ಪ್ರತಿ ವರ್ಷ ಜಗತ್ತಿನ ಎಲ್ಲಾ ದೇಶಗಳಲ್ಲಿ ಏಪ್ರಿಲ್ ೨೨ ರಂದು ವಿಶ್ವ ಭೂದಿನ(ಅರ್ಥ್-ಡೇ)ವನ್ನು ಆಚರಿಸಲಾಗುತ್ತಿದೆ.

ಮನುಕುಲ ಸೇರಿದಂತೆ ಸಕಲ ಜೀವಿಗಳ ಸಂರಕ್ಷಣೆಗೆ ಭೂಮಿಯ ಸಂರಕ್ಷಣೆ ಕೂಡ ಅಗತ್ಯ. ಆದ್ದರಿಂದ, ನಾವು ಈ ಭೂ ದಿನದ ಸಂದರ್ಭ ಭೂಮಿಯ ಸಂರಕ್ಷಣೆ ಮತ್ತು ಭೂ ಮಂಡಲದ ಎಲ್ಲಾ ಜೀವಿಗಳ ಸಂರಕ್ಷಣೆ, ನೀರು ಮತ್ತು ವಾಯುಮಂಡಲದ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ಭೂ ಸಂರಕ್ಷಣೆಗಾಗಿ ಈ ದಿನವನ್ನು ಆಚರಿಸಲೇಬೇಕಾಗಿದೆ.

ಪ್ರತಿ ವರ್ಷ ಏಪ್ರಿಲ್ ೨೨ ರಂದು ಪ್ರಪಂಚದಾದ್ಯAತ ಆಚರಿಸುವ ವಿಶ್ವ ಭೂ ದಿನವು ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಇದನ್ನು ಮೊದಲು ೧೯೭೦ ರಲ್ಲಿ ಆಚರಿಸಲಾಯಿತು. ಇದನ್ನು ಈಗ ೧೯೩ಕ್ಕೂ ಹೆಚ್ಚಿನ ದೇಶಗಳಲ್ಲಿ ಆಚರಿಸ ಲಾಗುತ್ತಿದೆ. ಇದೀಗ ಭೂಮಿಯ ದಿನವು ಜಾಗತಿಕ ಆಂದೋಲನ ವಾಗಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಗುರಿಯನ್ನು ಹೊಂದಿದೆ.೨೦೨೪ ರ ವಿಶ್ವ ಭೂ ದಿನದ ಥೀಮ್ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್’

ಈ ಬಾರಿಯ ಥೀಮ್ ಏನೆಂದರೆ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್’, ಇದು ಭೂಮಿಯ ಮೇಲೆ ಪ್ಲಾಸ್ಟಿಕ್ ಮಾಲಿನ್ಯದ ಭೀಕರ ಪರಿಣಾಮಗಳ ಬಗ್ಗೆ ಬೆಳಕು ಚೆಲ್ಲುವ ಮೂಲಕ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಗಟ್ಟುವ ಸಂಬAಧ ಜಾಗೃತಿ ಮೂಡಿಸುವಲ್ಲಿ ಕೇಂದ್ರೀಕರಿಸುತ್ತದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಇದರ ಉತ್ಪಾದನೆ ಯನ್ನು ತೀವ್ರವಾಗಿ ಕಡಿಮೆ ಮಾಡಲು ಜಾಗತಿಕ ಆಂದೋಲನವನ್ನು ಉತ್ತೇಜಿಸುವ ಗುರಿಯನ್ನು ಹೊಂದಲಾಗಿದೆ.

ಅAದರೆ, ೨೦೪೦ ರ ವೇಳೆಗೆ ಎಲ್ಲಾ ರೀತಿಯ ಪ್ಲಾಸ್ಟಿಕ್‌ಗಳ ಉತ್ಪಾದನೆಯಲ್ಲಿ ಶೇ. ೬೦ ರಷ್ಟು ಕಡಿತಕ್ಕೆ ಆದ್ಯತೆ ನೀಡಿ, ಕ್ರಮೇಣ ಹಂತ ಹಂತವಾಗಿ ಪ್ಲಾಸ್ಟಿಕ್‌ಗೆ ಪರ್ಯಾಯ ವಾಗಿ ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಹೆಚ್ಚಿನ ಉತ್ತೇಜನ ನೀಡುವ ಗುರಿ ಹೊಂದಲಾಗಿದೆ.

ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕಾಗಿದೆ.

ಒಮ್ಮೆ ಬಳಸಿ ಎಸೆಯುವ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ನಿರ್ಮೂಲನೆ ಮಾಡುವುದು: ಉದಾ: ಪ್ಲಾಸ್ಟಿಕ್ ಕೈಚೀಲಗಳು, ಬಾಟಲ್‌ಗಳು, ಸ್ಟಾçಗಳು ಇತ್ಯಾದಿ ಮರುಬಳಕೆ ಮಾಡಬಹುದಾದ ಪರ್ಯಾಯ ವಸ್ತುಗಳ ಬಳಕೆಗೆ ಆದ್ಯತೆ ನೀಡುವುದು.

ಜವಾಬ್ದಾರಿಯುತವಾಗಿ ಮರುಬಳಕೆ ಮತ್ತು ಮಿಶ್ರಗೊಬ್ಬರ ತಯಾರಿಕೆ

ಪ್ಲಾಸ್ಟಿಕ್‌ಗಳ ಸರಿಯಾದ ಮರುಬಳಕೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ಆಹಾರದ ಅವಶೇಷ ಗಳಿಂದ ಮಿಶ್ರಗೊಬ್ಬರ ತಯಾರಿಕೆಗೆ ಒತ್ತು ನೀಡುವುದು.

ಜಾಗೃತಿ ಮೂಡಿಸುವುದು

ವಿಶ್ವ ಭೂದಿನವು ನಮ್ಮ ಪರಿಸರದ ಪರಿಸ್ಥಿತಿ, ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ, ಮಾಲಿನ್ಯ, ಜೀವ ವೈವಿಧ್ಯದ ನಷ್ಟ, ಅರಣ್ಯ ನಾಶ ಮತ್ತಿತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ಇದರಿಂದ ವಿಶ್ವಾದ್ಯಂತ ಪರಿಸರ ಕಾರ್ಯಕರ್ತರು ಮತ್ತು ಸಂಘ-ಸAಸ್ಥೆಗಳು ಹಾಗೂ ಜನ ಸಮುದಾಯ ಸೇರಿಕೊಂಡು ಒಗ್ಗಟ್ಟಿನ ಪ್ರಜ್ಞೆಯನ್ನು ಬೆಳೆಸಿಕೊಂಡು ಭೂ ಸಂರಕ್ಷಣೆಗೆ ಪಣ ತೊಡಲು ಸಹಕಾರಿಯಾಗುತ್ತದೆ.

ಭವಿಷ್ಯತ್ತಿಗಾಗಿ ನಾವು ನೆಲ-ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ ವೈವಿಧ್ಯ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕಿದೆ. ಪರಿಸರದ ಬಗ್ಗೆ ನಿರ್ಲಕ್ಷö್ಯ ವಹಿಸಿದಲ್ಲಿ ಭವಿಷ್ಯತ್ತಿನಲ್ಲಿ ತೀವ್ರ ಗಂಡಾAತರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.

ನದಿ, ಕೆರೆ ಹಾಗೂ ಜಲ ಮೂಲಗಳು ಸೇರಿದಂತೆ ಅಂತರ್ಜಲ ಸಂರಕ್ಷಣೆಗೆ ನಾವು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಪ್ರಕೃತಿಯಲ್ಲಿ ಈಗಾಗಲೇ ನೂರಾರು ಪಕ್ಷಿ ಪ್ರಬೇಧ ಗಳು ಶಾಶ್ವತವಾಗಿ ನಾಶಗೊಂಡಿವೆ. ಅಪರೂಪದ ಸಸ್ಯ ಮತ್ತು ಜೀವಿಗಳನ್ನೊಳಗೊಂಡ ಅರಣ್ಯ ಹಾಗೂ ಜೀವಿ ವೈವಿಧ್ಯ ಸಂಪತ್ತನ್ನು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆಗೆ ನಾವು ಹೆಚ್ಚಿನ ಕಾಳಜಿ ವಹಿಸದಿದ್ದಲ್ಲಿ ಇಡೀ ಜೀವ ಸಂಕುಲವೇ ನಾಶವಾಗುವ ಅಪಾಯವಿದೆ.

ಇರುವುದೊಂದೇ ಭೂಮಿ, ಇದನ್ನು ಸಂರಕ್ಷಿಸಿ

ಪ್ರಕೃತಿಯಲ್ಲಿ ಏಕಾಂಗಿ ಎಂಬುದೇ ಇಲ್ಲ. ಪ್ರತಿಯೊಂದು ಜೀವಿಗೂ ಜೀವಿಸುವ ಸಮಾನ ಹಕ್ಕಿದೆ. ಜೀವಿಗಳಿರುವ ಏಕೈಕ ಗ್ರಹವಾದ ಭೂಮಿಯೇ ನಮ್ಮ ಮನೆ, ಹಾಗಾಗಿ ಎಲ್ಲಾ ಜೀವಿಗಳು ಜೀವಿಸಲು ಇರುವುದೊಂದೇ ಭೂಮಿ. ನಾವು ಇದನ್ನು ಸಂರಕ್ಷಿಸಿ, ಸಂಪೋಷಿಸಿ ಮುಂದಿನ ಪೀಳಿಗೆಗೆ ಜೋಪಾನವಾಗಿ ಹಸ್ತಾಂತರಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಭೂಮಿಯಲ್ಲಿರುವ ಅಮೂಲ್ಯ ಸಂಪತ್ತನ್ನು ರಕ್ಷಿಸುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ. ಭಾರತೀಯರಾದ ನಮಗೆ ಭೂಮಿಯ ಪಾವಿತ್ರö್ಯದ ಕಲ್ಪನೆ ಹೊಸದೇನಲ್ಲ. ಪುರಾತನ ಕಾಲದಿಂದಲೂ ಭೂಮಿಯನ್ನು ‘ಭೂಮಾತೆ’ ಎಂದು ಕರೆದು ಗೌರವ ನೀಡುತ್ತಾ ಬಂದವರು ನಾವು. ಭೂದಿನದ ಸಂದರ್ಭ ನಮಗೆ ಮತ್ತು ಭೂಮಿಗೆ ಇರುವ ಸಂಬAಧವನ್ನು ನೆನಪಿಸಿಕೊಳ್ಳುವ ದಿನ. ನಾವು ನಿಸರ್ಗದಿಂದ ಅದೆಷ್ಟೇ ದೂರ ಬಂದರೂ ನಮ್ಮ ಮತ್ತು ಭೂಮಿಯ ಸಂಬAಧ ಮಾತ್ರ ಸಡಿಲವಾಗುವುದಿಲ್ಲ. ನಮ್ಮ ಪ್ರತಿಯೊಂದು ಚಟುವಟಿಕೆಯೂ ಆ ಸಂಬAಧವನ್ನು ಉತ್ತಮ ಗೊಳಿಸುತ್ತದೆ ಇಲ್ಲವೆ ಬಿಗಡಾಯಿ ಸುತ್ತದೆ. ಯಾವುದು ಉತ್ತಮ ಗೊಳಿಸುತ್ತದೆ ಎಂಬ ತಿಳುವಳಿಕೆ ನಮಗಿರಬೇಕು.

ಇಂದು ನಾವು ಗಾಳಿಶಕ್ತಿ, ಸೌರಶಕ್ತಿ, ಜೀವದ್ರವ್ಯಶಕ್ತಿ (ಜೈವಿಕ ಇಂಧನ), ಅಲೆಶಕ್ತಿಗಳೆಲ್ಲವನ್ನೂ ಉಪಯೋಗಿಸುತ್ತಿದ್ದೇವಾದರೂ ಫಾಸಿಲ್ ಇಂಧನ(ಪೆಟ್ರೋಲಿಯA) ಗಳು ಇಲ್ಲದಿದ್ದರೆ ನಮ್ಮ ಒಂದು ದಿನವನ್ನೂ ಕಳೆಯುವುದು ನಮಗೆ ಕಷ್ಟವಾಗುತ್ತಿದೆ. ಈ ಬಗೆಯೆ ಪೆಟ್ರೋಲ್ ದಾಸ್ಯದಿಂದ ಹೊರಬರುವ ಮಾರ್ಗಗಳನ್ನು ನಾವು ಆದಷ್ಟು ಶೀಘ್ರವಾಗಿ ಹುಡುಕಬೇಕಿದೆ.

ವೈಯಕ್ತಿಕ ಮಟ್ಟದಲ್ಲಿ ನಮ್ಮ ನಡವಳಿಕೆಗಳು ಬದಲಾಗಬೇಕಿದೆ. ಪರಿಸರ ರಕ್ಷಣೆಯ ಕಾನೂನುಗಳಿಗೆ ನಾವೆಲ್ಲ ಬದ್ಧರಾಗಬೇಕಾಗಿದೆ. ಸಾಮೂಹಿಕ ಸ್ತರದಲ್ಲಿ ಇಡೀ ಸಮಾಜವೇ ಒಂದಾಗಿ ಭೂ ಸಂರಕ್ಷಣೆಯಲ್ಲಿ ತೊಡಗಬೇಕಾಗಿದೆ. ನಮ್ಮ ಅಜ್ಞಾನದಿಂದಾಗಿ ಅಥವಾ ನಿರ್ಲಕ್ಷö್ಯದಿಂದಾಗಿ ಭೂಮಿಗೆ ಮತ್ತು ಇತರ ಭೂವಾಸಿಗಳಿಗೆ ಏನೇನು ಅನ್ಯಾಯ, ಅಪಚಾರವಾಗುತ್ತಿದೆ ಎಂಬುದನ್ನು ನಾವು ಮನಗಾಣಬೇಕಿದೆ. ಆದ್ದರಿಂದ ನಿಜವಾದ ಭೂ ದಿನಾಚರಣೆ ನಮ್ಮ ನಮ್ಮ ಮನೆಗಳಲ್ಲಿ, ಸಮುದಾಯದಲ್ಲಿ ನಸುಕಿನಿಂದಲೇ ಆರಂಭವಾಗ ಬೇಕಿದೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಬಳಕೆಯನ್ನು ಆದಷ್ಟು ತ್ಯಜಿಸಿ ಪರ್ಯಾಯವಾಗಿ ಬಟ್ಟೆ, ಸೆಣಬಿನ ಬ್ಯಾಗ್ ಬಳಕೆಗೆ ಒತ್ತು ಕೊಡುವ ದಿನ ಇದು.

ಮಳೆ ನೀರನ್ನು ಸಂಗ್ರಹಿಸಿ ಬಳಸಲು ನಿರ್ಧರಿಸಿ ಕಾರ್ಯ ಪ್ರವೃತರಾಗುವ ದಿನ ಇದು.

ಮನೆಯಿಂದ ಹತ್ತಿರದ ಸ್ಥಳಗಳಿಗೆ ತೆರಳಲು ವಾಹನದ ಬದಲಿಗೆ ಬೈಸಿಕಲ್‌ಅನ್ನು ಬಳಸುತ್ತೇನೆ ಎಂಬ ನಿರ್ಣಯ ಕೈಗೊಳ್ಳುವ ದಿನ ಇದು.

ಹೀಗೆ ಇನ್ನೂ ಹತ್ತು ಹಲವು ಪರಿಸರಪೂರಕ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ನಾವು ಭೂ ದಿನವನ್ನು ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಜ್ಞೆ ಕೈಗೊಳ್ಳೋಣ.

ಈ ದಿಸೆಯಲ್ಲಿ ನಾವು ಪರಿಸರಕ್ಕೆ ಯಾವುದೇ ಧಕ್ಕೆಯನ್ನುಂಟು ಮಾಡದೆ ಭೂಮಿಯನ್ನು ಸಂರಕ್ಷಿಸಬೇಕಿದೆ. ಭೂ ಮಾಲಿನ್ಯ ತಡೆಗಟ್ಟುವ ಮೂಲಕ ನೆಲ-ಜಲ, ಜೀವಿವೈವಿಧ್ಯ ಹಾಗೂ ಪರಿಸರ ಸಂರಕ್ಷಣೆಗೆ ದಿಟ್ಟ ಹೆಜ್ಜೆ ಇಡಬೇಕಿದೆ. ಈ ದಿಸೆಯಲ್ಲಿ ನಮ್ಮ ನಡಿಗೆ ಪರಿಸರದೆಡೆಗೆ ಆಗಬೇಕಿದೆ.

ನಮ್ಮ ಮನೆಯ ಬಗ್ಗೆ ಕಾಳಜಿ ವಹಿಸಿದಂತೆಯೇ ನಮ್ಮನ್ನು ರಕ್ಷಿಸುತ್ತಿರುವ ಭೂಮಿಯ ಸಂರಕ್ಷಣೆ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕಿದೆ.

ಹಾಗಾದರೆ, ಬನ್ನಿ ಇರುವುದೊಂದೇ ಭೂಮಿ ; ಇದನ್ನು ಸಂರಕ್ಷಿಸಿ, ಸಂಪೋಷಿಸಿ ಮುಂದಿನ ಪೀಳಿಗೆಗೆ ವಸುಂಧರೆಯನ್ನು ಪುನಃಶ್ಚೇತ ಗೊಳಿಸೋಣ. ಭೂಮಿಯನ್ನು ಪ್ಲಾಸ್ಟಿಕ್‌ನಿಂದ ಮುಕ್ತಗೊಳಿಸೋಣ ಬನ್ನಿ:

- ಟಿ.ಜಿ. ಪ್ರೇಮಕುಮಾರ್, ಮುಖ್ಯ ಶಿಕ್ಷಕರು, ಸರಕಾರಿ ಪ್ರೌಢಶಾಲೆ, ಕೂಡುಮಂಗಳೂರು, ಮೊ: ೯೪೪೮೫ ೮೮೩೫೨