ಮಡಿಕೇರಿ, ಏ. ೨೩ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿ ಹಾಗೂ ಕುಶಾಲನಗರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಿ ಜನರಲ್ಲಿ ಸ್ಥೆöÊರ್ಯ ತುಂಬಲಾಯಿತು.

ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಡಿಕೇರಿ ಪೊಲೀಸ್ ಉಪವಿಭಾಗ, ಜಿಲ್ಲಾ ಶಸಸ್ತç ದಳ (ಡಿ.ಎ.ಆರ್.), ಗುಜರಾತ್ ರಿಸರ್ವ್ ಫೋರ್ಸ್ ಸಿಬ್ಬಂದಿಗಳು ಶಸ್ತçಸಜ್ಜಿತರಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಡಿಕೇರಿ ಡಿ.ವೈ.ಎಸ್.ಪಿ. ಮಹೇಶ್, ನಗರ ವೃತ್ತ ನಿರೀಕ್ಷಕ ಪಿ.ಕೆ. ರಾಜು, ಮಹಿಳಾ ಪೊಲೀಸ್ ಕುಶಾಲನಗರ: ಕುಶಾಲನಗರ ಬೈಚನಹಳ್ಳಿ ಪೆಟ್ರೋಲ್ ಬಂಕ್ ಬಳಿಯಿಂದ ಹೊರಟ ಪಥ ಸಂಚಲನಕ್ಕೆ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‌ರಾಜ್ ಚಾಲನೆ ನೀಡಿದರು.

ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ನೇತೃತ್ವದಲ್ಲಿ ಏಳು ಠಾಣೆ ಇನ್ಸ್ಪೆಕ್ಟರ್ ಮಂಜು, ಸೆನ್ ಸ್ಟೇಷನ್ ಇನ್ಸ್ಪೆಕ್ಟರ್ ಶ್ರೀಕಾಂತ್, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಡಿಎಆರ್ ಇನ್ಸ್ಪೆಕ್ಟರ್ ಚನ್ನನಾಯಕ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಂದಿ ಇನ್ಸ್ಪೆಕ್ಟರ್‌ಗಳು, ಉಪ ನಿರೀಕ್ಷಕರುಗಳು ಸಿಬ್ಬಂದಿ, ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಗುಜರಾತ್ ರಾಜ್ಯದ ವಿಶೇಷ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು, ಯೋಧರು ಸೇರಿದಂತೆ ಸುಮಾರು ೩೦೦ಕ್ಕೂ ಅಧಿಕ ಮಂದಿ ಕುಶಾಲನಗರ ಪಟ್ಟಣ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಪಥ ಸಂಚಲನ ನಡೆಸಿದರು.