ಹೊಟೇಲ್‌ನಲ್ಲಿ ಅಗ್ನಿ ಅವಘಡ; ಆರು ಮಂದಿ ಸಾವು

ಪಾಟ್ನಾ, ಏ. ೨೫: ರಾಜಧಾನಿ ಪಾಟ್ನಾದ ಹೊಟೇಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ೬ ಜನರು ಸಾವನ್ನಪ್ಪಿದ್ದಾರೆ. ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಇರುವ ಹೊಟೇಲ್ ಒಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಈ ದುರಂತ ಸಂಭವಿಸಿದೆ. ೨೦ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಅಗ್ನಿ ಅವಘಡದಿಂದಾಗಿ ಕಟ್ಟಡದ ಮುಂಭಾಗದಲ್ಲಿರುವ ಸೇತುವೆ ಮೇಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಟೇಷನ್ ರಸ್ತೆಯೂ ಸಂಪೂರ್ಣ ಬಂದ್ ಆಗಿತ್ತು. ಬೆಂಕಿ ಕಾಣಿಸಿಕೊಂಡ ಸುಮಾರು ಒಂದೂವರೆ ಗಂಟೆಗಳ ನಂತರ ಮೃತದೇಹಗಳನ್ನು ಹೊರ ತೆಗೆಯಲಾಯಿತು. ಪಾಲ್ ಹೊಟೇಲ್‌ನಲ್ಲಿ ಬೆಂಕಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಟ್ನಾ ಎಸ್.ಪಿ. ರಾಜೀವ್ ಮಿಶ್ರಾ ಖಚಿತಪಡಿಸಿದ್ದಾರೆ. ಸತ್ತವರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕು ಅಂತಸ್ತಿನ ಕಟ್ಟಡವನ್ನು ಆವರಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವಾಯುಪಡೆಯ ಮಾನವ ರಹಿತ ವಿಮಾನ ಪತನ

ಜೈಸಲ್ಮೇರ್, ಏ. ೨೫: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಮಾನವ ರಹಿತ ಬೇಹುಗಾರಿಕಾ ವಿಮಾನ ಪತನಗೊಂಡಿದ್ದು, ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಜೈಸಲ್ಮೇರ್ ಜಿಲ್ಲಾ ಕೇಂದ್ರದಿAದ ೩೦ ಕಿಲೋಮೀಟರ್ ದೂರದಲ್ಲಿರುವ ರೋಜಾನಿ ಕಿ ಧನಿ ಜಜಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಈ ಬಗ್ಗೆ ಮಾಹಿತಿ ಬಂದ ತಕ್ಷಣ ಜಿಲ್ಲಾಡಳಿತದೊಂದಿಗೆ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತದಿಂದ ವಿಮಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳವು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಈ ವಿಮಾನವನ್ನು ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ನಿಯೋಜಿಸಲಾಗಿತ್ತು. ಜೈಸಲ್ಮೇರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌಧರಿ ಘಟನೆ ಬಗ್ಗೆ ಮಾತನಾಡಿ, ವಿಮಾನವು ತನ್ನ ದೈನಂದಿನ ತರಬೇತಿ ವೇಳೆ ಅಪಘಾತಕ್ಕೀಡಾಗಿ ಗ್ರಾಮೀಣ ಪ್ರದೇಶದ ಖಾಲಿ ಜಾಗದಲ್ಲಿ ಬಿದ್ದಿದ್ದು, ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಅರುಣಾಚಲದಲ್ಲಿ ಭೂಕುಸಿತ: ಕೊಚ್ಚಿ ಹೋದ ಹೆದ್ದಾರಿ

ಗುವಾಹಟಿ, ಏ. ೨೫: ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ಚೀನಾ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಮಳೆಗೆ ಕೊಚ್ಚಿಕೊಂಡು ಹೋಗಿದ್ದು, ಗ್ರಾಮಕ್ಕೆ ಸಂಪರ್ಕ ಕಡಿತವಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟಿçÃಯ ಹೆದ್ದಾರಿ-೩೧೩ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ. ಚೀನಾ ಗಡಿಗೆ ಹೊಂದಿಕೊAಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕಡಿದುಹೋಗಿದೆ. ಘಟನೆಯ ಬಗ್ಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬAಧ ತಮ್ಮ ಎಕ್ಸ್ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸತತ ಮಳೆಯಿಂದಾಗಿ ಈ ಘಟನೆ ನಡೆದಿದೆ. ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ ರಸ್ತೆಯು ದೇಶದ ಇತರ ಭಾಗಗಳಿಗೆ ಸಂಪರ್ಕಿಸುವ ಕಾರಣ ಶೀಘ್ರದಲ್ಲಿ ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಈ ನಡುವೆ ರಸ್ತೆ ಕೊಚ್ಚಿ ಹೋಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹೆದ್ದಾರಿಯ ಒಂದು ಭಾಗವೇ ಕಾಣೆಯಾಗಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.