ಕುಶಾಲನಗರ, ಮೇ ೨: ಜೀವನದಿ ಕಾವೇರಿ ಮೂಲ ಸ್ಥಾನದಲ್ಲಿಯೇ ಬತ್ತಿ ಹೋಗುವ ಮೂಲಕ ಹರಿವು ಸ್ಥಗಿತಗೊಂಡಿ ರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಆತಂಕ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ೧೫೮ನೇ ಮಹಾ ಆರತಿ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಬಾರಿ ಕಾವೇರಿಯ ಮೂಲ ಸ್ಥಾನದಲ್ಲಿಯೇ ಕಾವೇರಿ ಸಂಪೂರ್ಣ ಬತ್ತಿ ಹೋಗಿದ್ದು, ಕಳೆದ ಒಂದು ತಿಂಗಳಿನಿAದ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿದೆ. ಜಲಚರಗಳು ಸಂಪೂರ್ಣ ನಾಶಗೊಂಡಿವೆ. ಜೊತೆಗೆ ನದಿ ತಟದ ಗ್ರಾಮ ಪಟ್ಟಣಗಳ ಜನತೆಗೆ ಕುಡಿಯುವ ನೀರಿಗೆ ಸಮಸ್ಯೆ ತಲೆದೋರಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಈ ಬಗ್ಗೆ ವಾಸ್ತವ ಸ್ಥಿತಿ ಅಧ್ಯಯನ ಮಾಡುವುದರೊಂದಿಗೆ ಕಾವೇರಿಯ ಸಂರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದರು.
ಆರತಿ ಕಾರ್ಯಕ್ರಮ ಅಂಗವಾಗಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಕುಂಕುಮಾರ್ಚನೆ, ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು.
ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಅಗತ್ಯವಾದ ಗಂಗಾಜಲಕ್ಕೆ ನದಿ ತಟದ ಕೊಳವೆಬಾವಿಯನ್ನು ಆಶ್ರಯಿಸ ಬೇಕಾದ ಪರಿಸ್ಥಿತಿ ಈ ಬಾರಿ ಸೃಷ್ಟಿಯಾಗಿತ್ತು.
ಕಾರ್ಯಕ್ರಮದಲ್ಲಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಬಳಪಂಡ ಪೊನ್ನು, ಚೈತನ್ಯ, ಮತ್ತಿತರರು ಇದ್ದರು.