ಸೋಮವಾರಪೇಟೆ, ಏ. ೨೨ : ದೇಶದ ಸಂವಿಧಾನ-ಪ್ರಜಾಪ್ರಭುತ್ವದ ರಕ್ಷಣೆಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆAದು ಮಾಜಿ ಸಂಸದ ಹಾಗೂ ವಿರೋಧ ಪಕ್ಷದ ಮಾಜೀ ನಾಯಕ ವಿ.ಎಸ್. ಉಗ್ರಪ್ಪ ಕರೆ ನೀಡಿದರು. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ಜೇಸೀ ವೇದಿಕೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷö್ಮಣ್ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ರೈತರ, ಅಲ್ಪಸಂಖ್ಯಾತರ ವಿರೋಧಿಯಾಗಿ ಸರ್ಕಾರ ನಡೆಸಿದೆ. ಸರ್ಕಾರಿ ಸ್ವಾಯುತ್ತ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ. ಮತ್ತೊಂದು ಅವಧಿಗೆ ಅಧಿಕಾರ ದೊರೆತರೆ ಸಂವಿಧಾನ, ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ್ದ ೫ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ. ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ, ಯುವನೀತಿ, ಅನ್ನಭಾಗ್ಯ ಯೋಜನೆಗಳು ರಾಜ್ಯದ ಜನರಿಗೆ ತಲುಪಿವೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ.

ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಕೈಹಿಡಿಯುತ್ತದೆ ಎಂದು ಜನರಿಗೆ ಗೊತ್ತಾಗಿದೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೊಡಗಿನಿಂದ ಬಿಜೆಪಿಯನ್ನು ಬುಡಸಹಿತ ಕಿತ್ತು ಹಾಕಿದ್ದೇವೆ. ಅದರ ಪರಿಣಾಮ ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂದರು.

ಕಳೆದ ಹತ್ತು ತಿಂಗಳಲ್ಲಿ ಕೊಡಗಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ನೆನೆಗುದಿಗೆ ಬಿದ್ದಿದ್ದ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನ ಉದ್ಘಾಟನೆ ಮಾಡಲು, ಕಕ್ಕೆಹೊಳೆ, ಕಬ್ಬಿಣ ಸೇತುವೆಗೆ ನಿರ್ಮಾಣಕ್ಕೆ ಅನುದಾನ ಒದಗಿಸಲು, ಇಂದಿರಾ ಕ್ಯಾಂಟೀನ್ ಮಾಡಲು ನಾನೇ ಬರಬೇಕಾಯಿತು. ಮಡಿಕೇರಿ, ವೀರಾಜಪೇಟೆ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ೫೦೦ ಕೋಟಿ ರೂ.ಗಳಷ್ಟು ಅನುದಾನ ಸಿಕ್ಕಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಬಂದರೆ ಇನ್ನಷ್ಟು ವಿಶೇಷ ಅನುದಾನ ಲಭಿಸಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಕೊಡಗಿನ ಈರ್ವರು ಶಾಸಕರು ಕೇವಲ ೧೦ ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಲಕ್ಷö್ಮಣ್ ಅವರು ಸಮರ್ಥರಾಗಿದ್ದು, ವಿದ್ಯಾವಂತ ನಾಯಕನನ್ನು ಆರಿಸಿ ಕಳುಹಿಸಬೇಕಾಗಿದೆ ಎಂದು ಅಭಿಪ್ರಾಯಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್. ಚಂದ್ರಮೌಳಿ ಮಾತನಾಡಿ, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಬ್ರಹ್ಮನಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದವರು ಇದೀಗ ಮನೆಯಲ್ಲಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿದರು. ಕೆಪಿಸಿಸಿ ಸದಸ್ಯೆ ಕೆ.ಪಿ.ಚಂದ್ರಕಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಡಿಸಿಸಿ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಪಕ್ಷದ ಪ್ರಮುಖರಾದ ಹನೀಫ್, ವಿ.ಪಿ. ಶಶಿಧರ್, ಬಗ್ಗನ ಅನಿಲ್ ಅವರುಗಳು ಮಾತನಾಡಿದರು.

ವೇದಿಕೆಯಲ್ಲಿ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎ. ಯಾಕೂಬ್, ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ನಟೇಶ್ ಗೌಡ, ಪ್ರಮುಖರಾದ ಸುರಯ್ಯ ಅಬ್ರಾರ್, ಮಿಥುನ್ ಹಾನಗಲ್, ಬಿ.ಇ. ಜಯೇಂದ್ರ, ಎಚ್.ಆರ್. ಸುರೇಶ್, ಕೆ.ಎ. ಆದಂ, ಕೆ.ಜೆ. ಸುನಿಲ್, ಪ್ರದೀಪ್ ರೈ, ತೆನ್ನೀರ ಮೈನಾ, ಶೀಲಾ ಡಿಸೋಜ, ಹಂಸ, ಸಿ.ಪಿ.ಐ.ನ ಸೋಮಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.