ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು, ಏ. ೨೯: ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್ (೧ ಜುಲೈ ೧೯೪೭ - ೨೯ ಏಪ್ರಿಲ್ ೨೦೨೪) ಇಂದು ವಿಧಿವಶರಾದರು. ಕರ್ನಾಟಕ ರಾಜ್ಯದ ರಾಜಕಾರಣಿಗಳಲ್ಲಿ ಅತ್ಯಂತಿ ಮುಂಚೂಣಿಯಲ್ಲಿದ್ದ ನಾಯಕ. ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ೧೯೯೯ ಮತ್ತು ೨೦೦೪ ರ ನಡುವೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದರು. ನಂತರ ೨೦೧೩ ಮತ್ತು ೨೦೧೬ ರ ನಡುವೆ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಅವರು ೧೯೮೦ ರಿಂದ ಆರು ಬಾರಿ ಚಾಮರಾಜನಗರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. Áಜಕೀಯ ಪ್ರವೇಶಿಸಿ ೫೦ ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ತಿಂಗಳು ಮಾರ್ಚ್ ೧೭ ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು.

ದೆಹಲಿ ಪೊಲೀಸರಿಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

ನವದೆಹಲಿ, ಏ. ೨೯: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ತಿರುಚಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದಕ್ಕೆ ಸಂಬAಧಿಸಿದAತೆ ಮೇ ೧ ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಎಕ್ಸ್ನಲ್ಲಿ ವೀಡಿಯೋ ಪೋಸ್ಟ್ ಮಾಡಿದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಸೇರಿದಂತೆ ಐವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಎಕ್ಸ್ನಲ್ಲಿ ನಕಲಿ ವೀಡಿಯೋವನ್ನು ಪೋಸ್ಟ್ ಮಾಡಲು ಬಳಸಲಾದ ಮೊಬೈಲ್ ಫೋನ್‌ನೊಂದಿಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ, ಅಮಿತ್ ಶಾ ಅವರ ತಿರುಚಿದ ವೀಡಿಯೋದ ಬಗ್ಗೆ ದೂರು ದಾಖಲಿಸಿದ ನಂತರ ದೆಹಲಿ ಪೊಲೀಸರ ವಿಶೇಷ ಘಟಕ ಭಾನುವಾರ ಎಫ್‌ಐಆರ್ ದಾಖಲಿಸಿದೆ.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುವುದನ್ನು ಕೇಂದ್ರ ಸರ್ಕಾರ ಏಕೆ ತಡೆಯಲಿಲ್ಲ?

ಶಿವಮೊಗ್ಗ, ಏ. ೨೯: ನೂರಾರು ಮಹಿಳೆಯರ ಜೊತೆ ರಾಸಲೀಲೆ ನಡೆಸಿದ ವಿಡಿಯೋಗಳು ಬಹಿರಂಗವಾದ ಬೆನ್ನಲ್ಲೇ ವಿದೇಶಕ್ಕೆ ಹಾರಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೇಶ ತೊರೆಯದಂತೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಕೆ ವಿಫಲವಾಯಿತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಪ್ರಚಾರಕ್ಕಾಗಿ ಇಂದು ಶಿವಮೊಗ್ಗಕ್ಕೆ ಆಗಮಿಸಿದ್ದ ಸಂತೋಷ್ ಲಾಡ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಯಾವುದೇ ವಿಳಂಬ ಮಾಡಿಲ್ಲ ಎಂದರು. ಯಾವುದೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಅವರ ವಿರುದ್ಧ ದೂರು ದಾಖಲಿಸಬೇಕು. ದೂರು ದಾಖಲಾದ ಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ಪ್ರಜ್ವಲ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಬಹುದಿತ್ತು. ಏರ್‌ಪೋರ್ಟ್ಗಳನ್ನು ಮ್ಯಾನೇಜ್ ಮಡ್ತಿರೋದ್ಯಾರು? ಪ್ರಜ್ವಲ್ ದೇಶದಿಂದ ಹಾರುವುದನ್ನು ಕೇಂದ್ರ ಏಕೆ ತಡೆಯಲಿಲ್ಲ? ಆರೋಪಿಯನ್ನು ಬಂಧಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದು ನನಗೆ ತಿಳಿದಿಲ್ಲ. ಆದರೆ, ನಮ್ಮ ಸರ್ಕಾರ ಎಸ್‌ಐಟಿ ರಚನೆಯಾಗುತ್ತಿದ್ದಂತೆ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು.

ಪ್ರಧಾನಿ ಮೋದಿ ಗಾಂಧಿ ಕುಟುಂಬವನ್ನು ನಿಂದಿಸುತ್ತಿದ್ದಾರೆ: ಖರ್ಗೆ

ಗುರುಮಠಕಲ್, ಏ. ೨೯: ಹೇಳಿಕೊಳ್ಳಲು ತಮ್ಮ ಯಾವುದೇ ಸಾಧನೆಯಿಲ್ಲದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಗಾಂಧಿ ಕುಟುಂಬವನ್ನು ನಿಂದಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. iÀiÁದಗಿರಿ ಜಿಲ್ಲೆಯ ಗುರುಮಿಠಕಲ್ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈಗ ನಡೆದಿರುವ ಲೋಕಸಭೆ ಚುನಾವಣೆಯ ಎರಡು ಹಂತಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ, ಇದು ಮೋದಿಯನ್ನು ಚಿಂತೆಗೀಡು ಮಾಡಿದೆ ಎಂದರು. ಮೋದಿ ಈ ದೇಶದಲ್ಲಿ ಹುಟ್ಟುವ ಮೊದಲು ಮತ್ತು ನಂತರ ಏನಾಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ, ಅವರು ಇಂದಿಗೂ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ನನ್ನನ್ನು ಸೇರಿ ನಿಂದಿಸುತ್ತಿದ್ದಾರೆ. ಏಕೆಂದರೆ, ಅವರಿಗೆ ಹೇಳಿಕೊಳ್ಳಲು ಏನೂ ಇಲ್ಲ' ಎಂದು ಅವರು ಹೇಳಿದರು. ಕಾಂಗ್ರೆಸ್ ಪ್ರತಿಯೊಬ್ಬರ ಆಸ್ತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ಹಂಚುತ್ತದೆ ಎಂದು ಹತಾಶೆಯಿಂದ ಮೋದಿ ಹೇಳುತ್ತಾರೆ. ಹೀಗೆಂದು ಸಂವಿಧಾನದಲ್ಲಿ ಬರೆದಿಲ್ಲ ಅಥವಾ ನಮ್ಮ ಪ್ರಣಾಳಿಕೆಯಲ್ಲಿ ಎಲ್ಲಿಯೂ ಉಲ್ಲೇಖಿಸಿಲ್ಲ. ಬಡವರಿಗೆ ಕೊಡಬೇಕಾದ್ದೆಲ್ಲವನ್ನೂ ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ, ಹಿಂದೂ-ಮುಸ್ಲಿA ಬಗ್ಗೆ ಯಾವತ್ತೂ ಮಾತನಾಡಿಲ್ಲ ಎಂದು ಹೇಳಿದರು.

ಅಗ್ರ ಆರ್ಥಿಕತೆಗಳಲ್ಲಿ ಭಾರತವನ್ನು ಒಂದಾಗಿಸುವುದು ಸಂಕಲ್ಪ- ಮೋದಿ

ಬಾಗಲಕೋಟೆ, ಏ. ೨೯: ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಬಿಜೆಪಿ ವಿಜಯ ಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನಾವು ಭಾರತವನ್ನು ಉತ್ಪಾದನಾ ಹಬ್, ಕೌಶಲ್ಯ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ. ಇದಕ್ಕೆ ದೂರದೃಷ್ಟಿ ಬೇಕು. ಮೋಜು, ಮಸ್ತಿ ಮಾಡುವವರಿಂದ ಇದನ್ನು ಮಾಡಲು ಸಾಧ್ಯವಿಲ್ಲ ಎಂದರು. ಕರ್ನಾಟಕ ಸರ್ಕಾರ ತನ್ನ ನೌಕರರಿಗೆ ಸಂಬಳ ನೀಡದ ದಿನ ದೂರದಲ್ಲಿ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ವಸೂಲಿ ಗ್ಯಾಂಗ್ ನಡೆಸುತ್ತಿದೆ. ೬೦ ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರು, ಒಂದೇ ಬಾರಿಗೆ ಬಡತನವನ್ನು ತೊಡೆದುಹಾಕುತ್ತೇವೆ ಎಂದು ಹೇಳುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮತಗಳನ್ನು ಪಡೆಯಲು ಭಯೋತ್ಪಾದನೆ ಮತ್ತು ಮೂಲಭೂತವಾದಿ ಮನಸ್ಥಿತಿವುಳ್ಳವರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ. ತನ್ನ ಪ್ರಣಾಳಿಕೆಯಲ್ಲಿ ಧರ್ಮ ಆಧಾರಿತ ಮೀಸಲಾತಿ ನೀಡುವ ಸಂದೇಶ ನೀಡಿದೆ ಎಂದು ಆರೋಪಿಸಿದರು. ಚುನಾವಣೆಯಲ್ಲಿ ಸೋತವರು ತಂತ್ರಜ್ಞಾನ ಬಳಸಿ, ನಕಲಿ ವಿಡಿಯೋ ಸೃಷ್ಟಿಸಿ, ಂI ಮೂಲಕ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ನಕಲಿ ವಿಡಿಯೋಗಳ ಬಗ್ಗೆ ಪೊಲೀಸರು ಮತ್ತು ಬಿಜೆಪಿ ಪಕ್ಷದವರಿಗೆ ಮಾಹಿತಿ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಚಿತ್ರದುರ್ಗ, ಏ. ೨೯: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ. ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಕಳೆದ ಮಂಗಳವಾರ ರದ್ದು ಮಾಡಿತ್ತು ಮತ್ತು ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾ ಶ್ರೀ ಇಂದು ಚಿತ್ರದುರ್ಗದ ೧ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಶರಣಾಗಿದ್ದಾರೆ. ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮೇ ೨೭ಕ್ಕೆ ಮುಂದಿನ ವಿಚಾರಣೆ ನಿಗದಿಗೊಳಿಸಿ ಆದೇಶ ಹೊರಡಿಸಿದೆ.