ಮಡಿಕೇರಿ, ಏ. ೩೦ : ಗಾಂಧಿ ಯುವಕ ಸಂಘ ಕಂಡಕರೆ ಮತ್ತು ಸರ್ವ ಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಜೂ.೯ ರಂದು ಸರ್ವ ಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ಕಾರ್ಯ ಕ್ರಮ ಕಂಡಕರೆಯಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೨೩ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕಾರಣಾಂತರಗಳಿAದ ಮುಂದೂಡಲಾಗಿತ್ತು. ಇದೀಗ ಜೂನ್ ೯ ರಂದು ಕಂಡಕರೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.