ಸೋಮವಾರಪೇಟೆ, ಏ. ೨೮: ವಿದ್ಯಾರ್ಥಿಗಳು ತಮ್ಮ ಶಾಲಾ ಹಂತದಲ್ಲಿ ವಿದ್ಯಾರ್ಜನೆಯೊಂದಿಗೆ ಕ್ರೀಡೆಯತ್ತಲೂ ಆಸಕ್ತಿ ಬೆಳೆಸಿ ಕೊಂಡಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು.
ಪಟ್ಟಣದ ಜೂನಿಯರ್ ಕಾಲೇ ಜಿನ ಸಿಂಥೆಟಿಕ್ ಟರ್ಫ್ ಮೈದಾನ ದಲ್ಲಿ ಕಳೆದ ಒಂದು ತಿಂಗಳಿನಿAದ ಡಾಲ್ಪಿನ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯ ದಲ್ಲಿ ನಡೆದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತ ನಾಡಿದರು. ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಪ್ರಮುಖವಾದುದು. ತಾಯಂದಿರು ಮನಸು ಮಾಡಿದಲ್ಲಿ ಪ್ರತಿ ಮನೆಯಲ್ಲಿಯೂ ಉತ್ತಮ ಕ್ರೀಡಾಪಟುಗಳು ಹೊರಹೊಮ್ಮುತ್ತಾರೆ. ಇಲ್ಲವೇ ಉನ್ನತ ಉದ್ಯೋಗವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.
ರಾಜ್ಯ ಮತ್ತು ರಾಷ್ಟçಮಟ್ಟದ ಹಾಕಿ ಪಂದ್ಯಾವಳಿಯನ್ನು ನಡೆಸಿದರೆ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಹೆಚ್ಚು ಆಸಕ್ತಿ ಮೂಡುತ್ತದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಅಥವಾ ರಾಷ್ಟçಮಟ್ಟದ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲು ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ನೊಂದಿಗೆ ಕೈಜೋಡಿಸುವುದಾಗಿ ಈ ಸಂದರ್ಭ ಶಾಸಕರು ಭರವಸೆ ನೀಡಿದರು. ಭಾರತ ಹಾಕಿ ತಂಡದ ಮಾಜಿ ನಾಯಕ ಅರ್ಜುನ್ ಹಾಲಪ್ಪ ಮಾತನಾಡಿ, ತಮ್ಮ ಬಾಲ್ಯದ ದಿನಗಳಲ್ಲಿ ಟರ್ಫ್ ಮೈದಾನವಿರಲಿಲ್ಲ. ಆದರೆ ಈಗಿನ ಮಕ್ಕಳಿಗೆ ಅದರ ಅವಕಾಶ ಸಿಕ್ಕಿದೆ. ಹೀಗಾಗಿ ಹಾಕಿಯಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಡಾಲ್ಫಿನ್ಸ್ ಕ್ಲಬ್ನ ಅಧ್ಯಕ್ಷ ಅಶೋಕ್ ಮಾತನಾಡಿ, ೨೦೧೦ರಲ್ಲಿ ಕ್ಲಬ್ ಆರಂಭವಾದಾಗಿನಿAದ ಈವರೆಗೆ ೧೩೦ಕ್ಕೂ ಅಧಿಕ ಕ್ರೀಡಾಪಟುಗಳು ರಾಜ್ಯದ ವಿವಿಧ ಕ್ರೀಡಾ ಹಾಸ್ಟೆಲ್ಗಳಲ್ಲಿ ಸೇರಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಅಲ್ಲದೇ ಹತ್ತು ಹಲವು ರಾಜ್ಯ ಮತ್ತು ರಾಷ್ಟçಮಟ್ಟದ ಆಟಗಾರರನ್ನು ರೂಪಿಸಿರುವ ಕೀರ್ತಿ ತಮ್ಮ ಸಂಸ್ಥೆಗಿದೆ. ಕೋವಿಡ್ ದಿನಗಳನ್ನು ಹೊರತುಪಡಿಸಿ ಪ್ರತಿವರ್ಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಅಂರ್ರಾಷ್ಟಿçÃಯ ಹಾಕಿ ಆಟಗಾರ ವಿಕ್ರಂ ಕಾಂತ್, ಭಾರತ ಕಿರಿಯರ ಪುರುಷರ ಹಾಕಿ ತಂಡದ ಕೋಚ್ ಸಿ.ಬಿ.ಜನಾರ್ಧನ, ಆರ್ಮಿ ಹಾಗೂ ಸರ್ವಿಸಸ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಹಾಕಿ ಕೋಚ್ ಸಿ.ಬಿ. ದೇವದಾಸ್ ಅವರುಗಳು ಶಿಬಿರಾರ್ಥಿಗಳಿಗೆ ಹಲವು ಸಲಹೆಗಳನ್ನು ನೀಡಿದರು. ಈ ಸಂದರ್ಭ ಹಿರಿಯ ಹಾಕಿ ಆಟಗಾರರುಗಳಾದ ಬಿ.ಕೆ.ಹಾಲಪ್ಪ, ಲಕ್ಷಿö್ಮಕಾಂತ್, ಡಾಲ್ಫಿನ್ಸ್ ಕ್ಲಬ್ನ ಕಾರ್ಯದರ್ಶಿ ಕೆ.ಎಸ್.ಪ್ರಕಾಶ್ ಮತ್ತು ಪದಾಧಿಕಾರಿಗಳು ಇದ್ದರು. ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಶಾಸಕರು ಮತ್ತು ಅತಿಥಿಗಳು ವಿತರಿಸಿದರು.