ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ ಅವರು ಮೈಸೂರು ಯಾದವಗಿರಿಯ ಸುನಂದಾ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಪತ್ನಿ ರೂಪಶ್ರೀ ಜತೆ ಮತ ಚಲಾಯಿಸಿದರು. ಜಿಲ್ಲೆಯಲ್ಲಿ ಹಾಲಿ-ಮಾಜಿ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಸೇರಿದಂತೆ ಪ್ರಮುಖ ಅಧಿಕಾರಿಗಳು ಮತ ಚಲಾಯಿಸಿದರು.ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರು ವೀರಾಜಪೇಟೆ ಮೀನುಪೇಟೆಯ ಮತಗಟ್ಟೆಯಲ್ಲಿ ಪತ್ನಿ ಪಾರ್ವತಿ ಜತೆ ಮತ ಚಲಾಯಿಸಿದರು. ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ಮಡಿಕೇರಿಯ ಜೂನಿಯರ್ ಕಾಲೇಜಿನ ಮತಗಟ್ಟೆಯಲ್ಲಿ ಪತ್ನಿ ಕುಂತಿ, ಪುತ್ರಿ ಯಶಿಕಾ ಜತೆ ಆಗಮಿಸಿ ಹಕ್ಕು ಚಲಾಯಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ ಅವರು ಮಡಿಕೇರಿ ಬ್ಲಾಸಂ ಶಾಲಾ ಮತಗಟ್ಟೆಯಲ್ಲಿ ಕುಟುಂಬದೊAದಿಗೆ ಮತ ಚಲಾಯಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಹರಿಹರದಲ್ಲಿ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಕ್ಕಂದೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರು ಕುಂಬೂರಿನ ಮತಗಟ್ಟೆಯಲ್ಲಿ ಮತಚಲಾಯಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಡಿಕೇರಿ ಎಂ.ವಿ. ಶಾಲೆ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಮಡಿಕೇರಿ ಸಂತ ಮೈಕಲರ ಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಮಡಿಕೇರಿ ತಾಲೂಕು ಪಂಚಾಯತ್ ಮತಗಟ್ಟೆ ಎಸ್.ಪಿ. ಕೆ. ರಾಮರಾಜನ್ ಅವರು ಸಂತ ಮೈಕಲರ ಶಾಲೆ, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ ಅವರುಗಳು ಬ್ಲಾಸಂ ಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಈ ಅಧಿಕಾರಿಗಳು ನಂತರ ರಾಜಾಸೀಟ್‌ನಲ್ಲಿ ಒಟ್ಟಾಗಿ ಕಲೆತು ಜನತೆಯನ್ನು ಮತದಾನಕ್ಕೂ ಪ್ರೇರೇಪಿಸಿದರು.