ಕುಶಾಲನಗರ, ಏ. ೨೬: ಇಂಜಿನಿಯರಿAಗ್ ಸೇರಿದಂತೆ ಇತರ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಈ ತಿಂಗಳ ೧೮ ಮತ್ತು ೧೯ ರಂದು ನಡೆದ ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಸಂಪೂರ್ಣ ಗೊಂದಲಕ್ಕೆ ಒಳಗಾಗಿದ್ದಾರೆ ತಕ್ಷಣ ಮತ್ತೆ ಮರು ಪರೀಕ್ಷೆ ಮಾಡುವಂತೆ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ಕೊಡಗು ಜಿಲ್ಲಾ ಸಂಚಾಲಕ ಎನ್.ಎನ್. ಶಂಭುಲಿAಗಪ್ಪ ಒತ್ತಾಯಿಸಿದ್ದಾರೆ.

ಅವರು ವಿವೇಕಾನಂದ ಪಿಯು ಕಾಲೇಜು ಕಚೇರಿಯಲ್ಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಈ ಸಾಲಿನಲ್ಲಿ ರಾಜ್ಯದ ಮೂರು ಲಕ್ಷದ ೪೯ ಸಾವಿರ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು, ಭೌತಶಾಸ್ತç, ರಸಾಯನಶಾಸ್ತç, ಜೀವಶಾಸ್ತç ಮತ್ತು ಗಣಿತಶಾಸ್ತç ವಿಷಯಗಳಲ್ಲಿ ಶೇ. ೫೩ ರಷ್ಟು ಹೊರಪಠ್ಯದ (ಔಟ್ ಆಫ್ ಸಿಲಬಸ್) ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೆ ಉತ್ತರ ಬರೆಯಲು ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಹೊರ ಪಠ್ಯದಿಂದ ಹೆಚ್ಚು ಪ್ರಶ್ನೆಗಳನ್ನು ಪರೀಕ್ಷೆಗೆ ನೀಡಲಾಗಿದ್ದು ಇದರಿಂದ ವಿದ್ಯಾರ್ಥಿಗಳು ಸಂಪೂರ್ಣ ಆತಂಕಕ್ಕೆ ಒಳಗಾಗಿದ್ದಾರೆ.

ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮತ್ತು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತವಾದ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾಗಿದೆ ಎಂದು ಶಂಭುಲಿAಗಪ್ಪ ಆಗ್ರಹಿಸಿದ್ದಾರೆ.

ಈ ಸಂದರ್ಭ ಮಾತನಾಡಿದ ವಿವೇಕಾನಂದ ಪಿಯು ಕಾಲೇಜು ಭೌತಶಾಸ್ತç ವಿಭಾಗದ ಮುಖ್ಯಸ್ಥ ವಿಕ್ರಂ, ಪಿಯು ಮಂಡಳಿ ಮತ್ತು ಪರೀಕ್ಷಾ ಮಂಡಳಿ ನಡುವೆ ಕಂಡು ಬಂದ ಮಾಹಿತಿಯ ಕೊರತೆ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗಿದೆ ಎಂದು ಆರೋಪಿಸಿರುವ ಅವರು ಪ್ರಶ್ನೆ ಪತ್ರಿಕೆಯಲ್ಲಿ ಕಂಡು ಬಂದ ಗೊತ್ತಿಲ್ಲದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯಬೇಕಾದ ಪರಿಸ್ಥಿತಿ ಬಂದಿರೋದು ನಿಜಕ್ಕೂ ವಿಷಾದನೀಯ ಎಂದರು.

ತಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಮಟ್ಟದ ಕೋಚಿಂಗ್ ಪಡೆದಿದ್ದು ಈ ಗೊಂದಲದಿAದ ಮಕ್ಕಳ ಭವಿಷ್ಯ ಏರುಪೇರಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭ ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸ್ವಾಮಿ, ರಸಾಯನಶಾಸ್ತç ವಿಭಾಗದ ಮುಖ್ಯಸ್ಥೆ ನಮಿತಾ, ಗಣಿತಶಾಸ್ತç ಮುಖ್ಯಸ್ಥೆ ಸೌಮ್ಯ ಇದ್ದರು.