ಕುಶಾಲನಗರ, ಏ. ೨೬: ಕುಶಾಲನಗರ ಸಮೀಪ ಕೊಪ್ಪ ಗ್ರಾಮದಲ್ಲಿ ನಡೆದ ಬೀಗರ ಔತಣ ಸಮಾರಂಭದಲ್ಲಿ ಊಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಬಹುತೇಕ ಜನರು ಚೇತರಿಸಿಕೊಂಡಿದ್ದಾರೆ. ಇನ್ನುಳಿದಂತೆ ಕೆಲವರನ್ನು ಮಡಿಕೇರಿ ಪಿರಿಯಾಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಗುರುವಾರ ರಾತ್ರಿ ವೇಳೆ ಕುಶಾಲನಗರ ಮತ್ತು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆ ಮತ್ತು ಹಲವು ಖಾಸಗಿ ಆಸ್ಪತ್ರೆಗಳಲ್ಲಿ ೫೦೦ ಕ್ಕೂ ಅಧಿಕ ಮಂದಿ ಚಿಕಿತ್ಸೆ ಪಡೆದಿದ್ದರು.

ಗುರುವಾರ ಸಂಜೆ ೭ ಗಂಟೆಯಿAದ ಶುಕ್ರವಾರ ಮುಂಜಾನೆ ೪ ಗಂಟೆ ತನಕ ಕುಶಾಲನಗರ ಮತ್ತು ಸುತ್ತಮುತ್ತಲ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಂತಿ ಭೇದಿಗೆ ತುತ್ತಾದ ಮಂದಿ ಚಿಕಿತ್ಸೆ ಪಡೆದಿದ್ದಾರೆ.

ಕುಶಾಲನಗರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ೪೦೦ಕ್ಕೂ ಅಧಿಕ ಮಂದಿ ದಾಖಲಾಗಿದ್ದು, ಅವರುಗಳನ್ನು ಮಡಿಕೇರಿ, ಕುಶಾಲನಗರ ಮತ್ತು ಸಮೀಪದ ಪಿರಿಯಾಪಟ್ಟಣ ಆಸ್ಪತ್ರೆಗಳ ಆ್ಯಂಬ್ಯುಲೆನ್ಸ್ ವಾಹನಗಳಲ್ಲಿ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸೋಮವಾರಪೇಟೆ ತಾಲೂಕು ಆರೋಗ್ಯ ಅಧಿಕಾರಿ ಡಾ ಶ್ರೀನಿವಾಸ್ ತಿಳಿಸಿದ್ದಾರೆ. ಹಲವಾರು ಮಂದಿ ತಮ್ಮ ಸ್ವಂತ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗೆ ಇತರೆಡೆ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ, ಕೊಪ್ಪ ಸುತ್ತಮುತ್ತಲ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳು ಬಹುತೇಕ ಚೇತರಿಸಿಕೊಂಡಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಿರಿಯಾಪಟ್ಟಣ ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬAಧಿಸಿದAತೆ ಸಮಾರಂಭ ನಡೆದ ಖಾಸಗಿ ರೆಸಾರ್ಟ್ನಲ್ಲಿ ದೊರೆತ ಆಹಾರಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊಪ್ಪ ಗ್ರಾಮದ ದೊಡ್ಡ ಹೊಸೂರು ಭಾಗದ ಪಂಚಾಯಿತಿ ಸದಸ್ಯರ ಸಹೋದರನ ಪುತ್ರನ ವಿವಾಹ ಅಂಗವಾಗಿ ಕೊಪ್ಪ ಗ್ರಾಮದ ರೆಸಾರ್ಟ್ ಒಂದರಲ್ಲಿ ಬೀಗರೂಟ ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಆಗಮಿಸಿದ ೧೦೦೦ಕ್ಕೂ ಅಧಿಕ ಅತಿಥಿಗಳು ಆಹಾರ ಸೇವಿಸಿ ನಂತರ ವಾಂತಿಭೇದಿಗೆ ತುತ್ತಾಗಿದ್ದರು. ಮದುಮಕ್ಕಳು ಕೂಡ ವಾಂತಿಭೆೆÃದಿಗೆ ತುತ್ತಾಗಿ ಎರಡು ಕಡೆ ಕುಟುಂಬ ಸದಸ್ಯರು ಕೂಡ ಕುಶಾಲನಗರ, ಮಡಿಕೇರಿ, ಪಿರಿಯಾಪಟ್ಟಣ, ಕೊಪ್ಪ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೊಡಗು ಜಿಲ್ಲೆಯ ಬಹುತೇಕ ಆಸ್ಪತ್ರೆಗಳಿಂದ ವೈದ್ಯರು ಸಿಬ್ಬಂದಿಗಳು ಕುಶಾಲನಗರಕ್ಕೆ ಆಗಮಿಸಿ ಚಿಕಿತ್ಸೆ ನೀಡಿದರೆ, ಪಿರಿಯಾಪಟ್ಟಣ ತಾಲೂಕಿನ ವ್ಯಾಪ್ತಿಯ ಗ್ರಾಮಾಂತರ ವೈದ್ಯರುಗಳು ಕೂಡ ರಾತ್ರಿಯಿಡೀ ಚಿಕಿತ್ಸೆ ನೀಡುವುದರಲ್ಲಿ ತೊಡಗಿಸಿಕೊಂಡಿದ್ದರು. ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸತೀಶ್, ಮಡಿಕೇರಿ ಕ್ಷೇತ್ರ ಶಾಸಕ ಮಂತರ್ ಗೌಡ, ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಕುಶಾಲನಗರ ಕೊಪ್ಪ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ೨೦೦ಕ್ಕೂ ಅಧಿಕ ಮಂದಿ ಚಿಕಿತ್ಸೆಗೆ ದಾಖಲಾಗಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು, ಕುಶಾಲನಗರ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪಿರಿಯಾಪಟ್ಟಣ ಶಾಸಕರು ಹಾಗೂ ರಾಜ್ಯ ಪಶುಸಂಗೋಪನೆ ಇಲಾಖೆ ಸಚಿವರಾದ ಕೆ. ವೆಂಕಟೇಶ್ ಅವರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೆರಳಿದ್ದು ಅವರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಈ ಸಾಮೂಹಿಕ ಘಟನೆಗೆ ಕಾರಣ ಇನ್ನು ನಿಖರವಾಗಿ ತಿಳಿದು ಬಂದಿಲ್ಲ. ತನಿಖೆ ಮುಂದುವರಿದಿದೆ. -ಸಿಂಚು.