ಮಡಿಕೇರಿ, ಏ. ೨೮: ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೧೧೮ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೧೦೩ ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. ೨೦೨೩-೨೪ನೇ ಆರ್ಥಿಕ ಸಾಲಿನಲ್ಲಿ ೩೧೪ ಪ್ರಕರಣಗಳು ದಾಖಲಾಗಿ ೨೯೯ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೧೫ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೩೫ ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೩-೨೪ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್. ಪ್ರಕಾಶ್ ಹಾಗೂ ಕಾರ್ಯದರ್ಶಿ ನಮಿತ ಆರ್ ರೈ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ೯೮೮೦೯೮೫೯೩೯ (ಕಚೇರಿ)ನ್ನು ಸಂಪರ್ಕಿಸಬಹುದು.