ಪೊನ್ನಂಪೇಟೆ, ಏ. ೨೩: ಯಾವುದೇ ಅಭಿವೃದ್ಧಿ ಮತ್ತು ಜನಪರ ರಾಜಕಾರಣವನ್ನು ಮುಂದಿಟ್ಟು ಚುನಾವಣೆ ಎದುರಿಸಲು ಹಿಂದಿನಿAದಲೂ ವಿಫಲಗೊಂಡಿ ರುವ ಭಾರತೀಯ ಜನತಾ ಪಕ್ಷ ಇದೀಗ ಹೆಣದ ಮೇಲಿನ ರಾಜಕೀಯ ಮಾಡುತ್ತಿದೆ. ಬಿಜೆಪಿಯವರ ಈ ಕೀಳುಮಟ್ಟದ ಚುನಾವಣಾ ಪ್ರಚಾರ ತಂತ್ರ ಕರ್ನಾಟಕದ ರಾಜಕಾರಣಕ್ಕೆ ಕಪ್ಪು ಚುಕ್ಕೆ ಮೂಡಿಸುತ್ತಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಪಿ.ಎ. ಹನೀಫ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಮಾಡದ ಅಭಿವೃದ್ಧಿ ಕಾರ್ಯಗಳನ್ನು ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ ೧೦ ತಿಂಗಳಿನಲ್ಲಿ ಮಾಡಿ ಮುಗಿಸಿದೆ. ಅಲ್ಲದೆ ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಘೋಷಿಸಿದ ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನ ಗೊಳಿಸಲಾಗಿದೆ. ಈ ಕಾರಣದಿಂದ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಧೈರ್ಯದಿಂದ ಮತದಾರರ ಬಳಿ ತೆರಳಿ ಮತಯಾಚಿಸುತ್ತಿದೆ. ಇದರಿಂದ ವರ್ಚಸ್ಸು ಕಳೆದುಕೊಂಡಿರುವ ಕೊಡಗಿನ ಬಿಜೆಪಿಯ ನಾಯಕರು, ಎಂಎಲ್ಸಿ ಮತ್ತು ಮಾಜಿ ಜನ ಪ್ರತಿನಿಧಿಗಳು ಹೆಣದ ಮೇಲೆ ರಾಜಕೀಯ ಮಾಡುವ ಚಿಂತೆಯಲ್ಲಿದ್ದಾರೆ. ಹೆಣವನ್ನು ಮುಂದಿಟ್ಟುಕೊAಡು ಮಾಡುತ್ತಿರುವ ಬಿಜೆಪಿಯವರ ಈ ರಾಜಕೀಯ ಪಕ್ಷ ರಾಜಕಾರಣಕ್ಕೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.

ಕೊಡಗಿನ ನೈಜ್ಯ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಇದುವರೆಗೂ ಯಾವುದೇ ಧ್ವನಿಯೆತ್ತದ ಎಂಎಲ್ಸಿ ಎಂ.ಪಿ. ಸುಜಾ ಕುಶಾಲಪ್ಪ ಅವರು, ಈ ಪ್ರಕರಣವನ್ನು ಚುನಾವಣಾ ಪ್ರಚಾರ ತಂತ್ರಕ್ಕೆ ಬಳಸಿ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದಾರೆ ಎಂದು ಆರೋಪಿಸಿ ರುವ ಹನೀಫ್, ಕಳೆದ ಎರಡು ದಿನಗಳ ಹಿಂದೆ ಸುಂಟಿಕೊಪ್ಪದಲ್ಲಿ ನಡೆದ ಅಪಘಾತ ಪ್ರಕರಣವನ್ನು ಕಾಂಗ್ರೆಸ್ ಪಕ್ಷದ ಪ್ರಬುದ್ಧತೆ ಯಿಂದಾಗಿ ಹೆಣದ ರಾಜಕೀಯಕ್ಕೆ ಬಳಕೆ ಮಾಡಿಲ್ಲ. ಧರ್ಮದ ಆಧಾರದಲ್ಲಿ ಜನರ ಭಾವನೆಯನ್ನು ಕೆರಳಿಸಿ ಮತಪಡೆಯುವ ಬಿಜೆಪಿಯವರ ಎಂದಿನ ಚುನಾವಣಾ ತಂತ್ರಕ್ಕೆ ಕೊಡಗಿನ ಪ್ರಜ್ಞಾವಂತ ಮತದಾರರು ಇನ್ನು ಬಲಿಯಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯದ್ ಬಾವ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೆ.ಜೆ. ಪೀಟರ್, ಪದಾಧಿಕಾರಿಗಳಾದ ಕೌಸರ್, ಇಬ್ರಾಹಿಂ, ರಿಯಾಜ್ ಮತ್ತು ಅಜೀದ್ ಉಪಸ್ಥಿತರಿದ್ದರು.