ಕೂಡಿಗೆ, ಏ. ೨೨: ಸಮೀಪದ ಹೆಬ್ಬಾಲೆ ಗ್ರಾಮದಲ್ಲಿದಲ್ಲಿನ ಕಲ್ಯಾಣಮಂಟಪದಲ್ಲಿ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಊಟ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಜಿಲ್ಲೆಯ ೨೧ ಮಂದಿ ಆರೋಗ್ಯ ಇಲಾಖೆಯ ವತಿಯಿಂದ ಚಿಕಿತ್ಸೆ ಪಡೆದು ಚೇತರಿಕೆಗೊಂಡಿರುತ್ತಾರೆ ಎಂದು ಜಿಲ್ಲಾ ಅರೋಗ್ಯ, ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ, ಕೆ.ಎಂ. ಸತೀಶ್ ತಿಳಿಸಿದ್ದಾರೆ.
ಅವರು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಇಲಾಖೆಯ ವತಿಯಿಂದ ಮುಂಜಾಗ್ರತಾ ಕ್ರಮವನ್ನು ವಹಿಸುವ ಬಗ್ಗೆ ಸಂಬAಧಿಸಿದ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.
ಈಗಾಗಲೇ ಅಸ್ವಸ್ಥ ಗೊಂಡವರು ಕುಶಾಲನಗರ, ಮತ್ತು ಮಡಿಕೇರಿಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮುನ್ನೆಚ್ಚರಿಕೆಯಾಗಿ ಸೊಂಕು ತಗಲಿದವರ ಮನೆಗಳಿಗೆ ಆಶಾ ಕಾರ್ಯಕರ್ತೆಯರು, ಮತ್ತು ಆರೋಗ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಉಪ ಗ್ರಾಮಗಳಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಅವರುಗಳ ಮನೆಗಳ ಸುತ್ತಮುತ್ತಲು ಔಷದಿ ಸಿಂಪಡಣೆ, ಮತ್ತು ಡಿಡಿಟಿ ಪೌಡರ್ ಸಿಂಪಡಣೆ ನಡೆಸಿದರು.
ಈ ಸಂದರ್ಭದಲ್ಲಿ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈನಾ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಸ್, ಹಿರಿಯ ಆರೋಗ್ಯ ನಿರೀಕ್ಷಕ ನಾಗೇಂದ್ರಾಚಾರಿ, ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಸಂಜಯ್ ಕುಮಾರ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ ಗಿರೀಶ್, ಸಮುದಾಯದ ಆರೋಗ್ಯ ಅಧಿಕಾರಿ ದೀಪಾ, ಸೇರಿದಂತೆ ಆಶಾ ಕಾರ್ಯಕರ್ತೆಯರು, ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು. -ಕೆ.ಕೆ. ನಾಗರಾಜಶೆಟ್ಟಿ