ಸೋಮವಾರಪೇಟೆ, ಏ. ೨೪: ಡಾ. ಬಿ.ಆರ್. ಅಂಬೇಡ್ಕರ್‌ರವರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ದಲಿತ ಸಂಘಟನೆಯ ಮುಖಂಡ ಜಯಪ್ಪ ಹಾನಗಲ್ ಅಭಿಪ್ರಾಯಪಟ್ಟರು.

ಸಮೀಪದ ಯಡೂರು ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೩ನೇ ಜನ್ಮ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಬಾಬಾ ಸಾಹೇಬರ ಸಾಧನೆ ಅಸಾಧಾರಣವಾದುದು. ಅವರು ಬದುಕಿನುದ್ದಕ್ಕೂ ಅವಮಾನ, ಶೋಷಣೆಗಳಿಗೆ ಒಳಗಾಗಿ, ಅವುಗಳನ್ನು ಮೆಟ್ಟಿನಿಂತು ನೊಂದವರ ಬಾಳಿಗೆ ಬೆಳಕಾದವರು. ಶತಮಾನಗಳಿಂದ ನಿರ್ಲಕ್ಷö್ಯಕ್ಕೆ ಒಳಗಾಗಿದ್ದ ಜನರಿಗೆ ಗೌರವಯುತ ಬದುಕನ್ನು ಕಟ್ಟಿಕೊಟ್ಟವರು ಎಂದು ಹೇಳಿದರು. ಕಾಲೇಜಿನ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ದೇವರಾಜ್ ಮಾತನಾಡಿ, ಅಂಬೇಡ್ಕರ್‌ರವರು ಬರೆದಿರುವ ಸಂವಿಧಾನ ಇಡೀ ವಿಶ್ವದಲ್ಲಿಯೇ ಅತ್ಯಂತ ವಿಶಿಷ್ಟವಾದುದು. ಅದರಲ್ಲಿರುವ ರಾಜ್ಯ ನಿರ್ದೇಶಕ ತತ್ವಗಳು ಬಹಳ ಮಹತ್ವಪೂರ್ಣವಾದುವು. ಡಾ. ಅಂಬೇಡ್ಕರ್ ಒಂದು ಜನಾಂಗಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಸರ್ವಮಾನ್ಯ ವ್ಯಕ್ತಿ ಎಂದರು. ಇದೇ ಸಂದರ್ಭ ಜಯಪ್ಪ ಹಾನಗಲ್‌ರವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕೆ.ಹೆಚ್. ಧನಲಕ್ಷಿö್ಮ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಎಂ.ಎಸ್. ಶಿವಮೂರ್ತಿ, ವಾಣಿಜ್ಯ ವಿಭಾಗದ ಪ್ರೊ. ಎಂ.ಎA. ಸುನಿತ, ಪ್ರೊ. ಪಿ. ಪಾವನಿ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.