ಚೆಯ್ಯಂಡಾಣೆ, ಏ. ೨೬: ಕೊಡಗಿನ ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಎಮ್ಮೆಮಾಡು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಸೂಫೀ ಶಹೀದ್ ವಲಿಯುಲ್ಲಾಹಿ,ಸಯ್ಯಿದ್ ಹಸನ್ ಸಖಾಫ್ ಹಳ್ರಮಿ ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸುವ ಉರೂಸ್ ಕಾರ್ಯಕ್ರಮಕ್ಕೆ ಶ್ರದ್ಧಾಭಕ್ತಿಯಿಂದ ಚಾಲನೆ ನೀಡಲಾಯಿತು.
ಎಮ್ಮೆಮಾಡುವಿನಲ್ಲಿ ಶುಕ್ರವಾರ ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನದೊಂದಿಗೆ ದರ್ಗಾಗೆ ತೆರಳಿ ಬೆಳ್ತಂಗಡಿಯ ಸಯ್ಯಿದ್ ಜೈನುಲ್ ಆಬಿದೀನ್ ಜಿಫ್ರಿ ತಂಙಳ್ ನೇತೃತ್ವದಲ್ಲಿ ಮಖಾಂ ಝಿಯಾರತ್ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಕಾರ್ಯಕ್ರಮದಲ್ಲಿ ಎಮ್ಮೆಮಾಡು ತಾಜಲ್ ಇಸ್ಲಾಂ ಮುಸ್ಲಿಂ ಜಮಾಅತ್ ವತಿಯಿಂದ ಊರಿನ ಎರಡು ಅನಾಥ ಬಡ ಹೆಣ್ಣುಮಕ್ಕಳ ವಿವಾಹ (ನಿಖಾ) ಕಾರ್ಯಕ್ರಮ ನಡೆಯಿತು.
ಜಮಾಅತ್ ಉಪಾಧ್ಯಕ್ಷ ಮೊಹಮ್ಮದ್ ಅಶ್ರಫ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಉರೂಸ್ ಸಮಾರಂಭವನ್ನು ವಿಜೃಂಭಣೆಯಿAದ ಆಚರಿಸಲು ತೀರ್ಮಾನಿಸಲಾಗಿದೆ. ಅದರಂತೆ ಇಂದು ಜುಮಾ ನಮಾಜಿನ ಬಳಿಕ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇಂದಿನಿAದ ಮೇ ೩ರ ವರೆಗೆ ಉರೂಸ್ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ತಾ. ೨೯ ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದ್ದು. ಕಾರ್ಯಕ್ರಮದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ನೇತಾರರು, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಜೆ ೪ ರಿಂದ ೬ ಗಂಟೆಯವರೆಗೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದೆ ಎಂದು ಹೇಳಿದರು.
ಈ ಸಂದರ್ಭ ಸಯ್ಯಿದ್ ಇಲ್ಯಾಸ್ ಅಲ್ ಹೈದರೂಸಿ ತಂಙಳ್, ಎಮ್ಮೆಮಾಡು ಮಸೀದಿಯ ಮುದರ್ರಿಸ್ ಹಂಝ ಸಖಾಫಿ, ಜಮಾಅತ್ ಮಾಜಿ ಅಧ್ಯಕ್ಷ ಹುಸೈನ್ ಸಖಾಫಿ, ಜಮಾಅತ್ ಕಾರ್ಯದರ್ಶಿ ಸಿ.ಕೆ. ಹಾರಿಸ್, ಸಹಕಾರ್ಯದರ್ಶಿ ಸಿ. ಎಸ್. ಇಬ್ರಾಹಿಂ, ಕೋಶಾಧಿಕಾರಿ ಎನ್.ಕೆ.ಆಲಿ, ಉಮ್ಮರ್ ಮುಸ್ಲಿಯಾರ್, ಚಕ್ಕೇರ ಮೂಸಾ ಹಾಜಿ, ಹಸೈನಾರ್ ಹಾಜಿ, ಹಂಸ ಮುಸ್ಲಿಯಾರ್, ಎಮ್ಮೆಮಾಡು ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು, ಊರಿನ ಹಿರಿಯರು ಮತ್ತಿತರ ಗಣ್ಯವ್ಯಕ್ತಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
-ಅಶ್ರಫ್