ಶನಿವಾರಸಂತೆ, ಏ. ೩೦: ಸಮೀಪದ ಅಂಕನಹಳ್ಳಿಯ ಶ್ರೀ ತಪೋವನ ಕ್ಷೇತ್ರ ಮನೆಹಳ್ಳಿಮಠದಲ್ಲಿ ೩ ದಿವಸಗಳ ಶ್ರೀಗುರುಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆÀ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು. ತಾ.೨೩ ರಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ, ಶ್ರಿ Ãಮಹಾಂತ ಶಿವಲಿಂಗ ಸ್ವಾಮೀಜಿಯವರಿಗೆ ಕಂಕಣಧಾರಣೆಯಾಗಿ, ಶ್ರೀ ಗುರುಸಿದ್ಧವೀರೇಶ್ವರ ಸ್ವಾಮಿಗೆ ಮಹಾಮಂಗಳಾರತಿಯಾಗಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ತಾ.೨೪ ರಂದು ಬೆಳಿಗ್ಗೆ ಶ್ರೀ ಮದನಾಧಿ ಅನಘ ನಿರಂಜನ ಜಂಗಮ ಪೂಜೆ ನಡೆಯಿತು. ಸಂಜೆ ಶ್ರೀ ಸ್ವಾಮಿಯವರ ಸೂರ್ಯ ಮಂಡಲೋತ್ಸವ ನೆರವೇರಿತು. ಶ್ರದ್ಧಾಭಕ್ತಿಯಿಂದ ಪಾಲ್ಗೊಂಡ ಭಕ್ತರಿಗೆ ದಾಸೋಹ ಏರ್ಪಡಿಸಲಾಗಿತ್ತು. ಚೈತ್ರ ಬಹುಳ ಬಿದಿಗೆ ತಾ.೨೫ ರಂದು ಬೆಳಿಗ್ಗೆ ೫ ಗಂಟೆಯಿAದ ಶ್ರೀಕ್ಷೇತ್ರನಾಥ ವೀರಭದ್ರೇಶ್ವರ ಸ್ವಾಮಿಯ ಪ್ರೀತ್ಯರ್ಥ ದುಗ್ಗಳ ಹಾಗೂ ಅಗ್ನಿಕೊಂಡೋತ್ಸವ ಸೇವೆ ನೆರವೇರಿತು ೯ ಗಂಟೆಗೆ ಶ್ರೀ ಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.
೧೧ ಗಂಟೆಗೆ ಶ್ರೀಪ್ರಸನ್ನ ತಪೋವನೇಶ್ವರಿ ಅಮ್ಮನವರ ಪ್ರೀತ್ಯರ್ಥ ಮುತ್ತೆöÊದೆ ಸೇವೆಯಾಗಿ ಸುಮಂಗಲಿಯರಿಗೆ ಮಡಿಲು ತುಂಬುವ ಕಾರ್ಯಕ್ರಮದಲ್ಲಿ ಮಹಿಳಾ ಭಕ್ತರು ಪಾಲ್ಗೊಂಡು ಮಡಿಲು ತುಂಬಿಸಿಕೊAಡರು. ನಂತರ ದಾಸೋಹ ಸೇವೆ ನಡೆಯಿತು. ಮಧ್ಯಾಹ್ನ ಶ್ರೀ ಸ್ವಾಮಿಯವರ ದೊಡ್ಡ ಚಂದ್ರಮAಡಲೋತ್ಸವ ನೆರವೇರಿತು. ಅಂದು ಸಂಜೆ ೫.೩೦ ಕ್ಕೆ ಪ್ರಾಕಾರ ಪಲ್ಲಕ್ಕಿ ಉತ್ಸವದೊಂದಿಗೆ ಶ್ರೀ ಸ್ವಾಮಿಯವರು ರಥೋತ್ಸವಕ್ಕೆ ಆಗಮಿಸಿದರು. ೬.೩೦ರಿಂದ ಮಂಗಳವಾದ್ಯ ಗೋಷ್ಠಿ, ವೀರಗಾಸೆ ನೃತ್ಯ ಹಾಗೂ ಮಹಿಳೆಯರ ಕುಂಭ ಕಳಶದೊಂದಿಗೆ ಶ್ರೀ ಸ್ವಾಮಿಯವರ ಮಹಾ ರಥೋತ್ಸವ ಆರಂಭವಾಯಿತು.
ತಪೋವನ ಕ್ಷೇತ್ರಾಧ್ಯಕ್ಷ ಮಹಾಂತ ಶಿವಲಿಂಗ ಸ್ವಾಮೀಜಿ, ಅರಮೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಮಾದ್ರೆ ಮುದ್ದಿನಕಟ್ಟೆ ಮಠಾಧೀಶ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಬಸವಪಟ್ಟಣ ತೋಟಂದಾರ್ಯ ಮಠಾಧೀಶ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ, ಶಿಡಿಗಳಲೆ ಮಠಾಧೀಶ ಶಿವಲಿಂಗ ಸ್ವಾಮೀಜಿ, ಕಲ್ಲುಮಠಾಧೀಶ ಮಹಾಂತ ಸ್ವಾಮೀಜಿ, ಚಂಗಡಹಳ್ಳಿ ಮಠಾಧೀಶ ಬಸವ ಮಹಾಂತ ಸ್ವಾಮೀಜಿ, ತೊರೆನೂರು ವಿರಕ್ತ ಮಠಾಧೀಶ ಮಲ್ಲೇಶ ಸ್ವಾಮೀಜಿ, ಮಠದ ಕಾರ್ಯಕ್ರಮ ಆಯೋಜಕ ಎಸ್. ಮಹೇಶ್ ಹಾಗೂ ಕ್ಷೇತ್ರದ ಸ್ವಯಂಸೇವಕರು ಉಪಸ್ಥಿತರಿದ್ದರು. - ನಯನತಾರಾ