ಕುಶಾಲನಗರ, ಏ. ೩೦: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕಾನಿಕ್ ವೃತ್ತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕುಶಾಲನಗರ ಬೈಕ್ ಮೆಕಾನಿಕ್ ಸಂಘದಿAದ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕುಶಾಲನಗರ ಬೈಕ್ ಮೆಕಾನಿಕ್ ಸಂಘದ ಅಧ್ಯಕ್ಷ ಭರತ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಈ ರಿಯಾಲಿಟಿ ಶೋ ಜಡ್ಜ್ಗಳು ಹಾಗೂ ಸ್ಪರ್ಧಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಚಂದ್ರ, ಖಜಾಂಚಿ ದರ್ಶನ್, ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ಇದ್ದರು.