ಸುAಟಿಕೊಪ್ಪ, ಮೇ ೨: ದೇವಾಲಯಗಳಲ್ಲಿ ನಡೆಯುವ ನಿತ್ಯ ಪೂಜಾ ಕಾರ್ಯಗಳಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರೆ ಮಾತ್ರ ದೇವಾಲಯದ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಹೇಳಿದರು.

೭ನೇ ಹೊಸಕೋಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತ ಸೆಬಾಸ್ಟೀನ್ ಅವರ ರೋಮನ್ ಕ್ಯಾಥೋಲಿಕ್ ದೇವಾಲಯದ ಲೋಕಾರ್ಪಣಾ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂದವಾದ ದೇವಾಲಯ ನಿರ್ಮಿಸಿದರೆ ಮಾತ್ರ ಸಾಲದು ಭಾನುವಾರ ಮತ್ತು ಇತರ ದಿನಗಳಲ್ಲಿ ನಡೆಯುವ ಪೂಜಾ ವಿಧಿವಿಧಾನಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಾರ್ಥನೆ ಹಾಗೂ ದೇವಾಲಯದ ಕಾರ್ಯ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊ ಳ್ಳುವಂತಾಗಬೇಕೆAದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಮಾರ್‌ಲಾರೆನ್ಸ್ ಮುಕುಜಿ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಬೆಳ್ತಂಗಡಿ ಧರ್ಮಕ್ಷೇತ್ರದ ಜೋಸೆಫ್ ವಲಿಯಪರಂಬಿಲ್, ಸಿದ್ದಾಪುರ ಸಂತ ಮೇರಿ ಚರ್ಚ್ನ ವಲಯ ಧರ್ಮಗುರು ಜೋಜಿ ವಡಕ್ಕಿವೀಟಿ, ಮೈಸೂರಿನ ಸೆಂಟ್ ಪೌಲಸ್ ಪ್ರಾಂತ್ಯದ ಧರ್ಮಗುರು ಆಗಸ್ಟೀನ್ ಪಾಯಂಪಳ್ಳಿ, ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ. ಜೋಸೆಫ್, ದೇವಾಲಯದ ಧರ್ಮ ಗುರುಗಳಾದ ಸೆಬಾಸ್ಟೀನ್ ಪೂವತ್ತಿ ಗಲ್, ಡಾ. ತ್ರೇಸಾ ಪಾಲಕ್ಕಾಡ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ವಿ.ಎಸ್. ಶಾಜಿ ಉಪಸ್ಥಿತರಿದ್ದರು.

ಈ ಸಂದರ್ಭ ದೇವಾಲಯದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಸಹಕರಿಸಿದ ೨೦ ಮಂದಿಯನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾ ಯಿತು. ಇ.ಬಿ. ಜೋಸೆಫ್ ಸ್ವಾಗತಿಸಿ, ಜೋಶ್‌ಲಿ ಹಾಗೂ ರಿನ್ಸಿಲಿ ಪ್ರಾನ್ಸಿಸ್ ನಿರೂಪಿಸಿದರು.