಯದ ಎರಡು ಮುಖವಿದ್ದಂತೆ. ವಕೀಲರ ಸಂಕಷ್ಟ, ಒತ್ತಡ ಜನರಿಗೆ ತಿಳಿಯುತ್ತದೆ. ಆದರೆ, ನ್ಯಾಯಾಂಗ ಸಿಬ್ಬಂದಿ ಕಾರ್ಯ ಕ್ಷೇತ್ರ ತಿಳಿದಿರುವುದಿಲ್ಲ ಎಂದು ಹೇಳಿದರು. ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘ ಅಧ್ಯಕ್ಷ ಎಸ್.ಟಿ. ಶಮ್ಮಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸಿಬ್ಬಂದಿ ಕುಂದು-ಕೊರತೆ, ಬಡ್ತಿ ಅವಕಾಶದ ಬಗ್ಗೆ ಗಮನ ಸೆಳೆದರು.

ಪ್ರಧಾನ ಜಿಲ್ಲಾ ಮತ್ತು ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿ ಕೆ. ಕೆಂಪರಾಜು, ನ್ಯಾಯಾಂಗ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್. ಜಯಪ್ಪ, ನ್ಯಾಯಾಂಗ ಇಲಾಖೆ ನೌಕರರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಪ್ರದೀಪ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಗೋವಿಂದರಾಜು ಹಾಜರಿದ್ದರು.