ವೀರಾಜಪೇಟೆ, ಏ. ೩೦: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ. ಘಟಕ ಮತ್ತು ಕನ್ನಡ ವಿಭಾಗದ ಸಹಯೋಗದಲ್ಲಿ ಕಾಲೇಜಿ ನಲ್ಲಿ ಸಂಶೋಧನೆಯ ಕುರಿತು ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಹುಣಸೂರು ಮಹಿಳಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಪ್ರಸನ್ನ ಕೆ.ಪಿ. ಸಂಶೋಧನೆಯ ಉದ್ದೇಶ ಮತ್ತು ಸ್ವರೂಪದ ಬಗ್ಗೆ ಉಪನ್ಯಾಸ ನೀಡಿದರು. ಸಂಶೋಧನೆ ಎಂದರೇ ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ, ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಕೊಂಡರೆ ಸಂಶೋಧನೆಯಾಗುತ್ತದೆ. ಮನುಷ್ಯನ ಕ್ರಿಯಾಶೀಲ ಮನಸ್ಸು ಸಂಶೋಧನೆಗೆ ಪ್ರೇರಣೆಯಾಗಿದೆ ಎಂದರು. ಕಾರ್ಯðಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಸವರಾಜು ಕೆ. ವಹಿಸಿದ್ದರು. ಈ ಸಂದರ್ಭ ಪ್ರಾಧ್ಯಾಪಕರಾದ ರಘುರಾಜ್, ಡಾ. ಪ್ರಭು ಇತರ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.