ಶನಿವಾರಸಂತೆ, ಏ. ೨೩: ಶಾಲಾ ಹಂತದಲ್ಲೇ ಪದವಿ ಪ್ರದಾನ ಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳಿಗೆ ಉನ್ನತ ಶಿಕ್ಷಣದ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣ ಸಂಯೋಜಕ ಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಯುಕೆಜಿ ಮತ್ತು ೫ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಪದವಿ ಪ್ರದಾನ, ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶನಿವಾರಸಂತೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮವು ಮಕ್ಕಳ ಉತ್ತಮ ಶಿಕ್ಷಣಕ್ಕೆ ಪೂರಕ ವೇದಿಕೆಯಾಗಿದೆ ಎಂದರು.

ಮುಖ್ಯ ಶಿಕ್ಷಕಿ ಚೈತ್ರಾ ಪ್ರಾಸ್ತಾವಿಕ ನುಡಿಯಾಡಿದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಹೇಮಾ ಪರಮೇಶ್, ಶಿಕ್ಷಕರು, ಪೋಷಕರು ಹಾಜರಿದ್ದರು.