ಮಡಿಕೇರಿ, ಏ.೨೧ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸಲು ನಮ್ಮ ನಡೆ ಮತಗಟ್ಟೆ ಕಡೆ ಕಾಲ್ನಡಿಗೆ ಜಾಥಾವನ್ನು ನಗರದ ಕಾವೇರಿ ಕಲಾಕ್ಷೇತ್ರದ ಆವರಣದಿಂದ ಆಯೋಜಿಸಲಾಗಿತ್ತು. ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ ಚಾಲನೆ ನೀಡಿದರು.

ಜಾಥಾ ನಗರದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ಹಿಲ್ ರಸ್ತೆಯಲ್ಲಿರುವ ನಗರಸಭಾ ಪ್ರಾಥಮಿಕ ಶಾಲಾ ಆವರಣ ತಲುಪಿತು. ಅಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ವರ್ಣೀತ್ ನೇಗಿ ಅವರು ಮತದಾನ ದ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಂವಿಧಾನ ತಮ್ಮೆಲ್ಲರಿಗೂ ಮತದಾನದ ಹಕ್ಕು ನೀಡಿದೆ, ನೀವು ಮತದಾನ ಮಾಡಿ ನಿಮ್ಮವರನ್ನು ಮತ ಚಲಾಯಿಸಲು ಪ್ರೇರೇಪಿಸಿ ಎಂದು ಕರೆ ನೀಡಿದರು.

ತಾ. ೨೬ ರಂದು ಬೆಳಿಗ್ಗೆ ೭ ಗಂಟೆಯಿAದ ಸಂಜೆ ೬ ಗಂಟೆವರೆಗೆ ಜಿಲ್ಲಾದ್ಯಂತ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಚೀಟಿ, ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲಾಗುತ್ತಿದೆ. ಮತದಾರರ ಚೀಟಿ ಇನ್ನೂ ದೊರೆಯದಿದ್ದಲ್ಲಿ ಸಂಬAಧಪಟ್ಟ ಕ್ಷೇತ್ರ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಪಡೆಯಬಹುದು. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಗಿ ಸೇರಿದಂತೆ ಇತರೆ ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದು ಎಂದರು.

ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರು ಮತದಾರರಿಗೆ ವೋಟರ್ ಸ್ಲಿಪ್ ವಿತರಿಸಿ ಮಾತನಾಡಿ, ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಹಲವಾರು ಮತದಾನ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಿ ಜಿಲ್ಲೆಯ ನಾಗರಿಕರಿಗೆ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ತಾ. ೨೬ ರಂದು ತಪ್ಪದೆ ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಂದು ಕರೆ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶೇಖರ ಸಾರ್ವಜನಿಕರು, ಅಧಿಕಾರಿಗಳಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾ ಸಾಗರ ಕಲಾ ತಂಡದಿAದ ಮತದಾನ ನಮ್ಮ ಹಕ್ಕು ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.