ವೀರಾಜಪೇಟೆ, ಏ. ೨೪: ಲೋಕಸಭೆ ಚುನಾವಣೆ ಹಿನ್ನೆಲೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವೀರಾಜಪೇಟೆಯಲ್ಲಿ ಭರ್ಜರಿ ರೋಡ್ ಶೋ ಹಾಗೂ ಬಿರುಸಿನ ಪ್ರಚಾರ ನಡೆಸಿದರು.

ರೋಡ್ ಶೋ ನಡೆಸಿದ ಮುಖಂಡರಿಗೆ ಮಂಗಳವಾದ್ಯ ಹಾಗೂ ಪುಷ್ಪವೃಷ್ಟಿಯೊಂದಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ರೋಡ್ ಶೋಗೆ ಮುನ್ನ ತೆಲುಗರ ಬೀದಿಯ ದಕ್ಷಿಣ ಮಾರಿಯಮ್ಮ ದೇವಾಲಯದಲ್ಲಿ ಅಭ್ಯರ್ಥಿ ಯದುವೀರ್ ಹಾಗೂ ಮುಖಂಡರು ವಿಶೇಷ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದರು.

ತೆಲುಗರ ಬೀದಿಯಿಂದ ಆರಂಭಗೊAಡ ರೋಡ್ ಶೋ ಜೈನರ ಬೀದಿ, ಎಫ್‌ಎಂಸಿ ರಸ್ತೆಯ ಮೂಲಕ ಗಡಿಯಾರ ಕಂಬ, ಮುಖ್ಯ ರಸ್ತೆ, ಖಾಸಗಿ ಬಸ್ ನಿಲ್ದಾಣದವರೆಗೆ ನಡೆಯಿತು. ಇದೇ ಸಂದರ್ಭ ಮಾಜಿ ಒಲಂಪಿಯನ್ ಕೂತಂಡ ಪೂಣಚ್ಚ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಬಹಿರಂಗ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾತನಾಡಿ, ಕೊಡಗು ಕೊಡಗಾಗಿಯೇ ಉಳಿಯಬೇಕು. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ವಿಕಸಿತ ಭಾರತದ ಪರಿಕಲ್ಪನೆ ಪಕ್ಷದ ಗೆಲುವಿಗೆ ಕಾರಣವಾಗಲಿದೆ. ವಿಕಸಿತ ಭಾರತದ ಸಂಕಲ್ಪದೊAದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕವಾಗಿ ಹೆಸರು ಬೆಳಗುವಂತೆ ಮಾಡಿದ್ದಾರೆ ಎಂದರು. ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಚಲನಚಿತ್ರ ನಟಿ ತಾರ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವೀರಾಜಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಸುವಿನ್ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಶಶಾಂಕ್ ಭೀಮಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ವೀರಾಜಪೇಟೆ ನಗರ ಅಧ್ಯಕ್ಷ ಟಿ.ಪಿ. ಕೃಷ್ಣ, ರಾಜ್ಯ ಶಿಸ್ತು ಸಮಿತಿ ಸದಸ್ಯೆ ರೀನಾ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷ ಕಿಲನ್ ಗಣಪತಿ, ವೀರಾಜಪೇಟೆ ಪುರಸಭೆ ಸದಸ್ಯರುಗಳಾದ ಅನಿತಾ, ಸುನಿತಾ, ಆಶಾ ಸುಬ್ಬಯ್ಯ, ಜಿಲ್ಲಾ ಎಸ್‌ಟಿ ಮೋರ್ಚಾದ ಅಧ್ಯಕ್ಷ ಪರಮೇಶ್ವರ, ವಿವಿಧ ಘಟಕಗಳ ಅಧ್ಯಕ್ಷರುಗಳು, ಬೂತ್ ಅಧ್ಯಕ್ಷರುಗಳು, ಜೆಡಿಎಸ್ ತಾಲೂಕು ಅಧ್ಯಕ್ಷ ಪಿ.ಎ. ಮಂಜುನಾಥ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.