ಮಡಿಕೇರಿ, ಏ. ೨೪: ತಾ.೨೬ ರಂದು ಜರುಗಲಿರುವ ಲೋಕಸಭಾ ಚುನಾವಣೆ ಸಂಬAಧ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ ಹಾಗೂ ವೀರಾಜಪೇಟೆ ಚುನಾವಣಾ ಕಾರ್ಯಗಳಿಗೆ ಹಾಗೂ ಪೊಲೀಸ್ ಬಂದೋಬಸ್ತ್ಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜಿಸಲಾಗಿದೆ.

ಆದ್ದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ, ಮಡಿಕೇರಿ, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ, ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ತಾ.೨೫ ಹಾಗೂ ೨೬ ರಂದು ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.