ಮಡಿಕೇರಿ, ಮೇ ೩: ಗಾಂಧಿ ಯುವಕ ಸಂಘ ಕಂಡಕರೆ ಇದರ ವತಿಯಿಂದ ವರ್ಷಂಪ್ರತಿ ನೀಡಲಾಗುತ್ತಿರುವ ೨೦೨೩-೨೪ನೇ ಸಾಲಿನ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿಗೆ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಇ ತೀರ್ಥಕುಮಾರ್ (ಮೂಡಳ್ಳಿ ರವಿ), ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ಕೆ.ಎ ಅಬ್ದುಲ್ ರಜಾಕ್ ಬಜೆಗುಂಡಿ, ಕೂಡಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್ ಕುಶಾಲನಗರ ಮತ್ತು ಸಮಾಜ ಸೇವಕಿ ಶಹರಬಾನು ಚೆಟ್ಟಳ್ಳಿ ಭಾಜನರಾಗಿದ್ದಾರೆ ಎಂದು ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ. ಜೂನ್ ೯ರಂದು ಕಂಡಕರೆಯಲ್ಲಿ ನಡೆಯಲಿರುವ ಸರ್ವಧರ್ಮೀಯ ಸಾಮೂಹಿಕ ವಿವಾಹ ಮೊದಲ ಹಂತದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದೆಂದು ತಿಳಿಸಿದ್ದಾರೆ.