ಪೊನ್ನಂಪೇಟೆ, ಏ. ೨೩: ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರಭಾವಿ ಮತದಾರಗಳನ್ನು ಭೇಟಿ ಮಾಡುವ ಮೂಲಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡುವ ಚುನಾವಣಾ ಪ್ರಚಾರ ಅಭಿಯಾನ ಇದೀಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬಿರುಸಿನಿಂದ ನಡೆಯುತ್ತಿದೆ.

ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚದ ಪ್ರಧಾನ ಕಾರ್ಯದರ್ಶಿ ಡಾ ಬಿ. ಸಿ. ನವೀನ್ ಅವರನ್ನು ಒಳಗೊಂಡ ಪದಾಧಿಕಾರಿಗಳ ತಂಡ, ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿರುವ ಪ್ರಭಾವಿ ಮತದಾರರನ್ನು ಭೇಟಿ ಮಾಡಿ ಇದೇ ತಿಂಗಳು ೨೬ರಂದು ಶುಕ್ರವಾರ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮನವಿ ಮಾಡುತ್ತಿದೆ.

ಮತದಾರರ ಭೇಟಿ ಕಾರ್ಯಕ್ರಮದಲ್ಲಿ ಮಠಾಧೀಶರು, ಆಶ್ರಮದ ಸ್ವಾಮೀಜಿಗಳು, ವಿವಿಧ ಧಾರ್ಮಿಕ ಕೇಂದ್ರದ ಮುಖ್ಯಸ್ಥರು, ನಿವೃತ್ತ ಸೇನಾಧಿಕಾರಿಗಳು, ವೈದ್ಯರು, ವಿಜ್ಞಾನಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕರು- ಉಪನ್ಯಾಸಕರು, ರಾಷ್ಟç ಮತ್ತು ಅಂತರರಾಷ್ಟಿçÃಯ ಖ್ಯಾತಿಯ ಕ್ರೀಡಾಪಟುಗಳು, ವಿವಿಧ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರು, ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿ ನಿವೃತ್ತಿಯಾದ ಅಧಿಕಾರಿಗಳು, ವಿವಿಧ ಸೇವಾ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಸಮಾಜದಲ್ಲಿ ಗೌರವದಿಂದ ಗುರುತಿಸಿಕೊಂಡ ಗಣ್ಯರನ್ನು ಖುದ್ದಾಗಿ ಭೇಟಿ ಮಾಡುತ್ತಿರುವ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಬಿಜೆಪಿಯನ್ನು ಬೆಂಬಲಿಸುವAತೆ ಮತಯಾಚಿಸುತ್ತಿದ್ದಾರೆ. ಪೊನ್ನಂಪೇಟೆಗೆ ಆಗಮಿಸಿದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ತಂಡ, ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಮುಖ್ಯಸ್ಥರನ್ನು ಭೇಟಿ ಮಾಡಿ ಮತಯಾಚಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ, ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಸಹಜವಾಗಿಯೇ ಆಯಾ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸುತ್ತಾರೆ. ಆದರೆ ಪ್ರತಿ ಚುನಾವಣೆಯಲ್ಲಿ ಸಮಾಜದ ಪ್ರಭಾವಿ ವ್ಯಕ್ತಿಗಳ ಮತಗಳೇ ಯೋಗ್ಯ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಮತದಾರರೇ ಚುನಾವಣೆಯ ಬೆನ್ನೆಲುಬಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಆಡಳಿತದ ಪರ ಅವರೆಲ್ಲರೂ ಮತ್ತೊಮ್ಮೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವು ಶತಸಿದ್ದ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮತದಾರರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಚೋಡುಮಾಡ ದಿನೇಶ್, ಕಾರ್ಯದರ್ಶಿ ಆಲೆಮಾಡ ಸುಧೀರ್, ಬಿಜೆಪಿ ರೈತ ಮೋರ್ಚಾದ ವೀರಾಜಪೇಟೆ ಮಂಡಲ ಅಧ್ಯಕ್ಷÀ ಗುಡ್ಡಮಾಡ ಅಪ್ಪಿ ಸುಬ್ರಮಣಿ, ಪದಾಧಿಕಾರಿಗಳಾದ ಕಾಕಮಾಡ ಆದರ್ಶ್, ಆಲೆಮಾಡ ತಿಮ್ಮಯ್ಯ, ಕಿರಿಯಮಾಡ ಮಿಲನ್ ಅಳಮೆಂಗಡ ಸೋಮಯ್ಯ ಮೊದಲಾದವರು ಹಾಜರಿದ್ದರು.