ಐಗೂರು, ಏ. ೨೯: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಹೊಸತೋಟ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಗೌತಮ್ ಶಿವಪ್ಪ, ಆದಿ ದ್ರಾವಿಡ ಸಂಘದ ಜಿಲ್ಲಾಧ್ಯಕ್ಷ ಕುಶಾಲಪ್ಪ, ಶಾಲಾ ಮಕ್ಕಳು ಮತ್ತು ಹೊಸತೋಟ ಗ್ರಾಮಸ್ಥರು ಭಾಗವಹಿಸಿದ್ದರು.